IPL 2026 Qualifier 1: ಕ್ವಾಲಿಫೈಯರ್ 1 ಪಂದ್ಯಕ್ಕೆ ಜಿಟಿ ವಿರುದ್ಧ ಆರ್‌ಸಿಬಿ ಪ್ಲೇಯಿಂಗ್ 11

IPL 2026 Qualifier 1 RCB Squad: ಐಪಿಎಲ್ 2026ರ ಹಬ್ಬ ಮುಕ್ತಾಯದ ಹಂತದಲ್ಲಿದೆ. ಮೇ 26(ಮಂಗಳವಾರ) ಧರ್ಮಶಾಲಾದಲ್ಲಿ ನಡೆಯುವ ಮೊದಲ ಎಲಿಮಿನೇಟರ್ ರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿಯು ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಹಾಗಾದ್ರೆ ಸಂಭಾವ್ಯ ಪ್ಲೇಯಿಂಗ್ 11 ಹಾಗೂ ಸಂಪೂರ್ಣ ತಂಡದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಈ ಪಂದ್ಯದಲ್ಲಿ ಗೆದ್ದ ತಂಡವು ನೇರವಾಗಿ ಫೈನಲ್‌ಗೆ ಪ್ರವೇಶ ಪಡೆಯಲಿದೆ. ಸೋತ ತಂಡಕ್ಕೆ ಎರಡನೇ ಕ್ವಾಲಿಫೈಯರ್‌ನಲ್ಲಿ ಆಡಲು ಮತ್ತೊಂದು ಅವಕಾಶ ಇರಲಿದೆ. ಸತತ ಎರಡನೇ ಬಾರಿಗೆ ಕಿರೀಟ ಮುಡಿಗೇರಿಸಿಕೊಳ್ಳುವ ತವಕದಲ್ಲಿರುವ ಆರ್‌ಸಿಬಿ ಮತ್ತು ಮಾಜಿ ಚಾಂಪಿಯನ್ ಗುಜರಾತ್ ನಡುವಿನ ಈ ಕಾದಾಟ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ.

RCB vs Gujarat Titans Qualifier 1 IPL 2026 Predicted Playing XI And Match Preview Know details

ಈ ಪಂದ್ಯದಲ್ಲಿ ಸೋತ ತಂಡವು ಟೂರ್ನಿಯಿಂದ ಹೊರಬೀಳುವುದಿಲ್ಲ. ಬದಲಿಗೆ ಶುಕ್ರವಾರ ಮುಲ್ಲನ್‌ಪುರದಲ್ಲಿ ನಡೆಯಲಿರುವ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಎಲಿಮಿನೇಟರ್ ಪಂದ್ಯದ ವಿಜೇತರೊಂದಿಗೆ ಕ್ವಾಲಿಫೈಯರ್ 2ನಲ್ಲಿ ಸೆಣಸಬೇಕಾಗುತ್ತದೆ. ಆ ಪಂದ್ಯದಲ್ಲಿ ಗೆದ್ದರೆ ಮಾತ್ರ ಫೈನಲ್ ತಲುಪುವ ಎರಡನೇ ಅವಕಾಶ ಸಿಗಲಿದೆ.

ಉತ್ತಮ ಫಾರ್ಮ್‌ನಲ್ಲಿರುವ ಎರಡೂ ತಂಡಗಳು

ಆರ್‌ಸಿಬಿ ಮತ್ತು ಗುಜರಾತ್ ಟೈಟಾನ್ಸ್ ಎರಡೂ ತಂಡಗಳು ಈ ಸೀಸನ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಾ ಬಂದಿವೆ. ಎರಡೂ ತಂಡಗಳು ಲೀಗ್ ಹಂತದಲ್ಲಿ ತಲಾ 18 ಅಂಕಗಳನ್ನು ಗಳಿಸುವ ಮೂಲಕ ಅಂಕಪಟ್ಟಿಯಲ್ಲಿ ಅಗ್ರ ಎರಡರಲ್ಲಿ ಸ್ಥಾನ ಪಡೆದಿವೆ. ಆದರೆ ಉತ್ತಮ ನೆಟ್ ರನ್ ರೇಟ್ ಆಧಾರದ ಮೇಲೆ ಆರ್‌ಸಿಬಿ ಮೊದಲ ಸ್ಥಾನವನ್ನು ಅಲಂಕರಿಸಿದರೆ, ಗುಜರಾತ್ ಟೈಟಾನ್ಸ್ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಹೀಗಾಗಿ ಈ ಬಾರಿಯ ಪ್ಲೇ-ಆಫ್‌ನಲ್ಲಿ ಅಗ್ರ ಎರಡು ಬಲಿಷ್ಠ ತಂಡಗಳು ನಡುವೆ ಮೊದಲ ಕ್ವಾಲಿಫೈಯರ್ ಸಮರ ನಡೆಯಲಿದೆ.

