RCB vs SRH: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ; ಮ್ಯಾಕ್ಸಿ, ಸಿರಾಜ್ ಔಟ್, ಲಾಕಿ ಫರ್ಗ್ಯುಸನ್ ಕಣಕ್ಕೆ
ಐಪಿಎಲ್ 2024ರ 30ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಸತತ ಸೋಲಿನಿಂದ ಕೊನೆಗೂ ಪಾಠ ಕಲಿತ ಆರ್‌ಸಿಬಿ ತಂಡದಲ್ಲಿ ಪ್ರಮುಖ ಬದಲಾವಣೆ ಮಾಡಿದೆ.
ಸತತ ವೈಫಲ್ಯಗಳನ್ನು ಅನುಭವಿಸಿದ್ದ ಮೊಹಮ್ಮದ್ ಸಿರಾಜ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ತಂಡದಿಂದ ಹೊರಗುಳಿದಿದ್ದಾರೆ. ಅವರ ಬದಲಾಗಿ ವೇಗದ ಬೌಲರ್ ಲಾಕಿ ಫರ್ಗ್ಯುಸನ್ ಮತ್ತು ಯಶ್ ದಯಾಳ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.

ಇದುವರೆಗೂ ಆಡಿರುವ ಆರು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯ ಮಾತ್ರ ಗೆದ್ದಿದ್ದು ಐದು ಪಂದ್ಯಗಳನ್ನು ಸೋತಿರುವ ಆರ್ ಸಿಬಿ, ಸರಣಿ ಸೋಲಿನ ಸುಳಿಯಿಂದ ಹೊರಬರಲು ಹವಣಿಸುತ್ತಿದೆ.
ಉಭಯ ತಂಡಗಳ ಆಡುವ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ವಿಲ್ ಜಾಕ್ಸ್, ರಜತ್ ಪಾಟಿದಾರ್, ಸೌರವ್ ಚೌಹಾಣ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಮಹಿಪಾಲ್ ಲೊಮ್ರೋರ್, ವಿಜಯ್ಕುಮಾರ್ ವೈಶಾಕ್, ರೀಸ್ ಟೋಪ್ಲಿ, ಲಾಕಿ ಫರ್ಗುಸನ್, ಯಶ್ ದಯಾಲ್.
ಸನ್‌ರೈಸರ್ಸ್ ಹೈದರಾಬಾದ್ : ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಐಡೆನ್ ಮಾರ್ಕ್ರಂ, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಅಬ್ದುಲ್ ಸಮದ್, ಶಹಬಾಜ್ ಅಹ್ಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.












Click it and Unblock the Notifications