KKR Vs RCB: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ; ತಂಡದಲ್ಲಿ ಮೂರು ಬದಲಾವಣೆ
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಅಂಗಳದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಟಾಸ್ ಗೆದ್ದಿರುವ ಆರ್‌ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇಂದಿನ ಪಂದ್ಯದಲ್ಲಿ ಆರ್‌ಸಿಬಿ ಆಟಗಾರರು ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದ್ದಾರೆ.
ಆಡಿರುವ ಏಳು ಪಂದ್ಯಗಳಲ್ಲಿ ಆರು ಪಂದ್ಯಗಳನ್ನು ಸೋತಿರುವ ಆರ್‌ಸಿಬಿ ಎರಡನೇ ಗೆಲುವಿನ ಹುಡುಕಾಟದಲ್ಲಿದೆ. ಉಳಿದ ಏಳೂ ಪಂದ್ಯಗಳನ್ನು ಗೆದ್ದರೆ ಮಾತ್ರ ಈ ಆವೃತ್ತಿಯಲ್ಲಿ ಪ್ಲೇ ಆಫ್ ಅವಕಾಶ ಇರಬಹುದು. ಅದನ್ನು ಮಾಡಲು ಇಂದಿನ ಪಂದ್ಯದಲ್ಲಿ ಮೊದಲು ಗೆಲ್ಲಬೇಕಿದೆ.

ಆರ್‌ಸಿಬಿ ತಂಡದಲ್ಲಿ ಮೂರು ಬದಲಾವಣೆ ಮಾಡಲಾಗಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ವಿಶ್ರಾಂತಿ ಪಡೆದಿದ್ದ ಕ್ಯಾಮೆರಾನ್ ಗ್ರೀನ್ ಮತ್ತು ಮೊಹಮ್ಮದ್ ಸಿರಾಜ್ ತಂಡಕ್ಕೆ ಮರಳಿದ್ದಾರೆ. ಸ್ಪಿನ್ನರ್ ಕರಣ್ ಶರ್ಮಾ ಕೂಡ ಇಂದು ಕಣಕ್ಕಿಳಿಯಲಿದ್ದಾರೆ.
ದಿನೇಶ್ ಕಾರ್ತಿಕ್ ಅವರಿಗೆ ಇದು 250ನೇ ಐಪಿಎಲ್ ಪಂದ್ಯವಾಗಿದೆ. ಈ ಆವೃತ್ತಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಅವರು, ಆರ್‌ಸಿಬಿಯ ಪ್ರಮುಖ ಬ್ಯಾಟಿಂಗ್ ಅಸ್ತ್ರವಾಗಿದ್ದಾರೆ. ವಿಲ್ ಜ್ಯಾಕ್ಸ್ ಅಬ್ಬರಿಸಿದರೆ ಆರ್‌ಸಿಬಿ ಗೆಲುವು ಸುಲಭವಾಗಲಿದೆ.
ಕಳೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸೋತಿದ್ದ ಕೆಕೆಆರ್ ಗೆಲುವಿನ ಹಾದಿಗೆ ಮರಳುವ ಉದ್ದೇಶದಲ್ಲಿದೆ. ಸುನಿಲ್ ನರೇನ್ ಕಳೆದ ಪಂದ್ಯದಲ್ಲಿ ಶತಕ ಬಾರಿಸಿದ್ದು, ಪ್ರಮುಖ ಬ್ಯಾಟಿಂಗ್ ಅಸ್ತ್ರವಾಗಿದ್ದಾರೆ. ಕಳೆದ ಪಂದ್ಯದಲ್ಲಿ ಆಡಿದ್ದ ತಂಡವೇ ಇಂದಿನ ಪಂದ್ಯದಲ್ಲಿ ಕಣಕ್ಕಿಳಿಯಲಿದೆ.
ಉಭಯ ತಂಡಗಳ ಆಡುವ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಯಶ್ ದಯಾಲ್, ಮೊಹಮ್ಮದ್ ಸಿರಾಜ್.
ಕೋಲ್ಕತ್ತಾ ನೈಟ್ ರೈಡರ್ಸ್: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಸುನಿಲ್ ನರೈನ್, ಆಂಗ್ಕ್ರಿಶ್ ರಘುವಂಶಿ, ಶ್ರೇಯಸ್ ಅಯ್ಯರ್ (ನಾಯಕ), ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ.












Click it and Unblock the Notifications