RCB Vs SRH: ಮತ್ತೊಂದು ಹೈಸ್ಕೋರಿಂಗ್ ಪಂದ್ಯ? ಪಿಚ್ ವರದಿ, ಪ್ಲೇಯಿಂಗ್ ಇಲೆವೆನ್

ಐಪಿಎಲ್ 2024 ರ ಆವೃತ್ತಿಯಲ್ಲಿ ಆಡಿರುವ ಎಂಟು ಪಂದ್ಯಗಳಲ್ಲಿ ಒಂದು ಪಂದ್ಯ ಮಾತ್ರ ಗೆದ್ದು ಏಳರಲ್ಲಿ ಸೋತಿರುವ ಆರ್​​ಸಿಬಿ ಮುಂದಿನ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲು ಸಜ್ಜಾಗಿದೆ.

ಏಪ್ರಿಲ್ 25ರ ಗುರುವಾರ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಕೆಕೆಆರ್ ವಿರುದ್ಧ ಒಂದು ರನ್‌ಗಳ ಅಂತರದಲ್ಲಿ ಸೋಲು ಕಂಡ ಆರ್​​ಸಿಬಿ ಹೈದರಾಬಾದ್‌ಗೆ ತೆರಳಿದ್ದು, ಅಭ್ಯಾಸ ನಡೆಸುತ್ತಿದೆ.

RCB vs SRH Another high Score Game Loading in Hyderabad RCB vs SRH Playing XI Pitch Report

ಪ್ಲೇ ಆಫ್ ಕನಸು ಬಹುತೇಕ ಕಮರಿದ್ದರು, ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲುವ ಮೂಲಕ ಮುಂದಿನ ಆವೃತ್ತಿಗೆ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಯೋಜಿಸುತ್ತಿದೆ. ಆದರೆ ಪಂದ್ಯದಿಂದ ಪಂದ್ಯಕ್ಕೆ ಹಲವು ದಾಖಲೆಗಳನ್ನು ಬರೆಯುತ್ತಾ ಸಾಗುತ್ತಿರುವ ಸನ್‌ರೈಸರ್ಸ್ ಹೈದರಾಬಾದ್ ಇನ್ನಷ್ಟು ದಾಖಲೆಗಳನ್ನು ಬರೆಯಲು ಸಜ್ಜಾಗಿದೆ.

ಪಿಚ್ ಹೇಗಿರಲಿದೆ?

ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಪಿಚ್ ಬ್ಯಾಟಿಂಗ್ ಸ್ನೇಹಿ ಆಗಿರಲಿದೆ. ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಇದೇ ಅಂಗಳದಲ್ಲಿ 277 ರನ್ ಕಲೆ ಹಾಕಿತ್ತು. ಈಗ ಆರ್​​ಸಿಬಿ ವಿರುದ್ಧದ ಪಂದ್ಯದಲ್ಲಿ ಕೂಡ ರನ್ ಹೊಳೆ ಹರಿಯುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 288 ರನ್ ಗಳಿಸಿದ್ದರು, ಆರ್ ಸಿಬಿ 262 ರನ್ ಗಳಿಸುವ ಮೂಲಕ ವಿಶ್ವದಾಖಲೆ ಬರೆದಿತ್ತು. ಚೇಸಿಂಗ್ ಮಾಡುವಾಗ ಇದು ತಂಡವೊಂದು ಗಳಿಸಿದ ಅತಿ ಹೆಚ್ಚು ಸ್ಕೋರ್ ಆಗಿದೆ.

ಆರ್​​ಸಿಬಿ ತಂಡದಲ್ಲಿ ಹೆಚ್ಚಿನ ಬದಲಾವಣೆ ನಿರೀಕ್ಷೆ ಮಾಡಲಾಗದು. ಮ್ಯಾಕ್ಸ್‌ವೆಲ್ ಫಿಟ್ ಆದರೆ ಕ್ಯಾಮೆರಾನ್ ಗ್ರೀನ್ ಬದಲಿಗೆ ತಂಡಕ್ಕೆ ವಾಪಸಾಗುವ ಸಾಧ್ಯತೆ ಇದೆ. ಉಳಿದಂತೆ ಕೆಕೆಆರ್ ವಿರುದ್ಧದ ತಂಡವೇ ಬಹುತೇಕ ಕಣಕ್ಕಿಳಿಯಲಿದೆ.

ಸಂಭಾವ್ಯ ಆಡುವ ಬಳಗ

ಆರ್​​ಸಿಬಿ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜ್ಯಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್ / ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್, ಯಶ್ ದಯಾಳ್, ಮೊಹಮ್ಮದ್ ಸಿರಾಜ್, ಕರಣ್ ಶರ್ಮಾ, ಲಾಕಿ ಫರ್ಗ್ಯುಸನ್.

ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಐಡೆನ್ ಮಾರ್ಕ್ರಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ನಿತೀಶ್ ರೆಡ್ಡಿ, ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ನಟರಾಜನ್, ಪ್ಯಾಟ್ ಕಮ್ಮಿನ್ಸ್ (ನಾಯಕ),

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+