ಇಶಾನ್ ಕಿಶನ್, ಅಭಿಷೇಕ್, ಕ್ಲಾಸೆನ್ 'ಕ್ಲಾಸಿಕ್' ಆಟ, ಆರ್‌ಸಿಬಿಗೆ 255 ರನ್‌ಗಳ ಬೃಹತ್ ಗುರಿ ನೀಡಿದ ಎಸ್‌ಆರ್‌ಎಚ್
RCB Vs SRH IPL 2026: ಹೈದರಾಬಾದ್‌ನಲ್ಲಿ ಶುಕ್ರವಾರ (ಮೇ 22) ನಡೆಯುತ್ತಿರುವ ಐಪಿಎಲ್ 2026ರ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಆರ್‌ಸಿಬಿ ವಿರುದ್ಧ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 255 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದೆ. ಇಶಾನ್ ಕಿಶಾನ್, ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಎಸ್‌ಆರ್‌ಎಚ್ ಇಷ್ಟು ರನ್‌ಗಳನ್ನು ಕಲೆಹಾಕಲು ಸಾಧ್ಯವಾಯಿತು.
ಇಶಾನ್ ಕಿಶನ್ 46 ಎಸೆತಗಳಲ್ಲಿ 79 ರನ್ ಬಾರಿಸಿ ತಂಡದ ಮೊತ್ತ ಏರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಅಭಿಷೇಕ್ ಶರ್ಮಾ ಕೇವಲ 22 ಎಸೆತಗಳಲ್ಲಿ 4 ಬೌಂಡರಿ, 5 ಸಿಕ್ಸರ್‌ಗಳ ಸಹಿತ 56 ರನ್ ಸಿಡಿಸಿ ಉತ್ತಮ ಆರಂಭ ನೀಡಿದರು. ಇನ್ನೂ ಹೆನ್ರಿಚ್ ಕ್ಲಾಸೆನ್ ಕೇವಲ 24 ಎಸೆತಗಳಲ್ಲಿ 51 ರನ್ ಚಚ್ಚಿದರು.

ಸದ್ಯ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳನ್ನು ಖಚಿತಪಡಿಸಿಕೊಳ್ಳಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕನಿಷ್ಠ 166 ರನ್ ಗಳಿಸಬೇಕಿದೆ. ಮತ್ತೊಂದೆಡೆ ಹೈದರಾಬಾದ್ ತಂಡವು ಅಗ್ರ ಎರಡು ಸ್ಥಾನಕ್ಕೇರಬೇಕಾದರೆ ಆರ್‌ಸಿಬಿ ವಿರುದ್ಧ 90 ಅಥವಾ ಅದಕ್ಕಿಂತ ಹೆಚ್ಚಿನ ರನ್‌ಗಳ ಅಂತರದಿಂದ ಜಯಗಳಿಸಬೇಕಿದೆ.












Click it and Unblock the Notifications