RCB vs RR: ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬೌಲಿಂಗ್ ಆಯ್ಕೆ; ಪ್ಲೇಯಿಂಗ್ 11, ಪಿಚ್ ವರದಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ ಎಲಿಮಿನೇಟರ್ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಈ ಪಂದ್ಯದಲ್ಲಿ ಗೆಲ್ಲುವ ತಂಡ ಮೇ 24 ರಂದು ಕ್ವಾಲಿಫೈಯರ್ 2 ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೆಣೆಸಲಿದ್ದು, ಸೋತ ತಂಡ ಟೂರ್ನಿಯಿಂದ ಹೊರಬೀಳಲಿದೆ.

RCB vs RR Rajasthan Royals Win the tos opted Bowl in IPL 2024 Eliminator Playing XI Pitch report

ಸತತ ಆರು ಪಂದ್ಯಗಳನ್ನು ಗೆದ್ದು ಪ್ಲೇಆಫ್‌ಗೆ ಬಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಚ್ಚಿನ ಆತ್ಮ ವಿಶ್ವಾಸದಲ್ಲೇ ಕಣಕ್ಕಿಳಿಯಲಿದೆ. ರಾಜಸ್ಥಾನ ರಾಯಲ್ಸ್ ಕೊನೆಯ ಐದು ಪಂದ್ಯಗಳಲ್ಲಿ 4 ಪಂದ್ಯ ಸೋತಿದ್ದರೆ ಒಂದು ಪಂದ್ಯ ಮಳೆಯಿಂದ ರದ್ದಾಗಿದೆ.

ಪಿಚ್ ವರದಿ

ಪಿಚ್ ಬ್ಯಾಟರ್ ಗಳಿಗೆ ಸಹಕಾರಿಯಾಗಿದ್ದು, ಆರಂಭದಲ್ಲಿ ಬ್ಯಾಟರ್ ಗಳು ಎಚ್ಚರಿಕೆಯಿಂದ ಆಡಬೇಕಿದೆ. ಮಂಜು ಬೀಳುವ ಸಾಧ್ಯತೆ ಇರುವುದರಿಂದ ಮೊದಲು ಬ್ಯಾಟಿಂಗ್ ಮಾಡುವ ತಂಡ ಬೃಹತ್ ಮೊತ್ತ ಕಲೆಹಾಕಿದರೆ ಮಾತ್ರ ಎದುರಾಳಿಯನ್ನು ಕಟ್ಟಿಹಾಕಬಹುದು.

ಉಭಯ ತಂಡಗಳ ಆಡುವ ಬಳಗ

ಆರ್ ಸಿಬಿ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಮಹಿಪಾಲ್ ಲೊಮ್ರೋರ್, ಯಶ್ ದಯಾಳ್, ಕರಣ್ ಶರ್ಮಾ, ಮೊಹಮ್ಮದ್ ಸಿರಾಜ್, ಲಾಕಿ ಫರ್ಗ್ಯುಸನ್.

ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕ್ಯಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಅವೇಶ್ ಖಾನ್, ಸಂದೀಪ್ ಶರ್ಮಾ, ಯುಜ್ವೇಂದ್ರ ಚಾಹಲ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+