RCB: ಆರ್‌ಸಿಬಿ-ಎಲ್‌ಎಸ್‌ಜಿ ಪಂದ್ಯ ರದ್ದು ಸಾಧ್ಯತೆ
IPL 2025 RCB Vs LSG: ಐಪಿಎಲ್ 2025ರ 70ನೇ ಪಂದ್ಯ ಆರ್‌ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವೆ ಮೇ 27ರಂದು ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಗೆಲುವು ಅನಿವಾರ್ಯತೆ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಆಘಾತವೊಂದು ಎದುರಾಗಿದೆ. ಅದೇನು ಅಂತೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಸೀಸನ್ ಆರಂಭದಿಂದಲೂ ಬ್ಯಾಟಿಂಗ್, ಬೌಲಿಂಗ್ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುತ್ತಾ ಬಂದಿದ್ದು, ಪ್ಲೇ ಆಪ್ ಸಹ ಪ್ರವೇಶ ಮಾಡಿದೆ. ಇದೀಗ ಅಗ್ರ ಎರಡು ಸ್ಥಾನದಲ್ಲಿ ಕಾಣಿಸಿಕೊಳ್ಳುವ ಮೂಲಕ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯುವ ಕಾತರದಲ್ಲಿದೆ. ಈಗಾಗಲೇ ಮೇ 23ರಂದು ಎಸ್‌ಆರ್‌ಎಚ್ ವಿರುದ್ಧ ಸೋತು ಒಂದು ಚಾನ್ಸ್ ಮಿಸ್ ಮಾಡಿಕೊಂಡಿದೆ. ಇನ್ನೂ ಒಂದು ಅವಕಾಶ ಇದೆ ಅಗ್ರ ಎರಡು ಸ್ಥಾನದಲ್ಲಿ ಕಾಣಿಸಿಕೊಳ್ಳಲು.

ಇಂದು (ಮೇ 25) ವೇಳೆ ಇಂದು ನಡೆಯಲಿರುವ 67ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಸಿಎಸ್‌ಕೆ ವಿರುದ್ಧ ಸೋತರೆ, ಪಾಯಿಂಟ್ಸ್ ಟೇಬಲ್‌ನಲ್ಲಿ ಅಗ್ರ ಸ್ಥಾನ ತಪ್ಪಿಸಿಕೊಳ್ಳುವ ಸಾಧ್ಯತೆಯಿದೆ. ಇದು ಸಾಧ್ಯವಾದ್ರೆ, ರಾಯಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಅನುಕೂಲ ಆಗಲಿದೆ. ಯಾಕೆಂದ್ರೆ, ಜಿಟಿಗೆ ಇದೇ ಕೊನೇ ಪಂದ್ಯ ಆಗಿದ್ದು, ಆರ್‌ಸಿಬಿಗೆ ಇನ್ನೊಂದು ಪಂದ್ಯ ಬಾಕಿಯಿದೆ.
ಸದ್ಯ ಗುಜರಾತ್ ಟೈಟಾನ್ಸ್ 18 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿಅಗ್ರ ಸ್ಥಾನದಲ್ಲಿದ್ದು, ಇದೇ ಸ್ಥಾನದಲ್ಲೇ ಉಳಿದುಕೊಳ್ಳು ಇಂದು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಗೆಲ್ಲಲೇಬೇಕಿದೆ. ಇಲ್ಲದಿದ್ದರೆ, ಇದು ಕೈತಪ್ಪಿ ಹೋಗುವ ಸಾಧ್ಯತೆ ಹೆಚ್ಚಿದೆ. ಮತ್ತೊಂದೆಡೆ ಸದ್ಯ 17 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ ಆರ್‌ಸಿಬಿ 3ನೇ ಸ್ಥಾನದಲ್ಲಿದ್ದು, ಉಳಿದ ಒಂದು ಪಂದ್ಯದಲ್ಲಿ ಗೆದ್ದರೆ 19 ಅಂಕಗಳೊಂದಿಗೆ ಅಗ್ರಸ್ಥಾನಕ್ಕೇರುವುದರಲ್ಲಿ ಯಾವುದೇ ಅನುಮಾನವಿಲ್ಲ.
ಮುಂದಿನ ಉಳಿದ ಒಂದು ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಆಡಬೇಕಿದೆ. ಇದು ಆರ್‌ಸಿಬಿ ಪಾಲಿಗೆ ಗೆಲ್ಲಲ್ಲೇಬೇಕಾದ ಸವಾಲಿನ ಪಂದ್ಯ ಆಗಿದ್ದು, ಇದನ್ನು ರಜತ್ ಪಾಟೀದಾರ್ ಪಡೆ ಗೆದ್ದೇ ಗೆಲ್ಲಲ್ಲೇಬೇಕೆಂಬ ಪಣ ತೊಟ್ಟಿದೆ. ಆದರೆ, ಈ ನಡುವೆಯೇ ಆತಂಕವೊಂದು ಎದುರಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ ಮಳೆ ಸುರಿದರೆ ಪಂದ್ಯ ರದ್ದಾಗುವ ಸಾಧ್ಯತೆಯಿದೆ.