ಆರ್‌ಸಿಬಿ ಬ್ಯಾಟಿಂಗ್, ಬೌಲಿಂಗ್ ವಿಭಾಗ

ಆರ್‌ಸಿಬಿ ತಂಡಕ್ಕೆ ಈಗ ಸಿಕ್ಕಿರುವ ಅತಿದೊಡ್ಡ ಬಲವೆಂದರೆ ಫಿಲ್ ಸಾಲ್ಟ್ ಅವರ ಪುನರಾಗಮನ. ಬೆರಳಿನ ಗಾಯದ ಕಾರಣದಿಂದಾಗಿ ಅವರು ಲೀಗ್ ಹಂತದ ಮಧ್ಯದಿಂದಲೂ ಕೊನೆವರೆಗೂ ಹೊರಗುಳಿದಿದ್ದರು. ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಸಾಲ್ಟ್‌ ಸೇರಿದಂತೆ ವಿರಾಟ್ ಕೊಹ್ಲಿ, ವೆಂಕಟೇಶ್ ಅಯ್ಯರ್, ರಜತ್ ಪಾಟಿದಾರ್ ಮತ್ತು ಟಿಮ್ ಡೇವಿಡ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಜೊತೆಗೆ ಕೃನಾಲ್ ಪಾಂಡ್ಯ ಕೂಡ ನಾನೇನು ಕಡಿಮೆಯಿಲ್ಲ ಎನ್ನುವ ರೀತಿಯಲ್ಲಿ ರನ್‌ ಮಳೆ ಸುರಿಸಲು ಸಜ್ಜಾಗಿದ್ದಾರೆ.

ಬೌಲಿಂಗ್ ವಿಷಯಕ್ಕೆ ಬಂದರೆ ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್ ಮತ್ತು ರಸಿಖ್ ಸಲಾಮ್ ದಾರ್ ನಿರಂತರವಾಗಿ ವಿಕೆಟ್ ಪಡೆಯುತ್ತಾ ಮಿಂಚುತ್ತಿದ್ದಾರೆ. ಆದರೆ ಸ್ಪಿನ್ನರ್‌ಗಳ ಸ್ಥಿರತೆಯ ಕೊರತೆಯು ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ತಂಡಕ್ಕೆ ಇರುವ ಏಕೈಕ ಸವಾಲಿನ ವಿಷಯಾಗಿದೆ.

ಜಿಟಿ ಬ್ಯಾಟಿಂಗ್, ಬೌಲಿಂಗ್ ವಿಭಾಗ

ಮತ್ತೊಂದೆಡೆ ಗುಜರಾತ್ ಟೈಟಾನ್ಸ್ ಕೂಡ ಅತ್ಯುತ್ತಮ ಪ್ರದರ್ಶನ ನೀಡುತ್ತಾ ಬಂದಿದೆ. ತಂಡದ ಅಗ್ರ ಕ್ರಮಾಂಕದ ಬ್ಯಾಟರ್‌ಗಳಾದ ಸಾಯಿ ಸುದರ್ಶನ್, ಶುಭ್‌ಮನ್ ಗಿಲ್ ಮತ್ತು ಜೋಸ್ ಬಟ್ಲರ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಜೊತೆಗೆ ವಾಷಿಂಗ್ಟನ್ ಸುಂದರ್ ಈಗ ಬ್ಯಾಟಿಂಗ್‌ನಲ್ಲಿಯೂ ಉತ್ತಮ ಕೊಡುಗೆ ನೀಡುತ್ತಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಆದರೆ ತಂಡದ ಮಧ್ಯಮ ಕ್ರಮಾಂಕದ ಸಮಸ್ಯೆ ಮಾತ್ರ ಮುಂದುವರಿದಿದೆ. ಇದು ಗುಜರಾತ್ ತಂಡಕ್ಕೆ ತಲೆನೋವಾಗಿ ಪರಿಣಮಿಸಿದೆ.

