RCB Playing 11: ಎಸ್‌ಆರ್‌ಎಚ್ ವಿರುದ್ಧ ಕಣಕ್ಕಿಳಿಯಲಿದ್ದಾರಾ ಫಿಲ್ ಸಾಲ್ಟ್? ಹೀಗಿದೆ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11
RCB Vs SRH IPL 2026: ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶುಕ್ರವಾರ (ಮೇ 22) ನಡೆಯುವ ಐಪಿಎಲ್ 2026ರ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಹಾಗಾದ್ರೆ ಪ್ಲೇಯಿಂಗ್ 11 ಹೇಗಿರಲಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2026ರ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲು ಸಜ್ಜಾಗಿದೆ. ಈಗಾಗಲೇ ಈ ಪಂದ್ಯಕ್ಕಾಗಿ ತಂಡವು ಹೈದರಾಬಾದ್‌ಗೆ ಪ್ರಯಾಣಿಸಿದೆ. ಉದ್ಘಾಟನಾ ಪಂದ್ಯದಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಅಂದು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಗೆಲುವು ಸಾಧಿಸಿತ್ತು. ಇದೀಗ ಶುಕ್ರವಾರ ನಡೆಯುವ ಅತ್ಯಂತ ನಿರ್ಣಾಯಕ ಪಂದ್ಯದಲ್ಲೂ ಇವೆರಡೂ ತಂಡಗಳು ಮತ್ತೆ ಮುಖಾಮುಖಿಯಾಗುತ್ತಿವೆ.

ಗೆಲುವಿನ ಭರವಸೆಯಲ್ಲಿ ಆರ್‌ಸಿಬಿ
ರಜತ್ ಪಾಟಿದಾರ್ ನಾಯಕತ್ವದ ಆರ್‌ಸಿಬಿ ತಂಡವು ಈವರೆಗೂ ಆಡಿದ 13 ಪಂದ್ಯಗಳಲ್ಲಿ 8ರಲ್ಲಿ ಗೆದ್ದು 18 ಅಂಕಗಳನ್ನು ಗಳಿಸಿ ಈಗಾಗಲೇ ಪ್ಲೇ-ಆಫ್‌ಗೆ ಅರ್ಹತೆ ಪಡೆದಿದೆ. ಒಂದು ವೇಳೆ ಎಸ್‌ಆರ್‌ಎಚ್ ವಿರುದ್ಧದ ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಬೆಂಗಳೂರು ತಂಡಕ್ಕೆ ಕ್ವಾಲಿಫೈಯರ್ 1ರಲ್ಲಿ ಸ್ಥಾನ ಖಚಿತವಾಗಲಿದೆ. ಇದರಿಂದ ಫೈನಲ್ ತಲುಪಲು ಎರಡು ಅವಕಾಶಗಳನ್ನು ಪಡೆಯಬಹುದು. ಆದ್ದರಿಂದ ಆರ್‌ಸಿಬಿ ಗೆಲುವಿನ ಭರವಸೆಯಲ್ಲಿದೆ.
ಉತ್ತಮ ಲಯದಲ್ಲಿರುವ ರಜತ್ ಪಡೆ
ಈ ಬಾರಿಯ ಟೂರ್ನಿಯ ಲೀಗ್ ಹಂತದಲ್ಲಿ ಆರಂಭದಿಂದಲೂ ಆರ್‌ಸಿಬಿ ಅದ್ಭುತವಾಗಿ ಪ್ರದರ್ಶನ ನೀಡುವ ಮೂಲಕ ಬಲಿಷ್ಠ ತಂಡ ಎನಿಸಿಕೊಂಡಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿರುವ ಆರ್‌ಸಿಬಿ ಈ ಬಾರಿಯೂ ಟ್ರೋಫಿ ಗೆಲ್ಲುವ ತಂಡಗಳ ರೇಸ್‌ನಲ್ಲಿದೆ. ಅಷ್ಟರ ಮಟ್ಟಿಗೆ ಬಲಿಷ್ಠ ತಂಡವನ್ನ ಹೊಂದಿದಿದೆ.
ಕೊಹ್ಲಿ ಜೊತೆ ಕಣಕ್ಕಿಳಿಯುವರು ಯಾರು?
