RCB Vs KKR: ತವರಿನಲ್ಲಿ ಆರ್‌ಸಿಬಿಗೆ ಮುಖಭಂಗ; ಗೆದ್ದು ಬೀಗಿದ ಕೆಕೆಆರ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024ರ ಆವೃತ್ತಿಯಲ್ಲಿ ತವರಿನ ತಂಡಗಳ ಗೆಲುವಿನ ಸರಣಿ ಅಂತ್ಯವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ದ ಕೋಲ್ಕತ್ತಾ ನೈಟ್ ರೈಡರ್ಸ್ 7 ವಿಕೆಟ್‌ಗಳ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಕೆಕೆಆರ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 182 ರನ್ ಕಲೆಹಾಕಿತು.

ನಾಯಕ ಫಾಫ್ ಡುಪ್ಲೆಸಿಸ್ ಮತ್ತೊಮ್ಮೆ ರನ್ ಗಳಿಸುವಲ್ಲಿ ವಿಫಲವಾದರು. 6 ಎಸೆತಗಳಲ್ಲಿ ಕೇವಲ 8 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ವಿರಾಟ್ ಕೊಹ್ಲಿ ಮಾತ್ರ ತಮ್ಮ ಅತ್ಯುತ್ತಮ ಫಾರ್ಮ್ ಅನ್ನು ಮುಂದುವರೆಸಿದರು. 59 ಎಸೆತಗಳಲ್ಲಿ 4 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 83 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು.
ಕ್ಯಾಮೆರಾನ್ ಗ್ರೀನ್ 21 ಎಸೆತಗಳಲ್ಲಿ 4 ಬೌಂಡರಿ 2 ಸಿಕ್ಸರ್ ಸಹಿತ 33 ರನ್ ಗಳಿಸಿದರು. ಮ್ಯಾಕ್ಸ್‌ವೆಲ್ 19 ಎಸೆತಗಳಲ್ಲಿ 28 ರನ್ ಗಳಿಸಿದರು. ಅನುಜ್ ರಾವತ್, ರಜತ್ ಪಾಟಿದಾರ್ ತಲಾ 3 ರನ್ ಗಳಿಸಿ ಮತ್ತೊಮ್ಮೆ ವೈಫಲ್ಯ ಅನುಭವಿಸಿದರು. ದಿನೇಶ್ ಕಾರ್ತಿಕ್ 8 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 20 ರನ್ ಗಳಿಸಿ ಅಂತಿಮ ಓವರ್ ಗಳಲ್ಲಿ ಮಿಂಚಿದರು.
ನರೇನ್, ಅಯ್ಯರ್ ಅಬ್ಬರ
ಸವಾಲಿನ ಮೊತ್ತವನ್ನು ಬೆನ್ನತ್ತಿದ ಕೆಕೆಆರ್ ಸ್ಫೋಟಕ ಆರಂಭ ಪಡೆಯಿತು. ಸುನಿಲ್ ನರೇನ್ ಮತ್ತು ಫಿಲ್ ಸಾಲ್ಟ್ 6.3 ಓವರ್ ಗಳಲ್ಲಿ ಮೊದಲ ವಿಕೆಟ್‌ಕೆ 86 ರನ್‌ಗಳ ಜೊತೆಯಾಟ ಆಡಿದರು. ಫಿಲ್ ಸಾಲ್ಟ್ 20 ಎಸೆತಗಳಲ್ಲಿ 30 ರನ್ ಗಳಿಸಿದರೆ, ಸುನಿಲ್ ನರೇನ್ 22 ಎಸೆತಗಳಲ್ಲಿ 2 ಬೌಂಡರಿ 5 ಸಿಕ್ಸರ್ ಸಹಿತ 47 ರನ್ ಗಳಿಸಿದರು.
ವೆಂಕಟೇಶ್ ಅಯ್ಯರ್ 30 ಎಸೆತಗಳಲ್ಲಿ 3 ಬೌಂಡರಿ ಮತ್ತು 4 ಸಿಕ್ಸರ್ ಸಹಿತ 50 ರನ್ ಗಳಿಸಿದರು. ಶ್ರೇಯಸ್ ಅಯ್ಯರ್ 24 ಎಸೆತಗಳಲ್ಲಿ ಅಜೇಯ 39 ರನ್ ಗಳಿಸಿದರೆ, ಅಂತಿಮವಾಗಿ ರಿಂಕು ಸಿಂಗ್ 5 ಎಸೆತಗಳಲ್ಲಿ 5 ರನ್ ಗಳಿಸಿದರು. ಅಂತಿಮವಾಗಿ 16.5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 186 ರನ್ ಗಳಿಸಿದ ಕೆಕೆಆರ್ 7 ವಿಕೆಟ್‌ಗಳ ಸುಲಭ ಗೆಲುವು ಸಾಧಿಸಿತು.












Click it and Unblock the Notifications