Virat Kohli: ಐಪಿಎಲ್‌ನಲ್ಲಿ ಸಾರ್ವಕಾಲಿಕ ದಾಖಲೆ ಬರೆದ ವಿರಾಟ್ ಕೊಹ್ಲಿ
ಭಾನುವಾರ ಮುಲ್ಲನ್‌ಪುರದಲ್ಲಿ ನಡೆದ ಪಂಜಾಬ್ ಕಿಂಗ್ಸ್ ವಿರುದ್ದದ ಐಪಿಎಲ್ 2025ರ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಬೆಂಗಳೂರಿನಲ್ಲಿ ಪಂಜಾಬ್ ವಿರುದ್ಧದ ಸೋಲಿಗೆ ಸೇಡು ತೀರಿಸಿಕೊಂಡಿದೆ. ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅಮೋಘ ಅರ್ಧಶತಕ ಸಿಡಿಸುವ ಮೂಲಕ ಆರ್ ಸಿಬಿ ಸುಲಭ ಗೆಲುವಿಗೆ ಕಾರಣವಾದರು.
ಟಾಸ್ ಗೆದ್ದ ಆರ್ ಸಿಬಿ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 157 ರನ್ ಗಳಿಸಿತು. ಈ ಸಾಧಾರಣ ಮೊತ್ತವನ್ನು ಬೆನ್ನಟ್ಟಿದ ಆರ್ ಸಿಬಿ 18.5 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 159 ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು.

ಆರ್ ಸಿಬಿ ತಂಡದ ಮೊತ್ತ 6 ರನ್ ಆಗಿದ್ದಾಗಲೇ ಫಿಲ್ ಸಾಲ್ಟ್ (1 ರನ್) ಔಟಾದರು. ಈ ಹಂತದಲ್ಲಿ ಜೊತೆಯಾದ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಎರಡನೇ ವಿಕೆಟ್‌ಗೆ 103 ರನ್‌ಗಳ ಜೊತೆಯಾಟ ಆಡಿದರು. ದೇವದತ್ ಪಡಿಕ್ಕಲ್ 35 ಎಸೆತಗಳಲ್ಲಿ 5 ಬೌಂಡರಿ 4 ಸಿಕ್ಸರ್ ಸಹಿತ 61 ರನ್ ಗಳಿಸಿದರು. ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 5 ಬೌಂಡರಿ 1 ಸಿಕ್ಸರ್ ಸಹಿತ ಅಜೇಯ 73 ರನ್ ಗಳಿಸಿದರು.
ವಾರ್ನರ್ ದಾಖಲೆ ಮುರಿದ ಕೊಹ್ಲಿ
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 67ನೇ ಐಪಿಎಲ್ ಅರ್ಧಶತಕ ಸಿಡಿಸುವ ಮೂಲಕ ಡೇವಿಡ್ ವಾರ್ನರ್ ಅವರ ದಾಖಲೆಯನ್ನು ಹಿಂದಿಕ್ಕಿ ಸಾರ್ವಕಾಲಿಕ ದಾಖಲೆ ಬರೆದರು. ಈ ಆವೃತ್ತಿಯಲ್ಲಿ ಅವರು ಈಗಾಗಲೇ 4 ಅರ್ಧಶತಕ ಸಿಡಿಸಿದ್ದಾರೆ. ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಸಿಡಿಸಿದ್ದಾಗ ಟಿ20 ಕ್ರಿಕೆಟ್‌ನಲ್ಲಿ 100 ಅರ್ಧಶತಕ ಸಿಡಿಸಿದ ದಾಕಲೆ ಮಾಡಿದರು.
ಕೊಹ್ಲಿ ಈಗ ಐಪಿಎಲ್‌ನಲ್ಲಿ ಅತಿ ಹೆಚ್ಚು ಅರ್ಧಶತಕ ಗಳಿಸಿದ ಬ್ಯಾಟ್ಸ್‌ಮನ್ ಆಗಿದ್ದಾರೆ. ಆರ್‌ಆರ್ ವಿರುದ್ಧ ಅಜೇಯ 62 ರನ್ ಗಳಿಸಿದ ನಂತರ ಅವರು ಡೇವಿಡ್ ವಾರ್ನರ್ ಅವರ ದಾಖಲೆ ಸರಿಗಟ್ಟಿದ್ದರು. ಪಂಜಾಬ್ ಕಿಂಗ್ಸ್ ವಿರುದ್ಧದ ಈ ಅರ್ಧಶತಕ ಸಿಡಿಸಿದ ಬಳಿಕ ಅವರು ಈಗ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.
ಐಪಿಎಲ್‌ನಲ್ಲಿ ಅತಿ ಅರ್ಧಶತಕ ಸಿಡಿಸಿದ ಆಟಗಾರರು
ವಿರಾಟ್ ಕೊಹ್ಲಿ - 67 ಅರ್ಧಶತಕ, 8 ಶತಕ
ಡೇವಿಡ್ ವಾರ್ನರ್ - 66 ಅರ್ಧಶತಕ, 4 ಶತಕ
ಶಿಖರ್ ಧವನ್ - 53 ಅರ್ಧಶತಕ, 2 ಶತಕ
ಕೆಎಲ್ ರಾಹುಲ್ - 43 ಅರ್ಧಶತಕ, 4 ಶತಕ












Click it and Unblock the Notifications