RCB vs RR: ರಾಜಸ್ಥಾನ ರಾಯಲ್ಸ್‌ಗೆ ಸವಾಲಿನ ಗುರಿ ನೀಡಿದ ಆರ್‌ಸಿಬಿ
ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ರಾಜಸ್ಥಾನ ರಾಯಲ್ಸ್‌ಗೆ 173 ರನ್‌ಗಳ ಗುರಿ ನೀಡಿದೆ.
ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಎಚ್ಚರಿಕೆಯ ಆರಂಭ ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರಂಭದಲ್ಲೇ ನಾಯಕ ಫಾಫ್ ಡುಪ್ಲೆಸಿಸ್ ಅವರ ವಿಕೆಟ್ ಕಳೆದುಕೊಂಡಿತು.

ಡುಪ್ಲೆಸಿಸ್ 14 ಎಸೆತಗಳಲ್ಲಿ 17 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ 24 ಎಸೆತಗಳಲ್ಲಿ 34 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಕ್ಯಾಮೆರಾನ್ ಗ್ರೀನ್ 21 ಎಸೆತಗಳಲ್ಲಿ 27 ರನ್ ಗಳಿಸಿ ಔಟಾದರೆ, ರಜತ್ ಪಟಿದಾರ್ 22 ಎಸೆತಗಳಲ್ಲಿ 34 ರನ್‌ಗಳಿಗೆ ಔಟಾದರು.
ಗ್ಲೆನ್ ಮ್ಯಾಕ್ಸ್‌ವೆಲ್ ಮೊದಲ ಎಸೆತದಲ್ಲೇ ಔಟಾಗುವ ಮೂಲಕ ಮತ್ತೊಮ್ಮೆ ನಿರಾಸೆ ಮೂಡಿಸಿದರು. ದಿನೇಶ್ ಕಾರ್ತಿಕ್ ಕೂಡ 13 ಎಸೆತಗಳಲ್ಲಿ ಕೇವಲ 11 ರನ್ ಗಳಿಸಿದರು. ಮಹಿಪಾಲ್ ಲೊಮ್ರೋರ್ 17 ಎಸೆತಗಳಲ್ಲಿ 32 ರನ್ ಗಳಿಸಿ ಔಟಾದರು. ಸ್ವಪ್ನಿಲ್ ಸಿಂಗ್ 4 ಎಸೆತಗಳಲ್ಲಿ 9 ರನ್ ಗಳಿಸಿದರು. ಅಂತಿಮವಾಗಿ ಆರ್ ಸಿಬಿ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 172 ರನ್ ಗಳಿಸಿತು.
ರಾಜಸ್ಥಾನ ರಾಯಲ್ಸ್ ಪರವಾಗಿ ಟ್ರೆಂಟ್ ಬೌಲ್ಟ್ 4 ಓವರ್ ಗಳಲ್ಲಿ ಕೇವಲ 16 ರನ್ ನೀಡಿ ಒಂದು ವಿಕೆಟ್ ಪಡೆದರು. ಆವೇಶ್ ಖಾನ್ 3 ವಿಕೆಟ್ ಪಡೆದರೆ, ರವಿಚಂದ್ರನ್ ಅಶ್ವಿನ್ 2 ವಿಕೆಟ್ ಪಡೆದುಕೊಂಡರು.












Click it and Unblock the Notifications