RCB vs LSG: ಮಯಾಂಕ್ ಯಾದವ್ ವೇಗಕ್ಕೆ ಶರಣಾದ ಆರ್‌ಸಿಬಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಎರಡನೇ ಬಾರಿಗೆ ಸೋಲಿನ ರುಚಿ ಕಂಡಿದೆ. ಮಂಗಳವಾರ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಆರ್‌ಸಿಬಿ ವಿರುದ್ಧ 28 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದ ಆರ್‌ಸಿಬಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತು.

RCB Vs LSG Lucknow Super Giants Defeat RCB by 28 Runs

ನಾಯಕ ಕೆಎಲ್ ರಾಹುಲ್ 20 ರನ್ ಗಳಿಸಿದರೆ, ಕ್ವಿಂಟನ್ ಡಿ ಕಾಕ್ 56 ಎಸೆತಗಳಲ್ಲಿ 8 ಬೌಂಡರಿ 5 ಸಿಕ್ಸರ್ ಸಹಿತ 81 ರನ್ ಗಳಿಸುವ ಮೂಲಕ ಎಲ್‌ಎಸ್‌ಜಿ ತಂಡಕ್ಕೆ ನೆರವಾದರು. ಮಾರ್ಕಸ್ ಸ್ಟೊಯಿನಿಸ್ 15 ಎಸೆತಗಳಲ್ಲಿ 24 ರನ್ ಗಳಿಸಿದರೆ, ನಿಕೋಲಸ್ ಪೂರನ್ 21 ಎಸೆತಗಳಲ್ಲಿ 1 ಬೌಂಡರಿ, 5 ಸಿಕ್ಸರ್ ಸಹಿತ ಅಜೇಯ 40 ರನ್ ಗಳಿಸಿದರು.

ಯಶ್ ದಯಾಳ್ 4 ಓವರ್ ಗಳಲ್ಲಿ 24 ರನ್ ನೀಡಿ 1 ವಿಕೆಟ್ ಪಡೆದರೆ, ಗ್ಲೆನ್ ಮ್ಯಾಕ್ಸ್‌ವೆಲ್ 4 ಓವರ್ ಗಳಲ್ಲಿ ಕೇವಲ 23 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರು.

RCB Vs LSG Lucknow Super Giants Defeat RCB by 28 Runs

ಲಕ್ನೋ ಮಾರಕ ಬೌಲಿಂಗ್

ಸವಾಲಿನ ಮೊತ್ತವನ್ನು ಬೆನ್ನತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 19.4 ಓವರ್ ಗಳಲ್ಲಿ 153 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿರು.

ವಿರಾಟ್ ಕೊಹ್ಲಿ 22 ರನ್ ಗಳಿಸಿ ಔಟಾದರೆ, ನಾಯಕ ಫಾಫ್ ಡು ಪ್ಲೆಸಿಸ್ 19 ರನ್ ಗಳಿಸಿ ರನೌಟ್‌ಗೆ ಬಲಿಯಾದರು. ರಜತ್ ಪಾಟಿದಾರ್ 29 ರನ್ ಗಳಿಸಿದರು. ಮ್ಯಾಕ್ಸ್‌ವೆಲ್ ಶೂನ್ಯಕ್ಕೆ ಔಟಾದರು. ಕ್ಯಾಮೆರಾನ್ ಗ್ರೀನ್ 9 ರನ್ ಗಳಿಸಿ ವಿಕೆಟ್ ಒಪ್ಪಿಸಿದರೆ, ಅನುಜ್ ರಾವತ್ 11 ರನ್ ಗಳಿಸಿದರು.

ಮಹಿಪಾಲ್ ಲೊಮ್ರೋರ್ 13 ಎಸೆತಗಳಲ್ಲಿ 3 ಬೌಂಡರಿ, 3 ಸಿಕ್ಸರ್ ಸಹಿತ 33 ರನ್ ಗಳಿಸಿ ಹೋರಾಟ ನೀಡಿದರೂ ತಂಡದ ಸೋಲು ತಪ್ಪಿಸಲು ಸಾಧ್ಯವಾಗಲಿಲ್ಲ.

ಮಯಾಂಕ್ ಯಾದವ್ ಮಾರಕ ಬೌಲಿಂಗ್ ದಾಳಿ ನಡೆಸಿದರು. 4 ಓವರ್ ಗಳಲ್ಲಿ 14 ರನ್ ನೀಡಿ 3 ವಿಕೆಟ್ ಪಡೆದುಕೊಂಡರು. ನವೀನ್ ಉಲ್ ಹಕ್ 3.4 ಓವರ್ ಗಳಲ್ಲಿ 25 ರನ್ ನೀಡಿ 2 ವಿಕೆಟ್ ಪಡೆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+