IPL 2023: RCB vs LSG ಪಂದ್ಯದ ದಿನ ಬೆಂಗಳೂರಿನ ಹವಾಮಾನ ವರದಿ; ಪಂದ್ಯಕ್ಕೆ ಮಳೆ ಅಡ್ಡಿಯೇ?

ಸೋಮವಾರ, ಏಪ್ರಿಲ್ 10ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡಗಳ ನಡುವೆ ರೋಚಕ ಪಂದ್ಯವನ್ನು ಕ್ರಿಕೆಟ್ ಅಭಿಮಾನಿಗಳು ನಿರೀಕ್ಷಿಸಬಹುದು.

2023ರ ಐಪಿಎಲ್ ಪಂದ್ಯಾವಳಿಯ ತಮ್ಮ ಮೊದಲ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ 8 ವಿಕೆಟ್‌ಗಳ ಭಾರೀ ಗೆಲುವಿನೊಂದಿಗೆ ಪ್ರಾರಂಭಿಸಿದ ಆರ್‌ಸಿಬಿ ತಂಡ, ನಂತರದ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 81 ರನ್‌ಗಳ ಹೀನಾಯ ಸೋಲು ಕಂಡಿತು.

RCB vs LSG IPL 2023: Bengaluru Weather Report On RCB vs Lucknow Super Giants Match Day

205 ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡ 17 ಓವರ್‌ಗಳಲ್ಲಿ 123 ರನ್‌ಗಳಿಗೆ ಸರ್ವಪತನ ಕಂಡಿತು. ಕೆಕೆಆರ್ ತಂಡದ ಬಿಗಿ ಬೌಲಿಂಗ್ ದಾಳಿಗೆ ಪ್ರತಿರೋಧ ಒಡ್ಡದ ಆರ್‌ಸಿಬಿ ಬ್ಯಾಟ್ಸ್‌ಮನ್‌ಗಳು ಉತ್ತಮ ಜೊತೆಯಾಟ ನಿರ್ಮಿಸಲು ವಿಫಲರಾದರು. ಇದೀಗ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೆ ಪೂರ್ಣ ಸಾಮರ್ಥ್ಯದೊಂದಿಗೆ ಹಿಂದಿರುಗಲು ಎದುರು ನೋಡುತ್ತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಡಿದ 2 ಪಂದ್ಯಗಳಿಂದ 1 ಗೆಲುವು ದಾಖಲಿಸಿ 2 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದ್ದರೆ, ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ 3 ಪಂದ್ಯಗಳಿಂದ 4 ಅಂಕಗಳನ್ನು ಗಳಿಸಿ ಪ್ರಸ್ತುತ ಪಾಯಿಂಟ್ಸ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

RCB vs LSG IPL 2023: Bengaluru Weather Report On RCB vs Lucknow Super Giants Match Day

ಮತ್ತೊಂದೆಡೆ, ಲಕ್ನೋ ಸೂಪರ್ ಜೈಂಟ್ಸ್ ತನ್ನ ಎರಡನೇ ಪಂದ್ಯವನ್ನು ಸೋತ ನಂತರ, ಮೂರನೇ ಪಂದ್ಯದಲ್ಲಿ ಗೆಲುವಿನ ಹಾದಿಗೆ ಮರಳಿದೆ. ತಮ್ಮ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಐದು ವಿಕೆಟ್‌ಗಳ ಸುಲಭ ಗೆಲುವು ಪಡೆದರು.

ಆಡಿದ ಮೂರು ಪಂದ್ಯಗಳಲ್ಲಿ ಎರಡನ್ನು ಗೆದ್ದು ಅಮೋಘ ಫಾರ್ಮ್‌ನಲ್ಲಿರುವ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಆರ್‌ಸಿಬಿ ತಂಡ ಪ್ರಾಬಲ್ಯ ಸಾಧಿಸಲು ಎದುರು ನೋಡುತ್ತಿದೆ. ಎಲ್‌ಎಸ್‌ಜಿ ತಂಡದ ಸ್ಟಾರ್ ವಿಕೆಟ್ ಕೀಪರ್- ಬ್ಯಾಟರ್ ಕ್ವಿಂಟನ್ ಡಿ ಕಾಕ್ ಈ ಪಂದ್ಯದಲ್ಲೂ ಬೆಂಚ್ ಕಾಯಿಸುವ ಸಾಧ್ಯತೆ ಇದೆ.

RCB vs LSG IPL 2023: Bengaluru Weather Report On RCB vs Lucknow Super Giants Match Day

ಎಂ ಚಿನ್ನಸ್ವಾಮಿ ಕ್ರೀಡಾಂಗಣ ಹವಾಮಾನ ವರದಿ, ಮಳೆ ಮುನ್ಸೂಚನೆ

ಸೋಮವಾರದಂದು ಆರ್‌ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯವನ್ನು ಅಭಿಮಾನಿಗಳು ಯಾವುದೇ ಅಡೆತಡೆ ಇಲ್ಲದೆ, ಪೂರ್ಣ 40 ಓವರ್‌ಗಳ ಆಟವನ್ನು ವೀಕ್ಷಿಸಬಹುದು.

ಆಕ್ಯುವೇದರ್ ಪ್ರಕಾರ, ಆರ್‌ಸಿಬಿ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಪಂದ್ಯದುದ್ದಕ್ಕೂ ಯಾವುದೇ ಮಳೆಯ ಮುನ್ಸೂಚನೆ ಇಲ್ಲ. ಗಮನಾರ್ಹವಾಗಿ ಮೋಡ ಮುಸುಕಿದ ವಾತಾವರಣವೂ ಇಲ್ಲ.

ಬೆಂಗಳೂರಿನ ತಾಪಮಾನವು 25ರಿಂದ 30 ಡಿಗ್ರಿ ಸೆಲ್ಸಿಯಸ್ ನಡುವೆ ಇದ್ದು, ಆದರೆ ತೇವಾಂಶವು ಶೇಕಡಾ 30ರಷ್ಟಿರುತ್ತದೆ. ಎರಡೂ ತಂಡಗಳು ಎರಡು ನಿರ್ಣಾಯಕ ಅಂಕಗಳಿಗಾಗಿ ಸೆಣಸಾಡುವುದರಿಂದ ಪಂದ್ಯದ ಕಾವು ತುಸು ಹೆಚ್ಚಾಗಲಿದೆ.

ಆರ್‌ಸಿಬಿ vs ಎಲ್ಎಸ್‌ಜಿ ಸಂಭಾವ್ಯ ಆಡುವ 11ರ ಬಳಗ

ಆರ್‌ಸಿಬಿ ತಂಡ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯೇಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ / ಮೈಕಲ್ ಬ್ರೆಸ್‌ವೆಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.

ಲಕ್ನೋ ಸೂಪರ್ ಜೈಂಟ್ಸ್: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ಕ್ವಿಂಟನ್ ಡಿ ಕಾಕ್ / ಮಾರ್ಕಸ್ ಸ್ಟೊಯಿನಿಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಆಯುಷ್ ಬದೊನಿ, ರೊಮಾರಿಯೊ ಶೆಫರ್ಡ್ / ಮಾರ್ಕ್ ವುಡ್, ಯಶ್ ಠಾಕೂರ್, ರವಿ ಬಿಷ್ಣೋಯಿ, ಜಯದೇವ್ ಉನಾದ್ಕಟ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+