RCB Vs SRH: ಆರ್‌ಸಿಬಿ ಅಬ್ಬರಕ್ಕೆ ಮಂಕಾದ ಕಾವ್ಯಾ ಮಾರನ್; ವಿಡಿಯೋ

ಸತತ ಒಂದು ತಿಂಗಳ ಸುದೀರ್ಘ ಕಾಯುವಿಕೆ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆಲುವು ಕಂಡಿದೆ. ಐಪಿಎಲ್ 2024ರ ಆವೃತ್ತಿಯಲ್ಲಿ ಆರ್‌ಸಿಬಿ ಎರಡನೇ ಗೆಲುವು ಸಾಧಿಸಿದೆ. ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 36 ರನ್‌ಗಳಿಂದ ಗೆದ್ದು ಬೀಗಿದೆ.

ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಬಾರಿ ಐಪಿಎಲ್‌ನಲ್ಲಿ ತವರಿನಲ್ಲಿ ಮೊದಲ ಬಾರಿಗೆ ಸೋಲು ಕಂಡಿದೆ. ಬೆಂಗಳೂರಿನಲ್ಲಿ ಸೋಲಿನ ಲೆಕ್ಕವನ್ನು ಹೈದರಾಬಾದ್‌ನಲ್ಲಿ ಚುಕ್ತಾ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕೊನೆಗೂ ಅಭಿಮಾನಿಗಳಿಗೆ ಖುಷಿ ನೀಡುವ ಪ್ರದರ್ಶನ ನೀಡಿದೆ.

RCB Vs SRH Kavya Maran Reaction After SRH Flop Show Against RCB In IPL 2024

ಬೆಂಗಳೂರಿನಲ್ಲಿ ಹೈದರಾಬಾದ್ ಗೆದ್ದಾಗ ಅಭಿಮಾನಿಗಳು ಬಾಯಿ ಮೇಲೆ ಬೆರಳಿಟ್ಟು ಸನ್ನೆ ಮಾಡುವ ಮೂಲಕ ಸಂಭ್ರಮಿಸಿದ್ದರು. ಈಗ ಹೈದರಾಬಾದ್‌ನಲ್ಲಿ ಆರ್‌ಸಿಬಿ ಅಭಿಮಾನಿಗಳು ಅದೇ ಸನ್ನೆಯ ಮೂಲಕ ಆರ್‌ಸಿಬಿ ಗೆಲುವನ್ನು ಸಂಭ್ರಮಿಸಿದ್ದಾರೆ.

ಒಂದೆಡೆ ಆರ್‌ಸಿಬಿ ಅಭಿಮಾನಿಗಳು ಸಂಭ್ರಮಿಸುತ್ತಿದ್ದರೆ, ತಂಡದ ಪ್ರದರ್ಶನ ಕಂಡ ಸನ್‌ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯಾ ಮಾರನ್ ನಿರಾಸೆಗೊಂಡಿದ್ದರು. ಅಬ್ದುಲ್ ಸಮದ್ ಔಟಾಗುತ್ತಿದ್ದಂತೆ ತಮ್ಮ ಅಸಮಾಧಾನವನ್ನು ಕಾವ್ಯಾ ಮಾರನ್ ವ್ಯಕ್ತಪಡಿಸಿದ್ದು ವಿಡಿಯೋ ಸದ್ಯ ವೈರಲ್ ಆಗುತ್ತಿದೆ.

ಆರ್‌ಸಿಬಿ ಅತ್ಯುತ್ತಮ ಪ್ರದರ್ಶನ

ಈ ಆವೃತ್ತಿಯಲ್ಲಿ ಆರ್‌ಸಿಬಿ ಮೊದಲ ಬಾರಿಗೆ ತಂಡವಾಗಿ ಉತ್ತಮ ಪ್ರದರ್ಶನ ನೀಡಿತು. ಟಾಸ್ ಗೆದ್ದ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿತು. 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 206 ರನ್‌ ಕಲೆಹಾಕಿತು.

ವಿರಾಟ್ ಕೊಹ್ಲಿ 43 ಎಸೆತಗಳಲ್ಲಿ 51 ರನ್ ಗಳಿಸಿದರು. ರಜತ್ ಪಟಿದಾರ್ ಕೇವಲ 20 ಎಸೆತಗಳಲ್ಲಿ 50 ರನ್ ಗಳಿಸಿ ಮಿಂಚಿದರು. ನಾಯಕ ಫಾಫ್ ಡುಪ್ಲೆಸಿಸ್ 12 ಎಸೆತಗಳಲ್ಲಿ 25 ರನ್ ಗಳಿಸಿದರು. ಕ್ಯಾಮೆರಾನ್ ಗ್ರೀನ್ 20 ಎಸೆತಗಳಲ್ಲಿ 37 ರನ್ ಗಳಿಸಿದರು. ಕೊನೆಯಲ್ಲಿ ದಿನೇಶ್ ಕಾರ್ತಿಕ್ 11 ಮತ್ತು ಸ್ವಪ್ನಿಲ್ ಸಿಂಗ್ 12 ರನ್ ಗಳಿಸಿದರು.

207 ರನ್‌ಗಳ ಬೃಹತ್ ಗುರಿಯನ್ನು ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 171 ರನ್ ಮಾತ್ರ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು. ಅಭಿಷೇಕ್ ಶರ್ಮಾ 31, ಶಹಭಾಜ್ ಅಹ್ಮದ್ 40, ಪಾಟ್ ಕಮ್ಮಿನ್ಸ್ 31 ರನ್ ಗಳಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್ ಗಳು ವಿಫಲವಾದರು.

ವಿಲ್ ಜ್ಯಾಕ್ಸ್ ಮೊದಲ ಓವರ್ ನಲ್ಲೇ ಟ್ರಾವಿಸ್ ಹೆಡ್ ವಿಕೆಟ್ ಪಡೆದು ಆಘಾತ ನೀಡಿದರು. ಸ್ವಪ್ನಿಲ್ ಸಿಂಗ್ ಪ್ರಮುಖ 2 ವಿಕೆಟ್ ಪಡೆದುಕೊಂಡರು. ಕರಣ್ ಶರ್ಮಾ ಮತ್ತು ಕ್ಯಾಮೆರಾನ್ ಗ್ರೀನ್ ಕೂಡ ತಲಾ 2 ವಿಕೆಟ್ ಪಡೆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+