ಈಗಾಗಲೇ ಕೇರಳಕ್ಕೆ ಮುಂಗಾರು ಎಂಟ್ರಿ ಕೊಟ್ಟಿದೆ. ಈ ನಡುವೆಯೇ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ಉಂಟಾಗಿರುವ ಪರಿಣಾ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ ಹಲವು ದಿನಗಳ ಕಾಲ ಉತ್ತರ ಪ್ರದೇಶದಲ್ಲೂ ಸಹ ಕೆಲವೆಡೆ ಭಾರೀ ಮಳೆಯಾಗಲಿದೆ ಎನ್ನುವ ಮುನ್ಸೂಚನೆ ಇದೆ. ಇಲ್ಲಿನ ಲಕ್ನೋದಲ್ಲಿ ಭಾರೀ ಮಳೆ ಸುರಿದರೆ ಆರ್‌ಸಿಬಿ-ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯುವ ಪಂದ್ಯ ರದ್ದಾಗುವ ಸಾಧ್ಯತೆಯಿದೆ.
ಭಾರೀ ಮಳೆ ಸುರಿದು ಪಂದ್ಯ ರದ್ದಾದರೆ ಎರಡು ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ. ಆಗ ಆರ್‌ಸಿಬಿ 18 ಅಂಕಗಳೊಂದಿಗೆ ಅಗ್ರಸ್ಥಾನದ ಆಸೆ ಬಿಡಬೇಕಾಗುತ್ತದೆ. ಆಗ ಮುಂದಿನ ಅಂದರೆ ಮೇ 26ರಂದು ನಡೆಯುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಸೋತರೆ ಆರ್‌ಸಿಬಿ ಎರಡನೇ ಸ್ಥಾನ ಅಲಂಕರಿಸಲಿದೆ.
ಭಾರೀ ಮಳೆ ಮುಂದುವರೆದರೆ, ಪಂದ್ಯ ರದ್ದುಪಡಿಸಿ ಎರಡು ತಂಡಗಳಿಗೆ ತಲಾ ಒಂದೊಂದು ಅಂಕ ನೀಡಲಾಗುತ್ತದೆ. ಸಾಧಾರಣ ಮಳೆಯಾದ್ರೆ, ಓವರ್‌ಗಳನ್ನು ಕಡಿತಗೊಳಿಸಿ ಆಡಿಸಲಾಗುತ್ತದೆ. ಓವರ್ ಕಡಿತ ಮಾಡಿ ಆಡಿಸಿದರೆ, ಬೌಲಿಂಗ್ ಆಯ್ಕೆ ಮಾಡಿಕೊಂಡ ತಂಡಕ್ಕೆ ಹೆಚ್ಚು ಅನುಕೂಲ ಆಗಲಿದೆ. ಯಾಕೆಂದ್ರೆ, ಈ ಪಿಚ್‌ನಲ್ಲಿ ಚೇಸಿಂಗ್ ಮಾಡುವವರಿಗೆ ಹೆಚ್ಚು ಅನುಕೂಲವಾಗಲಿದೆ ಎನ್ನುವ ನಂಬಿಕೆಯಿದೆ ಆದ್ದರಿಂದ.
ಮತ್ತೊಂದೆಡೆ ಯಾವುದೇ ಅನಾನುಕೂಲ ಆಗದೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಲ್‌ಎಸ್‌ಜಿ ವಿರುದ್ಧ ಗೆದ್ದು ಬೀಗಿದರೆ, ಯಾವುದೇ ಬೇರೆ ತಂಡದ ಸೋಲಿಗೆ ಕಾಯದೇ ಅಗ್ರ ಸ್ಥಾನವನ್ನು ಅಲಂಕರಿಸುವುರದಲ್ಲಿ ಯಾವುದೇ ಅನುಮಾನವಿಲ್ಲ. ಆದ್ದರಿಂದ ಈ ಗೆಲುವು ಆರ್‌ಸಿಬಿ ಪಾಲಿಗೆ ದೊಡ್ಡ ಸವಾಲಾಗಿದೆ. ಅದೇನೇ ಇರಲಿ, ಈ ಪಂದ್ಯದಲ್ಲಿ ರಾಯಲ್ ಟೀಂ ಗೆದ್ದು ಅಗ್ರಸ್ಥಾನಕ್ಕೇರಲಿ ಎನ್ನುವುದೇ ಅಭಿಮಾನಿಗಳ ಬೇಡಿಕೆಯಾಗಿದೆ.
ಎಲ್‌ಎಸ್‌ಜಿ ವಿರುದ್ಧದ ಆರ್‌ಸಿಬಿ ಪಂದ್ಯ ಮೇ 27ರಂದು ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಕ್ರೀಡಾಂಣದಲ್ಲಿ ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯವನ್ನು ಬರೀ ಕರ್ನಾಟಕ ಅಷ್ಟೇ ಅಲ್ಲದೆ ಇಡೀ ದೇಶವೇ ವೀಕ್ಷಣೆ ಮಾಡಲು ಕಾತರದಿಂದ ಕಾಯುತ್ತಿದೆ. ಅಷ್ಟರ ಮಟ್ಟಿದೆ ಆರ್‌ಸಿಬಿ ಐಪಿಎಲ್‌ನಲ್ಲಿ ಕ್ರೇಜ್ ಹುಟ್ಟುಹಾಕಿದ ತಂಡವಾಗಿದೆ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್‌ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications