ಆರ್‌ಸಿಬಿ-ಎಸ್‌ಆರ್‌ಎಚ್ ಪಂದ್ಯ ರದ್ದು ಸಾಧ್ಯತೆ
IPL 2025 RCB: ಭಾರತ-ಪಾಕಿಸ್ತಾನ ನಡುವೆ ಯುದ್ಧ ಬಿಕ್ಕಟ್ಟು ಕಾರಣ ಐಪಿಎಲ್ 2025 ಟೂರ್ನಿಯನ್ನು ಬಿಸಿಸಿಐ ರದ್ದಪಡಿಸಿ ಒಂದು ವಾರಕ್ಕೆ ಮುಂದೂಡಿತ್ತು. ಎರಡು ರಾಷ್ಟ್ರಗಳ ನಡುವೆ ಪರಿಸ್ಥಿತಿ ಸುಧಾರಿಸಿದ ಬಳಿಕ ಮೇ 17ರಿಂದ ಮತ್ತೆ ಟೂರ್ನಿಯನ್ನು ಮತ್ತೆ ಆರಂಭ ಮಾಡಲಾಯಿತು. ಇದರಂತೆಯೇ ಆರ್‌ಸಿಬಿ-ಕೆಕೆಆರ್ ನಡುವೆ ನಡೆಯಬೇಕಿದ್ದ ಮೊದಲ ಪಂದ್ಯ ಮಳೆಯ ಕಾರಣ ರದ್ದಾಗಿದ್ದು, ಎರಡು ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗಿತ್ತು. ಇದರ ಬೆನ್ನಲ್ಲೇ ಆರ್‌ಸಿಬಿಗೆ ಮತ್ತೊಂದು ಆತಂಕ ಎದುರಾಗಿದೆ.
ಹೊಸ ವೇಳಾಪಟ್ಟಿ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಮೇ 17, 2025ರಂದು ಎಂ.ಚಿನ್ನಸ್ವಾಮಿಯಲ್ಲಿ ನಡೆಯಬೇಕಿತ್ತು. ಆದರೆ, ಬೆಂಗಳೂರಿನಲ್ಲಿ ಭಾರೀ ಮಳೆ ಮುಂದುವರೆದ ಕಾರಣ ಪಂದ್ಯ ರದ್ದಾಗಿದ್ದು, ಎರಡು ತಂಡಗಳಿಗೂ ತಲಾ ಒಂದು ಅಂಕ ನೀಡಲಾಗಿತ್ತು. ನಂತರದ ಅಂದರೆ ಮೇ 23ರ ಪಂದ್ಯವನ್ನು ಆರ್‌ಸಿಬಿಯು ಎಸ್‌ಆರ್‌ಎಚ್ ವಿರುದ್ಧ ಮತ್ತೆ ತವರು ಅಂಗಳದಲ್ಲೇ ಆಡಬೇಕಿತ್ತು. ಅಂದು ಸಹ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ಈ ಪಂದ್ಯವನ್ನು ಲಕ್ನೋಗೆ ಸ್ಥಳಾಂತರಿಸಲಾಗಿದೆ.

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಮೇ 23ರಂದು ಬೆಂಗಳೂರಿನಲ್ಲಿ ಮಳೆ ಮುಂದುವರೆಯುವ ಮುನ್ಸೂಚನೆ ಹಿನ್ನೆಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು-ಸನ್ ರೈಸರ್ಸ್ ಹೈದರಾಬಾದ್ ಪಂದ್ಯವನ್ನು ಲಕ್ನೋದ ಏಕನಾ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗಿದೆ. ಆದರೂ ಆರ್‌ಸಿಬಿಗೆ ಮತ್ತೊಂದು ಆಘಾತ ಎದುರಾಗಿದೆ.
