RCB vs PBKS: ಲಿವಿಂಗ್‌ಸ್ಟೋನ್ ಬದಲಾಗಿ ಸ್ಪೋಟಕ ಆಲ್‌ರೌಂಡರ್‌ ಆರ್‌ಸಿಬಿ ತಂಡಕ್ಕೆ ಎಂಟ್ರಿ

ಐಪಿಎಲ್ 2025ರ ಆವೃತ್ತಿಯಲ್ಲಿ ಆರ್ ಸಿಬಿ ತಂಡಕ್ಕೆ ತವರಿನ ಅಂಗಳವೇ ದೊಡ್ಡ ಸಮಸ್ಯೆಯಾಗಿದೆ. ಶುಕ್ರವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ ಸಿಬಿ ಸೋಲು ಕಂಡಿದೆ. ಈ ಆವೃತ್ತಿಯಲ್ಲಿ ಆರ್ ಸಿಬಿ ತವರಿನಲ್ಲಿ ಆಡಿದ ಮೂರು ಪಂದ್ಯಗಳಲ್ಲಿ ಸೋಲು ಕಂಡಿದ್ದು, ಹೊರಗಡೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇದೀಗ ಭಾನುವಾರ ಆರ್ ಸಿಬಿ ಮತ್ತೆ ಪಂಜಾಬ್ ಕಿಂಗ್ಸ್ ವಿರುದ್ಧ ಆಡಲು ಸಜ್ಜಾಗಿದೆ.

ಚಂಢೀಗಡದ ಮುಲ್ಲನ್‌ಪುರದಲ್ಲಿ ಈ ಪಂದ್ಯ ನಡೆಯಲಿದ್ದು ತವರಿನ ಸೊಲಿನ ಸೇಡನ್ನು ತೀರಿಸಿಕೊಳ್ಳಲು ಆರ್ ಸಿಬಿ ಸಜ್ಜಾಗಿದೆ. ತವರಿನ ಹೊರಗೆ ಆಡಿರುವ ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಮುಲ್ಲನ್‌ಪುರದಲ್ಲೂ ಪಂಜಾಬ್ ಅನ್ನು ಸೋಲಿಸುವ ವಿಶ್ವಾಸದಲ್ಲಿದೆ. ಈ ಪಂದ್ಯಕ್ಕಾಗಿ ಆರ್ ಸಿಬಿ ತಂಡದಲ್ಲಿ ಒಂದು ಬದಲಾವಣೆಯನ್ನು ನಿರೀಕ್ಷಿಸಲಾಗಿದೆ.

Rcb vs pbks jacob bethell likely replace liam livingstone ipl 2025

ಸ್ಪೋಟಕ ಆಲ್‌ರೌಂಡರ್ ಎಂಟ್ರಿ

ಲಿಯಾಮ್ ಲಿವಿಂಗ್‌ಸ್ಟೋನ್‌ ಈಗಾಗಲೇ 7 ಪಂದ್ಯಗಳಲ್ಲಿ ಆಡಿದ್ದರೂ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದಾರೆ. ಶುಕ್ರವಾರ ನಡೆದ ಪಂದ್ಯದಲ್ಲಿ ಕೂಡ ಕೇವಲ 4 ರನ್ ಗಳಿಸಿ ಔಟಾದರು. ಭಾನುವಾರ ನಡೆಯಲಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಲಿಯಾಮ್ ಲಿವಿಂಗ್‌ಸ್ಟೋನ್‌ರನ್ನು ಕೈಬಿಡುವ ಸಾಧ್ಯತೆ ಇದೆ.

Take a Poll

ಇಂಗ್ಲೆಂಡ್‌ನ ಮತ್ತೊಬ್ಬ ಸ್ಫೋಟಕ ಆಲ್‌ರೌಂಡರ್ ಜೇಕಬ್ ಬೆಥೆಲ್ ಅವರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಜೇಕಬ್ ಬೆಥೆಲ್ ಎಡಗೈ ಬ್ಯಾಟರ್ ಆಗಿದ್ದು ಸ್ಪಿನ್ ಬೌಲಿಂಗ್ ಕೂಡ ಮಾಡುತ್ತಾರೆ. ಬ್ಯಾಟಿಂಗ್‌ನಲ್ಲಿ ಮಾತ್ರವಲ್ಲದೆ ಬೌಲಿಂಗ್‌ನಲ್ಲೂ ಕೊಡುಗೆ ನೀಡುವ ಸಾಮರ್ಥ್ಯ ಹೊಂದಿದ್ದು ಅವರಿಗೆ ಅವಕಾಶ ನೀಡುವ ಬಗ್ಗೆ ಕೋಚ್ ಮತ್ತು ನಾಯಕ ನಿರ್ಧರಿಸಬಹುದು.

ರೊಮಾರಿಯೋ ಶೆಫರ್ಡ್ ಕೂಡ ಉತ್ತಮ ಆಯ್ಕೆ

ತಂಡದಲ್ಲಿರುವ ವೆಸ್ಟ್ ಇಂಡೀಸ್ ಸ್ಫೋಟಕ ಆಲ್‌ರೌಂಡರ್ ರೊಮಾರಿಯೋ ಶೆಫರ್ಡ್ ಕೂಡ ಅವಕಾಶ ಪಡೆಯುವ ಸಾಧ್ಯತೆ ಇದೆ. ಟಿಮ್ ಡೇವಿಡ್ ಉತ್ತಮ ಫಾರ್ಮ್‌ನಲ್ಲಿದ್ದು ಅವರನ್ನು ಬ್ಯಾಟಿಂಗ್‌ನಲ್ಲಿ ಮೇಲಿನ ಕ್ರಮಾಂಕದಲ್ಲಿ ಕಳಿಸಿದರೆ, ರೊಮಾರಿಯೋ ಶೆಫರ್ಡ್ ಫಿನಿಷರ್ ಆಗಿ ಅಬ್ಬರಿಸಬಹುದು. ಅಲ್ಲದೆ ರೊಮಾರಿಯೋ ಶೆಫರ್ಡ್ ಮಧ್ಯಮ ವೇಗಿಯಾಗಿದ್ದು ಬೌಲಿಂಗ್ ಕೂಡ ಮಾಡಬಲ್ಲರು.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ

ಆರ್ ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.

ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಜಾನ್ಸೆನ್, ಹರ್ಪ್ರೀತ್ ಬ್ರಾರ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಶದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+