RCB Vs MI: ರಣ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮಣಿಸಿ ಫೈನಲ್‌ ತಲುಪಿದ ಆರ್‌ಸಿಬಿ

ಮಹಿಳಾ ಪ್ರೀಮಿಯರ್ ಲೀಗ್ 2024ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ರಣರೋಚಕ ಪಂದ್ಯದಲ್ಲಿ 5 ರನ್‌ಗಳ ಗೆಲುವು ಸಾಧಿಸಿದ ಆರ್‌ಸಿಬಿ ಫೈನಲ್‌ಗೆ ಲಗ್ಗೆಯಿಟ್ಟಿದೆ. ತಂಡವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ ಮಂಧಾನ ಪಡೆ, ಹಾಲಿ ಚಾಂಪಿಯನ್‌ಗಳನ್ನು ಮಣಿಸುವಲ್ಲಿ ಯಶಸ್ವಿಯಾಯಿತು.

ಮುಂಬೈ ಇಂಡಿಯನ್ಸ್ ತಂಡವನ್ನು ಮಣಿಸಿ ಎಲಿಮಿನೇಟರ್ ಹಂತಕ್ಕೆ ಲಗ್ಗೆಯಿಟ್ಟಿದ್ದ ಆರ್‌ಸಿಬಿ, ಎಲಿಮಿನೇಟರ್ ಪಂದ್ಯದಲ್ಲಿ ಕೂಡ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಬೇಕಿತ್ತು. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಎಲಿಮಿನೇಟರ್ ಪಂದ್ಯ ಅಭಿಮಾನಿಗಳ ಎದೆಬಡಿತವನ್ನು ಹೆಚ್ಚಿಸಿತ್ತು.

RCB vs MI RCB Defeats Mumbai Indians in Nail-Biting Thriller to Qualify for WPL 2024 Final

ಟಾಸ್ ಗೆದ್ದ ಆರ್‌ಸಿಬಿ ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಸೋಫಿ ಡಿವೈನ್ ಮತ್ತು ಸ್ಮೃತಿ ಮಂಧಾನ ಮೊದಲ ಓವರ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೂ, ಬೇಗನೆ ವಿಕೆಟ್ ಕಳೆದುಕೊಂಡಿತು. 2ನೇ ಓವರ್ ನ ಕೊನೆ ಎಸೆತದಲ್ಲಿ ಸೋಫಿ ಡಿವೈನ್ ಔಟಾದರು, ಸ್ಮೃತಿ ಮಂಧಾನ ಕೂಡ ಮೂರನೇ ಓವರ್ ನಲ್ಲಿ ವಿಕೆಟ್ ಒಪ್ಪಿಸಿದರು. ದಿಶಾ ಕಸತ್ ರನ್ ಗಳಿಸದೆ ಔಟಾದರು.

23 ರನ್‌ಗಳಿಗೆ ಮೂರು ವಿಕೆಟ್ ಕಳೆದುಕೊಂಡ ಆರ್ ಸಿಬಿ ಸಂಕಷ್ಟಕ್ಕೆ ಸಿಲುಕಿತು. ಆದರೆ ಎಲ್ಲಿಸ್ ಪೆರ್ರಿ ಮತ್ತೆ ತಂಡಕ್ಕೆ ಆಸರೆಯಾದರು. 50 ಎಸೆತಗಳಲ್ಲಿ 8 ಬೌಂಡರಿ 1 ಸಿಕ್ಸರ್ ಸಹಿತ 66 ರನ್ ಗಳಿಸಿದರು. ಆರ್ ಸಿಬಿ ಅಂತಿಮವಾಗಿ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 135 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಿತು.

ಕೊನೆಯ ಮೂರು ಮ್ಯಾಜಿಕಲ್ ಓವರ್ಸ್

ಈ ಸುಲಭ ಮೊತ್ತವನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ಕೂಡ ಉತ್ತಮ ಆರಂಭ ಪಡೆಯಿತು. 27 ರನ್ ಗಳಾಗಿದ್ದಾಗ ಮೊದಲ ವಿಕೆಟ್ ಕಳೆದುಕೊಂಡಿತು. 10.4 ಓವರ್ ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡ ಮುಂಬೈ ಇಂಡಿಯನ್ಸ್ 68 ರನ್ ಗಳಿಸಿತ್ತು. ಬಳಿಕ ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಅಮೆಲಿಯಾ ಕೆರ್ ಉತ್ತಮ ಜೊತೆಯಾಟ ಆಡಿದರು. 52 ರನ್‌ಗಳ ಜೊತೆಯಾಟದ ಮೂಲಕ ಪಂದ್ಯವನ್ನು ಸುಲಭವಾಗಿ ಗೆಲ್ಲುವ ಸೂಚನೆ ಕೊಟ್ಟರು.

ಕೊನೆಯ ಮೂರು ಓವರ್ ಗಳಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿಗೆ ಕೇವಲ 20 ರನ್ ಬೇಕಿತ್ತು. ಮುಂಬೈ ಸುಲಭವಾಗಿ ಗೆಲ್ಲುವ ವಿಶ್ವಾಸದಲ್ಲಿತ್ತು, 18ನೇ ಓವರ್ ಬೌಲಿಂಗ್ ದಾಳಿಗೆ ಇಳಿದ ಶ್ರೇಯಾಂಕ ಪಾಟೀಲ್ ಕೇವಲ 4 ರನ್ ನೀಡಿ ಹರ್ಮನ್ ಪ್ರೀತ್ ಕೌರ್ ಅವರ ವಿಕೆಟ್ ಪಡೆದರು. ಬಳಿಕ 19ನೇ ಓವರ್ ನಲ್ಲಿ ಬೌಲಿಂಗ್ ಮಾಡಿದ ಸೋಫಿ ಮೊಲಿನೆಕ್ಸ್ ಕೂಡ ಕೇವಲ 4 ರನ್ ನೀಡಿ 1 ವಿಕೆಟ್ ಪಡೆದರು.

ಕೊನೆಯ ಓವರ್ ಬೌಲಿಂಗ್ ಮಾಡಿದ ಆಶಾ ಶೋಭನಾ ಒಂದು ವಿಕೆಟ್ ಪಡೆದುಕೊಂಡು ಕೇವಲ 6 ರನ್ ನೀಡುವ ಮೂಲಕ ಆರ್‌ಸಿಬಿ ತಂಡಕ್ಕೆ 5 ರನ್‌ಗಳ ರೋಚಕ ಗೆಲುವು ತಂದುಕೊಟ್ಟರು. ಆರ್‌ಸಿಬಿ ತಂಡ ಮಾರ್ಚ್ 17ರಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಫೈನಲ್ ಪಂದ್ಯವನ್ನು ಆಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+