RCB Vs PBKS: ಮೈದಾನಕ್ಕೆ ನುಗ್ಗಿ ವಿರಾಟ್ ಕೊಹ್ಲಿ ಕಾಲಿಗೆ ಬಿದ್ದ ಅಭಿಮಾನಿ; ವಿಡಿಯೋ ನೋಡಿ
ವಿರಾಟ್ ಕೊಹ್ಲಿ, ಸಮಕಾಲೀನ ಕ್ರಿಕೆಟ್‌ನ ಶ್ರೇಷ್ಠ ಆಟಗಾರ ಎಂದೇ ಹೆಸರು ಮಾಡಿದ್ದಾರೆ. ವಿಶ್ವದ ಮೂಲೆ ಮೂಲೆಗಳಲ್ಲಿ ಕೂಡ ವಿರಾಟ್ ಕೊಹ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಐಪಿಎಲ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರವಾಗಿ ಆಡುತ್ತಿದ್ದು, ಬೆಂಗಳೂರಿನಲ್ಲಿ ಕೂಡ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ.
ಸದ್ಯ ನಡೆಯುತ್ತಿರುವ ಐಪಿಎಲ್ 2024ರ ಪಂದ್ಯಾವಳಿಯ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುವಾಗ, ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ ಕಾಲಿಗೆ ಬಿದ್ದಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಈ ಘಟನೆ ನಡೆದಿದೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಪಂಜಾಬ್ ಕಿಂಗ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು.
ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟಿಂಗ್ ಆರಂಭಿಸಿತು. ನಾಯಕ ಫಾಫ್ ಡುಪ್ಲೆಸಿಸ್ ಜೊತೆ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಆರಂಭಿಸಿದರು. ಕೊಹ್ಲಿ ಕ್ರೀಸ್‌ಗೆ ಬರುತ್ತಿದ್ದಂತೆ ಅಭಿಮಾನಿಯೊಬ್ಬ ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಓಡಿ ಬಂದು ಕೊಹ್ಲಿ ಕಾಲಿಗೆ ಬಿದ್ದಿದ್ದಾನೆ. ತನ್ನ ನೆಚ್ಚಿನ ಕ್ರಿಕೆಟಿಗನ ಕಾಲಿಗೆ ಬಿದ್ದಿದ್ದಲ್ಲದೆ, ಅವರನ್ನು ತಬ್ಬಿಕೊಂಡಿದ್ದಾನೆ. ತಕ್ಷಣ ಅವರ ಹಿಂದೆಯೇ ಓಡಿ ಬಂದ ಭದ್ರತಾ ಸಿಬ್ಬಂದಿ ಅಭಿಮಾನಿಯನ್ನು ಎಳೆದುಕೊಂಡು ಹೋಗಿದ್ದಾರೆ.
A fan breached the field and touched Virat Kohli's feet.
— Mufaddal Vohra (@mufaddal_vohra) March 25, 2024
- King Kohli, an icon! ❤️pic.twitter.com/s82xq8sKhW
ಕೋಟ್ಯಂತರ ಅಭಿಮಾನಿಗಳಿಗೆ ವಿರಾಟ್ ಕೊಹ್ಲಿಯನ್ನು ಹತ್ತಿರದಿಂದ ನೋಡುವ ಆಸೆ ಇರುತ್ತದೆ. ಆದರೆ ಎಲ್ಲರಿಗೂ ಆ ಅವಕಾಶ ಸಿಗುವುದಿಲ್ಲ. ಆದರೆ ಮೈದಾನದಲ್ಲಿ ಕೆಲವು ಅಭಿಮಾನಿಗಳು ಹುಚ್ಚು ಧೈರ್ಯ ಮಾಡಿ ಇಂತಹ ಸಾಹಸ ಮಾಡುತ್ತಾರೆ. ಈ ರೀತಿ ಅಭಿಮಾನಿಗಳು ಮೈದಾನಕ್ಕೆ ನುಗ್ಗಿ ನೆಚ್ಚಿನ ಕ್ರಿಕೆಟಿಗನನ್ನು ತಬ್ಬಿಕೊಳ್ಳುವುದು, ಕಾಲಿಗೆ ಬೀಳುವುದು ಹೊಸದೇನಲ್ಲ.
100ನೇ ಅರ್ಧಶತಕ, ಗೆದ್ದ ಆರ್ ಸಿಬಿ
ಐಪಿಎಲ್ 2024ರಲ್ಲಿ ಆರ್ ಸಿಬಿ ಗೆಲುವಿನ ಅಭಿಯಾನ ಆರಂಭಿಸಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ಆರ್ ಸಿಬಿ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿತು. ವಿರಾಟ್ ಕೊಹ್ಲಿ 49 ಎಸೆತಗಳಲ್ಲಿ 77 ರನ್ ಸಿಡಿಸುವ ಮೂಲಕ ಆರ್ ಸಿಬಿ ಗೆಲುವಿಗೆ ಮಹತ್ವದ ಕೊಡುಗೆ ನೀಡಿದರು. ಅಲ್ಲದೆ ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕ ಸಿಡಿಸಿದ ಮೊದಲ ಭಾರತೀಯ ಕ್ರಿಕೆಟಿಗ ಎನಿಸಿಕೊಂಡರು.












Click it and Unblock the Notifications