ಈ ಸೀಸನ್‌ನ 13 ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಅವರು ಇಂಗ್ಲೆಂಡ್‌ನ ಬ್ಯಾಟರ್‌ಗಳಾದ ಫಿಲ್ ಸಾಲ್ಟ್ ಹಾಗೂ ಜೇಕಬ್ ಬೆಥೆಲ್ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. ಆದರೆ ಎಡಗೈ ಬ್ಯಾಟರ್ ವೆಂಕಟೇಶ್ ಅಯ್ಯರ್ ಅವರ ಪ್ರಸ್ತುತ ಫಾರ್ಮ್ ಅನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಪಂದ್ಯದಲ್ಲಿ ಬೆಥೆಲ್ ಅವರ ಜಾಗದಲ್ಲಿ ಅಯ್ಯರ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ವೆಂಕಟೇಶ್ ಅಯ್ಯರ್ ಕಳೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಅಜೇಯ 73 ರನ್ ಗಳಿಸಿದ್ದರು ಮತ್ತು ಅವರು ಐಪಿಎಲ್‌ನಲ್ಲಿ ಒಬ್ಬ ಸಮರ್ಥ ಅಗ್ರ ಕ್ರಮಾಂಕದ ಬ್ಯಾಟರ್ ಕೂಡ ಎನಿಸಿಕೊಂಡಿದ್ದಾರೆ.
ಎಸ್‌ಆರ್‌ಎಚ್ ವಿರುದ್ಧ ಫಿಲ್ ಸಾಲ್ಟ್ ಆಡುತ್ತಾರಾ?
ಮತ್ತೊಂದೆಡೆ ಮಾಹಿತಿ ಪ್ರಕಾರ ಫಿಲ್ ಸಾಲ್ಟ್ ಅವರು ಬೆರಳಿನ ಗಾಯದಿಂದ ಚೇತರಿಸಿಕೊಂಡ ನಂತರ ಇಂಗ್ಲೆಂಡ್‌ನಿಂದ ಹಿಂತಿರುಗಿದ್ದಾರೆ. ಆದರೆ ಅವರು ಎಸ್‌ಆರ್‌ಎಚ್ ವಿರುದ್ಧದ ಪಂದ್ಯದಲ್ಲಿಆಡೋದು ಡೌಟ್. ಪ್ಲೇ-ಆಫ್ ಹಂತದ ಪಂದ್ಯಗಳಲ್ಲಿ ಆಡುವ 11 ಬಳಗಕ್ಕೆ ಮರಳುವ ನಿರೀಕ್ಷೆಯಿದೆ.
ಎಸ್‌ಆರ್‌ಎಚ್, ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11
ಎಸ್‌ಆರ್‌ಎಚ್ ಸಂಭಾವ್ಯ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹೆನ್ರಿಚ್ ಕ್ಲಾಸೆನ್, ನಿತೀಶ್ ಕುಮಾರ್ ರೆಡ್ಡಿ, ಲಿಯಾಮ್ ಲಿವಿಂಗ್‌ಸ್ಟೋನ್ / ಅನಿಕೇತ್ ವರ್ಮಾ, ಸಲಿಲ್ ಅರೋರಾ, ಹರ್ಷ್ ದುಬೆ, ಬ್ರೈಡನ್ ಕಾರ್ಸ್, ಹರ್ಷಲ್ ಪಟೇಲ್, ಜಯದೇವ್ ಉನದ್ಕತ್ / ಇಶಾನ್ ಮಾಲಿಂಗ. ಇಂಪ್ಯಾಕ್ಟ್ ಪ್ಲೇಯರ್: ಪ್ಯಾಟ್ ಕಮ್ಮಿನ್ಸ್ / ಸ್ಮರಣ್ ರವಿಚಂದ್ರನ್.
ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ದೇವದತ್ ಪಡಿಕ್ಕಲ್ / ವೆಂಕಟೇಶ್ ಅಯ್ಯರ್, ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೇಕಬ್ ಡಫಿ, ಸುಯಶ್ ಶರ್ಮಾ / ರಸಿಖ್ ಸಲಾಮ್, ಇಂಪ್ಯಾಕ್ಟ್ ಪ್ಲೇಯರ್: ಜೇಕಬ್ ಬೆಥೆಲ್ / ಮಂಗೇಶ್ ಯಾದವ್.












Click it and Unblock the Notifications