ಈಗಾಗಲೇ ಅಂಡಮಾನ್ ಮತ್ತು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ದೇಶದ ಬಹುತೇಕ ಭಾಗಗಳಲ್ಲಿ ಗುಡುಗು. ಸಿಡಿಲು ಸಹಿತ ಭಾರೀ ಮಳೆಯಾಗಿದೆ. ಇದೀಗ ಅರಬ್ಬೀ ಸಮುದ್ರದಲ್ಲಿ ಚಂಡಮಾರುತ ತೀವ್ರಗೊಂಡಿರುವ ಪರಿಣಾಮ ದೇಶದ ಹಲವೆಡೆ ಭಾರೀ ಮಳೆ ಮುಂದುವರೆದಿದೆ. ಇದರ ಪರಿಣಾಮ ಲಕ್ನೋಗೂ ತಟ್ಟಿದರೂ ಆಶ್ಚರ್ಯವಿಲ್ಲ. ಒಂದು ವೇಳೆ ಲಕ್ನೋದಲ್ಲಿ ಸಾಧಾರಣ ಮಳೆಯಾದ್ರೆ, ಆರ್‌ಸಿಬಿ-ಎಸ್‌ಆರ್‌ಎಚ್ ನಡುವೆ ನಡೆಯುವ ಪಂದ್ಯದ ಓವರ್‌ಗಳನ್ನು ಕಡಿತಗೊಳಿಸಲಾಗುತ್ತದೆ.
ಆರ್‌ಸಿಬಿ ಇಂದಿನ ಪಂದ್ಯ ಗೆದ್ದರೆ, ಕ್ವಾಲಿಫೈಯರ್‌ಗೆ ಅವಕಾಶ ಗಿಟ್ಟಿಸಿಕೊಳ್ಳಲಿದೆ. ಒಂದು ವೇಳೆ ಪಂದ್ಯ ರದ್ದಾದರೆ, ಎರಡು ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗುತ್ತದೆ. ಇದರಿಂದ ಆರ್‌ಸಿಬಿಗೆ ಮೊದಲ ಸ್ಥಾನ ಪಡೆಯಲು ಕಷ್ಟ ಆದಂತಾಗಲಿದೆ. ಸೋತರೆ ಇನ್ನೂ ಆತಂಕ ಹೆಚ್ಚಾಗಲಿದೆ. ಆದರೂ ಇದೀಗ ಸದ್ಯ ಮೂರು ನಾಲ್ಕು ಸ್ಥಾನದಲ್ಲಿರುವ ತಂಡಗಳು ಉಳಿದ ಪಂದ್ಯಗಳನ್ನು ಸೋತರೆ, ಆರ್‌ಸಿಬಿ ಮೊದಲ ಅಥವಾ ಎರಡನೇ ಸ್ಥಾನ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಇಂದಿನ ಪಂದ್ಯಕ್ಕೆ ಮಳೆ ಅಡ್ಡಿ ಆಗದಿದ್ದರೆ ಅಷ್ಟೇ ಸಾಕು ಅಂತಿದ್ದಾರೆ ಆರ್‌ಸಿಬಿ ಅಭಿಮಾನಿಗಳು.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗಾಗಲೇ ಪ್ಲೇ ಆಫ್ ಪ್ರವೇಶ ಮಾಡಿದೆ. ಇದೀಗ ಕ್ವಾಲಿಫೈಯರ್ ಆಡಲು ಅರ್ಹತೆ ಪಡೆಯಬೇಕೆಂದರೆ ಇಂದು ಎಸ್‌ಆರ್‌ಎಚ್ ವಿರುದ್ಧ ಉತ್ತಮ ರನ್ ರೇಟ್‌ನೊಂದಿಗೆ ಗೆಲ್ಲಲ್ಲೇಬೇಕಿದೆ. ಆದ್ದರಿಂದ ಆರ್‌ಸಿಬಿ ಭರ್ಜರಿ ಸಿದ್ಧತೆ ನಡೆಸಿದೆ. ಇದನ್ನು ಬಿಟ್ಟರೆ, ಎಲ್‌ಎಸ್‌ಜಿ ವಿರುದ್ಧ ಇನ್ನೂ ಒಂದು ಲೀಗ್ ಹಂತದ ಪಂದ್ಯ ಬಾಕಿ ಇರುತ್ತದೆ.
