IPL 2025: ಆರ್‌ಸಿಬಿ vs ಎಲ್‌ಎಸ್‌ಜಿ ಪಂದ್ಯ ಸ್ಥಗಿತ? ಐಪಿಎಲ್ ರದ್ದಾಗುವ ಅಪಾಯ

ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಆವೃತ್ತಿಯ ಮೇಲೆ ಯುದ್ಧದ ಕರಿನೆರಳು ಬಿದ್ದಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆ ಗುರುವಾರ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ಅರ್ಧದಲ್ಲೇ ಸ್ಥಗಿತಗೊಳಿಸಲಾಗಿದೆ. 10.2 ಓವರ್ ಆಗಿದ್ದ ಸಂದರ್ಭದಲ್ಲೇ ಮೈದಾನದಲ್ಲಿ ಲೈಟ್ ಆಫ್ ಆದ ಕಾರಣ ಪಂದ್ಯವನ್ನು ನಿಲ್ಲಿಸಿ ಪ್ರೇಕ್ಷಕರನ್ನು ಮೈದಾನದಿಂದ ಹೊರಗೆ ಕಳಿಸಲಾಗಿದೆ.

ಮಳೆಯಿಂದಾಗಿ ಪಂದ್ಯವು ನಿಗದಿತ ಸಮಯಕ್ಕಿಂತ ತಡವಾಗಿ ಪ್ರಾರಂಭವಾಯಿತು, ನಂತರ ಧರ್ಮಶಾಲಾದಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಯಿತು. ಬಳಿಕ ಪಂದ್ಯವನ್ನು ರದ್ದು ಮಾಡಲಾಗಿದೆ ಎಂದು ಘೋಷಿಸಲಾಗಿದೆ. ಭಾರತ ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಇರುವಾಗ ಐಪಿಎಲ್ 2025ರ ಪಂದ್ಯಾವಳಿ ನಡೆಯುವ ಬಗ್ಗೆ ಅನುಮಾನ ಸಹ ವ್ಯಕ್ತವಾಗುತ್ತಿದೆ.

rcb vs lsg ipl 2025 risk of being called off amid india pak border tension

ತಂಡಗಳು ಮತ್ತು ಪ್ರೇಕ್ಷಕರನ್ನು ಅಂತಿಮವಾಗಿ ಅವರ ಭದ್ರತೆಗಾಗಿ ಕ್ರೀಡಾಂಗಣದಿಂದ ಸ್ಥಳಾಂತರಿಸಲಾಯಿತು. ಅಪರೂಪಕ್ಕೆ ಇಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯುತ್ತವೆ. 23,000 ಪ್ರೇಕ್ಷಕರ ಸಾಮರ್ಥ್ಯ ಹೊಂದಿರುವ ಮೈದಾನದಲ್ಲಿ ಗುರುವಾರ ಪಂದ್ಯ ನೋಡಲು ಸುಮಾರು 80% ಆಸನಗಳು ಭರ್ತಿಯಾಗಿದ್ದವು.

ಮೈದಾನದಿಂದ ದಿಢೀರ್ ಎಂದು ಹೊರಗೆ ಕಳಿಸಿದರೂ ಪ್ರೇಕ್ಷಕರು ಯಾವುದೇ ಸಂದರ್ಭದಲ್ಲೂ ವಿಚಲಿತರಾಗಲಿಲ್ಲ. ವೀಕ್ಷಕರು ಮತ್ತು ಆಟಗಾರರನ್ನು ಬಹಳ ಎಚ್ಚರಿಕೆಯಿಂದ ಮತ್ತು ಸುರಕ್ಷಿತವಾಗಿ ಕ್ರೀಡಾಂಗಣದಿಂದ ಹೊರಗೆ ಸ್ಥಳಾಂತರಿಸಲಾಯಿತು ಎಂದು ಎಚ್‌ಪಿಸಿಎ ಮೂಲವೊಂದು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.

ಆರ್ ಸಿಬಿ vs ಎಲ್‌ಎಸ್‌ಜಿ ಪಂದ್ಯ ರದ್ದು?

ಶುಕ್ರವಾರ ಲಕ್ನೋದ ಎಕಾನಾ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂದ್ಯ ಕೂಡ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಯುದ್ಧದ ಭೀತಿ ನಡುವೆ ಐಪಿಎಲ್ 2025ರ ಪಂದ್ಯಾವಳಿಯನ್ನು ಮುಂದುವರೆಸಬೇಕೆ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ದೇಶಿ ಮತ್ತು ವಿದೇಶಿ ಆಟಗಾರರು, ಪ್ರೇಕ್ಷಕರ ಭದ್ರತೆ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಈ ಬಗ್ಗೆ ಶುಕ್ರವಾರ ನಡೆಯುವ ಸಭೆಯಲ್ಲಿ ತೀರ್ಮಾನ ಮಾಡಲಿದೆ.

ಪಂದ್ಯಾವಳಿಯನ್ನು ರದ್ದುಗೊಳಿಸುವುದು ಅಥವಾ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡುವ ಅವಕಾಶವಿದೆ ಎನ್ನಲಾಗಿದೆ. ಈಗಾಗಲೇ ಮೇ 11ರಂದು ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ vs ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವನ್ನು ಅಹಮಾದಾಬಾದ್‌ಗೆ ಸ್ಥಳಾಂತರ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+