ಬೌಲಿಂಗ್ ವಿಭಾಗದಲ್ಲಿ ಗುಜರಾತ್ ಟೈಟಾನ್ಸ್ ಇತರ ಯಾವುದೇ ತಂಡಗಳಿಗಿಂತ ಹೆಚ್ಚು ಶಕ್ತಿಶಾಲಿಯಾಗಿ ಕಾಣಿಸಿಕೊಂಡಿದೆ. ಮೊಹಮ್ಮದ್ ಸಿರಾಜ್ ಮತ್ತು ಕಗಿಸೊ ರಬಾಡ ಪವರ್‌ಪ್ಲೇ ಅವಧಿಯಲ್ಲಿ ಪ್ರತಿ ಪಂದ್ಯದಲ್ಲೂ ವಿಕೆಟ್ ಕಬಳಿಸುತ್ತಾ ಬಂದಿದ್ದಾರೆ. ಮಧ್ಯಮ ಓವರ್‌ಗಳಲ್ಲಿ ಮಾನವ್ ಸುತಾರ್, ರಶೀದ್ ಖಾನ್ ಮತ್ತು ಜೇಸನ್ ಹೋಲ್ಡರ್ ಎದುರಾಳಿ ಬ್ಯಾಟರ್‌ಗಳನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆಯೇ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲೂ ಕೂಡ ಇವರ ಮೇಲೆ ಹೆಚ್ಚಿನ ಭರವಸೆ ಇಡಲಾಗಿದೆ.

ಆರ್‌ಸಿಬಿ - ಜಿಟಿ ಮುಖಾಮುಖಿ ದಾಖಲೆ

* ಒಟ್ಟು ಆಡಿದ ಪಂದ್ಯಗಳು: 8

* ಆರ್‌ಸಿಬಿ ಗೆಲುವು: 4

* ಗುಜರಾತ್ ಟೈಟಾನ್ಸ್ ಗೆಲುವು: 4


ಆರ್‌ಸಿಬಿ ಹಾಗೂ ಜಿಟಿ ಸಂಭಾವ್ಯ ಪ್ಲೇಯಿಂಗ್ 11

ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11: ವಿರಾಟ್ ಕೊಹ್ಲಿ, ವೆಂಕಟೇಶ್ ಅಯ್ಯರ್ / ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಕೃನಾಲ್ ಪಾಂಡ್ಯ, ದೇವದತ್ ಪಡಿಕ್ಕಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಸುಯಶ್ ಶರ್ಮಾ, ರಸಿಖ್ ಸಲಾಮ್ ದಾರ್. ಇಂಪ್ಯಾಕ್ಟ್ ಪ್ಲೇಯರ್ಸ್‌: ಟಿಮ್ ಡೇವಿಡ್, ಕನಿಷ್ಕ್ ಚೌಹಾಣ್, ಸ್ವಪ್ನಿಲ್ ಸಿಂಗ್, ಅಭಿನಂದನ್ ಸಿಂಗ್, ಜೋರ್ಡಾನ್ ಕಾಕ್ಸ್.

ಗುಜರಾತ್ ಟೈಟಾನ್ಸ್ ಸಂಭಾವ್ಯ ಪ್ಲೇಯಿಂಗ್ 11: ಶುಭ್‌ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜೇಸನ್ ಹೋಲ್ಡರ್, ವಾಷಿಂಗ್ಟನ್ ಸುಂದರ್, ನಿಶಾಂತ್ ಸಿಂಧು, ರಶೀದ್ ಖಾನ್, ಅರ್ಷದ್ ಖಾನ್, ಕಗಿಸೊ ರಬಾಡ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್. ಇಂಪ್ಯಾಕ್ಟ್ ಪ್ಲೇಯರ್: ರಾಹುಲ್ ತೆವಾಟಿಯಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+