RCB vs RR: ಬೆಂಗಳೂರಿನಲ್ಲಿ ಮತ್ತೊಂದು ಪಂದ್ಯಕ್ಕೆ ಆರ್‌ಸಿಬಿ ಸಜ್ಜು: RR ತಂಡದ ಈ 3 ಆಟಗಾರರಿಂದ ಇದೆ ದೊಡ್ಡ ಕಂಟಕ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗುರುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಿರುವ ಆರು ಪಂದ್ಯಗಳಲ್ಲಿ ಆರ್‌ಸಿಬಿ ತಂಡ 3ನೇ ಗೆಲುವು ಸಾಧಿಸಿದಂತಾಗಿದೆ. ಇದೀಗ ಆರ್‌ಸಿಬಿ ತಂಡ ತನ್ನ 7ನೇ ಪಂದ್ಯವನ್ನಾಡಲಿದ್ದು ತವರಿನಲ್ಲೇ ಈ ಪಂದ್ಯ ನಡೆಯಲಿದೆ. ಎರಡು ಪಂದ್ಯಗಳಲ್ಲಿ ಆರ್‌ಸಿಬಿ ತಂಡ ತವರಿನಲ್ಲಿ ಸೋಲು ಅನುಭವಿಸಿದ್ದು ಇದೀಗ ರಾಜಸ್ಥಾನ್ ರಾಯಲ್ಸ್ ತಂಡ ಆರ್‌ಸಿಬಿ ಸವಾಲೊಡ್ಡಲು ಸಜ್ಜಾಗಿದೆ.
ಆರ್‌ಸಿಬಿ ತಂಡದ ಇತಿಹಾಸವನ್ನು ನೋಡಿದರೆ ತವರಿನಲ್ಲಿ ಹೇಳಿಕೊಳ್ಳುವಂತಾ ದಾಖಲೆ ಹೊಂದಿಲ್ಲ. ಈ ಬಾರಿಯ ಐಪಿಎಲ್‌ನಲ್ಲಿಯೂ ಸಾಕಷ್ಟು ಪೈಪೋಟಿಯ ಪ್ರದರ್ಶನ ನೀಡಿದ್ದರೂ ತವರಿನಲ್ಲಿ ಈವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಆರ್‌ಸಿಬಿ ಗೆದ್ದಿದ್ದು ಎರಡು ಪಂದ್ಯಗಳನ್ನು. ಉಳಿದ ಎರಡು ಪಂದ್ಯಗಳಲ್ಲಿ ಸೋಲಿನ ರುಚಿ ಕಂಡಿದೆ. ಹೀಗಾಗಿ ಸಂಜು ಸ್ಯಾಮ್ಸನ್ ನೇತೃತ್ವದ ಆರ್‌ಆರ್ ತಂಡದ ವಿರುದ್ಧವೂ ಆರ್‌ಸಿಬಿ ತಂಡ ಕಠಿಣ ಪೈಪೊಟಿ ಎದುರಿಸಲಿದೆ.

ಇನ್ನು ಪ್ರಸ್ತುತ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ತಂಡ ಅದ್ಭುತ ಪ್ರದರ್ಶನ ನೀಡಿ ಆತ್ಮವಿಶ್ವಾಸದಲ್ಲಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಆರ್‌ಆರ್ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯಲಿದೆ. ಈ ಪೈಪೋಟಿಯ ಕದನದಲ್ಲಿ ಆರ್‌ಆರ್ ತಂಡದ ಮೂವರು ಆಟಗಾರರು ಆರ್‌ಸಿಬಿ ತಂಡಕ್ಕೆ ಕಂಟಕವಾಗುವ ಸಾಧ್ಯತೆ ದಟ್ಟವಾಗಿದೆ. ಆ ಮೂವರು ಆಟಗಾರರು ಯಾರು? ಮುಂದೆ ಓದಿ..
ಆರಂಭಿಕ ಆಟಗಾರ ಜೋಸ್ ಬಟ್ಲರ್
ರಾಜಸ್ಥಾನ್ ರಾಯಲ್ಸ್ ತಂಡದ ಆರಂಬಿಕ ಆಟಗಾರ ಜೋಸ್ ಬಟ್ಲರ್ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿಯೂ ರಾಜಸ್ಥಾನ್ ರಾಯಲ್ಸ್ ಪರವಾಗಿ ಅದ್ಭುತ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. ಊಗಾಗಲೇ ಆಡಿರುವ 6 ಪಂದ್ಯಗಳಲ್ಲಿ ಜೋಸ್ ಬಟ್ಲರ್ 3 ಅರ್ಧ ಶತಕ ಸಿಡಿಸಿದ್ದು ಈ ಆವೃತ್ತಿಯಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ. ಯಾವುದೇ ತಂಡದ ವಿರುದ್ಧವೂ ಅತ್ಯಂತ ಅಪಾಯಕಾರಿಯಾಗಬಲ್ಲ ಸಾಮರ್ಥ್ಯ ಹೊಂದಿರುವ ಜೋಸ್ ಬಟ್ಲರ್ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಂತಾ ಬ್ಯಾಟಿಂಗ್‌ಗೆ ನೆರವು ನೀಡುವ ಪಿಚ್‌ನಲ್ಲಿ ಮತ್ತಷ್ಟು ಅಪಾಯಕಾರಿ ಎನಿಸಲಿದ್ದಾರೆ. ಹೀಗಾಗಿ ಬಟ್ಲರ್ ವಿರುದ್ಧ ಆರ್‌ಸಿಬಿ ವಿಶೇಷ ರಣತಂತ್ರವನ್ನು ಹೇಣೆಯುವುದು ಅಗತ್ಯವಾಗಿದೆ.