ಆರ್‌ಸಿಬಿ ಇದುವರೆಗೂ ಆಡಿದ 12 ಪಂದ್ಯಗಳಲ್ಲಿ 8ರಲ್ಲಿ ಗೆದ್ದು, 3ರಲ್ಲಿ ಸೋತು, ಒಂದು ರದ್ದಿನೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ 17 ಅಂಕಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಅಲ್ಲದೆ, ಪ್ಲೇ ಆಫ್ ಕೂಡ ಪ್ರವೇಶ ಮಾಡಿದ್ದು, ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯುವುದು ಬಾಕಿಯಿದೆ. ಎರಡು ಪಂದ್ಯಗಳು ಬಾಕಿಯಿದ್ದು, ಇಂದಿನ ಪಂದ್ಯದಲ್ಲಿ ಉತ್ತಮ ರನ್ ರೇಟ್‌ನೊಂದಿಗೆ ಭರ್ಜರಿ ಗೆಲುವು ಸಾಧಿಸಲೇಬೇಕೆನ್ನುವ ಹಠದಲ್ಲಿ ಆರ್‌ಸಿಬಿ ಪಡೆ ಇದೆ.
ಐಪಿಎಲ್ 2025ರ ಪ್ಲೇಆಫ್‌ಗೆ ಈಗಾಗಲೇ ಎಂಟ್ರಿ ಕೊಟ್ಟಿರುವ ಆರ್‌ಸಿಬಿ ಇಂದು (ಮೇ 23) ಎಸ್‌ಆರ್‌ಎಚ್ ವಿರುದ್ಧ ಕಣಕ್ಕಿಳಿಯಲಿದೆ. ಈ ಪಂದ್ಯವನ್ನು ಗೆಲ್ಲುವ ಮೂಲಕ ಆರ್‌ಸಿಬಿ 9 ವರ್ಷಗಳಲ್ಲಿ ಮೊದಲ ಬಾರಿಗೆ ಲೀಗ್ ಹಂತದಲ್ಲಿ ಅಗ್ರ ಎರಡರಲ್ಲಿ ಸ್ಥಾನ ಪಡೆಯುವ ಕಡೆ ಕಣ್ಣಿಟ್ಟಿದೆ. 2016ರಲ್ಲಿ ಆರ್‌ಸಿಬಿ ರನ್ನರ್ ಅಪ್ ಆಗಿತ್ತು, ಆದರೆ ಅಂದಿನಿಂದ ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆದಿಲ್ಲ.
ತಂಡವು ಪ್ರಸ್ತುತ 12 ಪಂದ್ಯಗಳಿಂದ 17 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ ಮತ್ತು ಉಳಿದ ಎರಡು ಪಂದ್ಯಗಳನ್ನು ಗೆದ್ರೆ, ಅಗ್ರ ಎರಡು ಸ್ಥಾನಗಳನ್ನು ಖಚಿತ ಪಡಿಸಲಿದೆ. ಆದ್ದರಿಂದ ಇಂದಿನ ಪಂದ್ಯ ಹೈವೋಲ್ಟೇಜ್ ಆಗಿರಲಿದೆ. ಐಪಿಎಲ್ 2025ರ 65ನೇ ಪಂದ್ಯವು ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. ಟಾಸ್ ಸಂಜೆ 7 ಗಂಟೆಗೆ ನಡೆಯಲಿದ್ದು, ಪಂದ್ಯ ಸಂಜೆ 7.30ಕ್ಕೆ ಆರಂಭ ಆಗಲಿದೆ.
ಲಕ್ನೋದಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ಆದರೆ, ಮಳೆ ಬರುವ ಸಾಧ್ಯತೆ ಬಹುತೇಕ ಕಡಿಮೆಯಿದ್ದು, ತಾಪಮಾನ 36-30 ಡಿಗ್ರಿ ದಾಖಲಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದು ಅಥವಾ ಸೋತರೆ ಅಂಕಪಟ್ಟಿಯಲ್ಲಿ ಅಗ್ರ-2 ಸ್ಥಾನ ಪಡೆಯುವ ಆರ್‌ಸಿಬಿಯ ಆಸೆಗೆ ದೊಡ್ಡ ಆಘಾತ ಎದುರಾದಂತಾಗಲಿದೆ. ಆದ್ದರಿಂದ ಇಂದಿನ ಪಂದ್ಯ ಹೈವೋಲ್ಟೇಜ್ ಆಗಿರಲಿದೆ.












Click it and Unblock the Notifications