Virat Kohli: ಧರ್ಮಶಾಲಾದಲ್ಲಿ ಕೊಹ್ಲಿ ಶತಕ ಜಸ್ಟ್ ಮಿಸ್: ಆದ್ರೂ ಹಲವು ದಾಖಲೆ ಬರೆದ 'ಕಿಂಗ್ ಕೊಹ್ಲಿ'
ಧರ್ಮಶಾಲಾದಲ್ಲಿ ನಡೆಯುತ್ತಿರುವ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 241 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ಆರಂಭದಲ್ಲೇ ನಾಯಕ ಫಾಫ್ ಡುಪ್ಲೆಸಿಸ್ ಅವರ ವಿಕೆಟ್ ಕಳೆದುಕೊಂಡಿತು. ವಿರಾಟ್ ಕೊಹ್ಲಿ ಅವರಿಗೆ ರನ್ ಖಾತೆ ತೆರೆಯುವ ಮುನ್ನವೇ ಜೀವದಾನ ಪಡೆದುಕೊಂಡರು.

ವಿಲ್ ಜ್ಯಾಕ್ಸ್ ಕೂಡ 7 ಎಸೆತಗಳಲ್ಲಿ 12 ರನ್ ಗಳಿಸಿ ಔಟಾದರು. ಬಳಿಕ ಜೊತೆಯಾದ ರಜತ್ ಪಟಿದಾರ್ ಮತ್ತು ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ಬೌಲರ್ ಗಳನ್ನು ತರಾಟೆಗೆ ತೆಗೆದುಕೊಂಡರು. ರಜತ್ ಪಟಿದಾರ್ 23 ಎಸೆತಗಳಲ್ಲಿ 3 ಬೌಂಡರಿ 6 ಭರ್ಜರಿ ಸಿಕ್ಸರ್ ನೆರವಿನಿಂದ 55 ರನ್ ಗಳಿಸಿದರು.
ಬಳಿಕ ವಿರಾಟ್ ಕೊಹ್ಲಿ ಜೊತೆಯಾದ ಕ್ಯಾಮೆರಾನ್ ಗ್ರೀನ್ ಆರ್ ಸಿಬಿ ಬೃಹತ್ ಮೊತ್ತ ಕಲೆಹಾಕಲು ಸಹಾಯ ಮಾಡಿದರು. ವಿರಾಟ್ ಕೊಹ್ಲಿ ಕೇವಲ 47 ಎಸೆತಗಳಲ್ಲಿ 7 ಬೌಂಡರಿ 6 ಭರ್ಜರಿ ಸಿಕ್ಸರ್ ನೆರವಿನಿಂದ 92 ರನ್ ಗಳಿಸಿ ಔಟಾದರು. ಶತಕ ಗಳಿಸುವಲ್ಲಿ ವಿಫಲವಾದರು ಹಲವು ದಾಖಲೆ ಬರೆದರು.
ಹಲವು ದಾಖಲೆ ಬರೆದ ಕೊಹ್ಲಿ
ಐಪಿಎಲ್ ಇತಿಹಾಸದಲ್ಲಿ ಮೂರು ಎದುರಾಳಿ ತಂಡಗಳ ವಿರುದ್ಧ 1000 ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟರ್ ಎನ್ನುವ ದಾಖಲೆ ಬರೆದರು. ಸಿಎಸ್‌ಕೆ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಪಂಜಾಬ್ ಕಿಂಗ್ಸ್ ವಿರುದ್ಧ ವಿರಾಟ್ ಕೊಹ್ಲಿ 1000 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ರೋಹಿತ್ ಶರ್ಮಾ ಮತ್ತು ಡೇವಿಡ್ ವಾರ್ನರ್ ಮಾತ್ರ ಎರಡು ತಂಡಗಳ ವಿರುದ್ಧ ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ಸಾಧನೆ ಮಾಡಿದ್ದಾರೆ.
ಐಪಿಎಲ್‌ನಲ್ಲಿ ನಾಲ್ಕು ಆವೃತ್ತಿಗಳಲ್ಲಿ 600ಕ್ಕೂ ಹೆಚ್ಚು ರನ್ ಗಳಿಸುವ ಮೂಲಕ ಈ ಸಾಧನೆ ಮಾಡಿದ ಕೆಎಲ್ ರಾಹುಲ್ ಅವರ ದಾಖಲೆ ಸರಿಗಟ್ಟಿದರು. ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿ 4 ಬಾರಿ ಐಪಿಎಲ್‌ನಲ್ಲಿ 600ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ಕ್ರಿಸ್ ಗೇಲ್ ಮತ್ತು ಡೇವಿಡ್ ವಾರ್ನರ್ ಮೂರು ಬಾರಿ ಈ ಸಾಧನೆ ಮಾಡಿದ್ದಾರೆ.












Click it and Unblock the Notifications