ವೆಂಕಟೇಶ್ ಅಯ್ಯರ್ ಸ್ಫೋಟಕ ಬ್ಯಾಟಿಂಗ್, ಪಂಜಾಬ್ ಕಿಂಗ್ಸ್‌ಗೆ 223 ರನ್‌ಗಳ ಗುರಿ ನೀಡಿದ ಆರ್‌ಸಿಬಿ
RCB Vs PBKS IPL 2026: ಧರ್ಮಶಾಲಾದಲ್ಲಿ ಭಾನುವಾರ (ಮೇ 17) ನಡೆದ ಐಪಿಎಲ್ 2026ರ 61ನೇ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 222 ರನ್‌ಗಳ ಬೃಹತ್ ಮೊತ್ತವನ್ನು ಕಲೆಹಾಕಿದೆ. ಆರ್‌ಸಿಬಿ ಪರ ಸ್ಫೋಟಕ ಬ್ಯಾಟಿಂಗ್ ಆಡಿದ ವೆಂಕಟೇಶ್ ಅಯ್ಯರ್ 73 ರನ್ ಗಳಿಸಿ ಅಜೇಯರಾಗಿ ಉಳಿದರು.
ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡರು. ಅದರಂತೆಯೇ ಮೊದಲು ಬ್ಯಾಟ್ ಬೀಸಿದ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 222 ರನ್‌ಗಳ ಬೃಹತ್ ಮೊತ್ತ ಪೇರಿಸಿದೆ. ಈ ಮೂಲಕ ಪಂಜಾಬ್ ಕಿಂಗ್ಸ್‌ಗೆ 223 ರನ್‌ಗಳ ಕಠಿಣ ಗುರಿಯನ್ನು ನೀಡಿದೆ. ಇನ್ನು ನಾಯಕನಾಗಿ ಶ್ರೇಯಸ್ ಅಯ್ಯರ್ ಅವರಿಗೆ ಇದು 100ನೇ ಐಪಿಎಲ್ ಪಂದ್ಯ ಎಂಬುದು ವಿಶೇಷ.

ಆರ್‌ಸಿಬಿ ತಂಡದ ನಾಯಕ ರಜತ್ ಪಾಟಿದಾರ್ ಅನುಪಸ್ಥಿತಿಯಲ್ಲಿ, ಜಿತೇಶ್ ಶರ್ಮಾ ತಂಡವನ್ನು ಮುನ್ನಡೆಸುತ್ತಿದ್ದಾರೆ. ಸುಯಶ್ ಶರ್ಮಾ ಮತ್ತು ರೊಮಾರಿಯೋ ಶೆಫರ್ಡ್ ಮತ್ತೆ ತಂಡಕ್ಕೆ ಮರಳಿದ್ದಾರೆ. ಶೆಫರ್ಡ್ ಅವರು ಜೇಕಬ್ ಡಫಿ ಬದಲಿಗೆ ಸ್ಥಾನ ಪಡೆದಿದ್ದಾರೆ. ಮತ್ತೊಂದೆಡೆ ಪಂಜಾಬ್ ಕಿಂಗ್ಸ್‌ನಲ್ಲಿ ಹರ್‌ಪ್ರೀತ್ ಬ್ರಾರ್ ಮತ್ತು ಲಾಕಿ ಫರ್ಗುಸನ್ ಅವರನ್ನು ಆಡುವ 11ರ ಬಳಗಕ್ಕೆ ಸೇರಿಸಿಕೊಳ್ಳಲಾಗಿದೆ. ಒಟ್ಟಿನಲ್ಲಿ 223 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಲಿರುವ ಪಂಜಾಬ್ ಕಿಂಗ್ಸ್ ಆರ್‌ಸಿಬಿ ಬೌಲರ್‌ಗಳನ್ನು ಹೇಗೆ ಎದುರಿಸಲಿದೆ ಎಂಬುದು ಈಗ ಕುತೂಹಲ ಮೂಡಿಸಿದೆ.












Click it and Unblock the Notifications