PBKS vs RCB: 3ನೇ ಗೆಲುವು ಸಾಧಿಸಿದ ಆರ್‌ಸಿಬಿ; ಗೆದ್ದ ಬಳಿಕ 'ನಾಯಕ' ವಿರಾಟ್ ಕೊಹ್ಲಿ ಹೇಳಿದ್ದಿಷ್ಟು!
ಆರ್‌ಆರ್ ನಾಯಕ ಸಂಜು ಸ್ಯಾಮ್ಸನ್
ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಈ ಬಾರಿಯ ಐಪಿಎಲ್‌ನಲ್ಲಿಯೂ ಉತ್ತಮ ಪ್ರದರ್ಶನ ನೀಡಿಕೊಂಡು ಬಂದಿದ್ದಾರೆ. ಏಕಾಂಗಿಯಾಗಿ ತಂಡವನ್ನು ಗೆಲ್ಲಿಸುವ ಸಾಮರ್ಥ್ಯ ಹೊಂದಿರುವ ಸಂಜು ಸ್ಯಾಮ್ಸನ್ ಸ್ಪೋಟಕ ಪ್ರದರ್ಶನ ಬ್ಯಾಟಿಂಗ್‌ಗೆ ಹೆಸರುವಾಸಿ. ಇಂಥಾ ದಾಂಡಿಗನಿಗೆ ಚಿನ್ನಸ್ವಾಮಿ ಕ್ರೀಡಾಂಗಣದಂತಾ ಪಿಚ್ ದೊರೆತರೆ ರನ್ ಮಳೆ ಹರಿಸಲು ಕಾಯುತ್ತಿರುತ್ತಾರೆ. ಹೀಗಾಗಿ ಸಂಜು ಸ್ಯಾಮ್ಸನ್ ಕೂಡ ಆರ್‌ಸಿಬಿ ತಂಡಕ್ಕೆ ಅಪಾಯಕಾರಿ ಎನಿಸಬಲ್ಲ ಆಟಗಾರ ಎಂಬುದರಲ್ಲಿ ಅನುಮಾನವಿಲ್ಲ.
ಸ್ಪಿನ್ನರ್ ಯುಜುವೇಂದ್ರ ಚಾಹಲ್
ಆರ್‌ಸಿಬಿ ತಂಡದ ಮಾಜಿ ಸ್ಪಿನ್ ಅಸ್ತ್ರ ಯುಜುವೇಂದ್ರ ಚಾಹಲ್ ಈ ಬಾರಿ ಆರ್‌ಸಿಬಿ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯುತ್ತಿದ್ದಾರೆ. ಕಳೆದ ವರ್ಷದ ಆವೃತ್ತಿಗೂ ಮುನ್ನ ನಡೆದ ಮೆಗಾ ಹರಾಜಿನಲ್ಲಿ ಆರ್‌ಸಿಬಿ ತಂಡದಿಂದ ಚಾಹಲ್ ಅವರನ್ನು ಬಿಡುಗಡೆಗೊಳಿಸಿದ ಬಳಿಕ ಚಾಹಲ್ ರಾಜಸ್ಥಾನ್ ರಾಯಲ್ಸ್ ತಂಡದ ಪಾಲಾದರು. ಆರ್‌ಆರ್ ಪರವಾಗಿ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುತ್ತಿರುವ ಚಾಹಲ್ ತನ್ನ ಹಳೆಯ ತಂಡದ ವಿರುದ್ಧ ಅಬ್ಬರಿಸುವ ಗುರಿ ಹೊಂದಿರುವುದರಲ್ಲಿ ಅನುಮಾನವಿಲ್ಲ. ಅಲ್ಲದೆ ಆರ್‌ಸಿಬಿ ತಂಡದ ಬಹುತೇಕ ದಾಂಡಿಗರು ಸ್ಪಿನ್ನರ್‌ಗಳ ವಿರುದ್ಧ ಪರದಾಟ ನಡೆಸುತ್ತಿರುವುದು ಈ ಆವೃತ್ತಿಯಲ್ಲಿ ಸ್ಪಷ್ಟವಾಗಿ ವ್ಯಕ್ತವಾಗಿದೆ. ಈ ಎಲ್ಲ ಕಾರಣಗಳಿಂದಾಗಿ ಚಾಹಲ್ ಈ ಪಂದ್ಯದಲ್ಲಿ ಆರ್‌ಸಿಬಿಗೆ ಕಂಟಕವಾಗುವುದರಲ್ಲಿ ಅನುಮಾನವಿಲ್ಲ.












Click it and Unblock the Notifications