RCB Vs SRH:ಆರ್‌ಸಿಬಿ ತಂಡದಲ್ಲಿ ಎರಡು ಬದಲಾವಣೆ ಸಾಧ್ಯತೆ

ಸೋಮವಾರ (ಏಪ್ರಿಲ್ 15) ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಎಚ್‌) ತಂಡವನ್ನು ಎದುರಿಸಲು ಸಜ್ಜಾಗಿದೆ.

ಆಡಿರುವ ಆರು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಗೆದ್ದಿರುವ ಆರ್‌ಸಿಬಿ ಅಂಕಪಟ್ಟಿಯಲ್ಲಿ 10ನೇ ಸ್ಥಾನದಲ್ಲಿದೆ. ಸನ್‌ರೈಸರ್ಸ್ ಹೈದರಾಬಾದ್ 5 ಪಂದ್ಯಗಳಲ್ಲಿ 3 ರಲ್ಲಿ ಗೆದ್ದಿದ್ದು ಅಂಕಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದೆ.

RCB Vs SRH RCB May Make Two Changes to Playing XI Against SRH Pitch report

ಸತತ ಸೋಲುಗಳನ್ನು ಕಂಡಿರುವ ಆರ್‌ಸಿಬಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಳ್ಳಲು ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಬೇಕಾದ ಒತ್ತಡದಲ್ಲಿದೆ ಆರ್‌ಸಿಬಿ.

ಸೋಮವಾರ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ. ಈ ಆವೃತ್ತಿಯಲ್ಲಿ ತವರಿನಲ್ಲಿ ಮೂರು ಪಂದ್ಯಗಳನ್ನಾಡಿದ್ದು, ಒಂದು ಪಂದ್ಯವನ್ನು ಮಾತ್ರ ಗೆದ್ದಿದ್ದು, ಉಳಿದ ಎರಡು ಪಂದ್ಯಗಳನ್ನು ಸೋತಿದೆ. ಇಂದು ಗೆದ್ದರೆ ಆರ್‌ಸಿಬಿ ಆತ್ಮವಿಶ್ವಾಸ ಕೂಡ ಹೆಚ್ಚಲಿದೆ. 2023ರ ಆವೃತ್ತಿಯಲ್ಲಿ ಚಿನ್ನಸ್ವಾಮಿಯಲ್ಲಿ ಎಸ್‌ಆರ್‌ಎಚ್‌ ವಿರುದ್ಧ ಆರ್‌ಸಿಬಿ ಎಂಟು ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ವಿರಾಟ್ ಕೊಹ್ಲಿ ಅಮೋಘ ಶತಕ ಸಿಡಿಸಿದ್ದರು. ಸೋಮವಾರದ ಪಂದ್ಯದಲ್ಲಿ ಕೂಡ ಕೊಹ್ಲಿ ಅವರಿಂದ ದೊಡ್ಡ ರನ್ ನಿರೀಕ್ಷೆ ಮಾಡಲಾಗಿದೆ.

ತಂಡದಲ್ಲಿ ಬದಲಾವಣೆ

ಎಸ್‌ಆರ್‌ಎಚ್‌ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ತಂಡದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ. ಗ್ಲೆನ್ ಮ್ಯಾಕ್ಸ್‌ವೆಲ್ ಫಾರ್ಮ್‌ನಲ್ಲಿರದೇ ಇರುವುದು ಮತ್ತು ಮುಂಬೈ ಇಂಡಿಯನ್ಸ್ ವಿರುದ್ದದ ಪಂದ್ಯದ ವೇಳೆ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದು, ಸೋಮವಾರದ ಪಂದ್ಯದಲ್ಲಿ ವಿಶ್ರಾಂತಿ ಪಡೆಯುವ ಸಾಧ್ಯತೆ ಇದೆ.

ಅವರ ಬದಲಾಗಿ ಕ್ಯಾಮೆರಾನ್ ಗ್ರೀನ್ ಅಥವಾ ಲಾಕಿ ಫರ್ಗ್ಯುಸನ್ ಅವರು ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಇನ್ನು ಕಳೆದ ಪಂದ್ಯದಲ್ಲಿ ಗಾಯದ ಕಾರಣ ಕಣಕ್ಕಿಳಿಯದ ಯಶ್ ದಯಾಳ್ ಕೂಡ ತಂಡದಲ್ಲಿ ಅವಕಾಶ ಪಡೆಯಲಿದ್ದಾರೆ, ಸಾಕಷ್ಟು ಕಳಪೆ ಬೌಲಿಂಗ್ ಮಾಡಿರುವ ಮೊಹಮ್ಮದ್ ಸಿರಾಜ್ ಅವರಿಗೂ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

ಆರ್‌ಸಿಬಿ ಬೌಲಿಂಗ್ ಸದ್ಯ ತಲೆನೋವಾಗಿದೆ. ಮ್ಯಾಕ್ಸ್‌ವೆಲ್ ಬದಲಾಗಿ ಲಾಕಿ ಫರ್ಗ್ಯುಸನ್ ಬಂದರೆ, ಬೌಲಿಂಗ್ ವಿಭಾಗಕ್ಕೆ ಹೆಚ್ಚಿನ ಬಲ ಬರಲಿದೆ. ಸಿರಾಜ್‌ಗೆ ಅವರು ಪರ್ಯಾಯ ಆಯ್ಕೆಯಾಗಬಹುದು.

ಕಳೆದ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್, ರಜತ್ ಪಾಟಿದಾರ್ ಮತ್ತು ದಿನೇಶ್ ಕಾರ್ತಿಕ್ ಅರ್ಧಶತಕ ಗಳಿಸಿದ್ದು, ಬ್ಯಾಟಿಂಗ್ ವಿಭಾಗಕ್ಕೆ ಬಲ ಬಂದಿದೆ. ಬೌಲಿಂಗ್ ವಿಭಾಗವನ್ನು ಬಲಪಡಿಸಲು ನಾಯಕ ಫಾಫ್ ಚಿಂತಿಸಬೇಕಿದೆ.

ಪಿಚ್ ವರದಿ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡಕ್ಕೂ ಸಹಾಯ ಸಿಗುತ್ತದೆ. ಮೊದಲು ಬ್ಯಾಟಿಂಗ್ ಮಾಡುವ ತಂಡ 180-200 ರನ್ ಕಲೆಹಾಕಿದರೆ ಗೆಲ್ಲುವ ಸಾಧ್ಯತೆ ಇರುತ್ತದೆ. ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿದರೆ 200ಕ್ಕೂ ಹೆಚ್ಚು ರನ್ ಗಳಿಸಬೇಕಿದೆ.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ

ಆರ್‌ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್/ ಕ್ಯಾಮ್ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (WK), ರೀಸ್ ಟೋಪ್ಲಿ/ ಲಾಕಿ ಫರ್ಗ್ಯುಸನ್, ವಿಜಯ್‌ಕುಮಾರ್ ವೈಶಾಕ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್/ ಯಶ್ ದಯಾಳ್.

ಎಸ್ಆರ್‌ಎಚ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ. ನಟರಾಜನ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+