RCB vs MI: ಗುಜರಾತ್ ಟೈಟಾನ್ಸ್ ವಿರುದ್ಧ ಸೋತ ಆರ್‌ಸಿಬಿಗೆ ಕಾದಿದೆ ದೊಡ್ಡ ಸವಾಲು

ಐಪಿಎಲ್ 2025ರ ಆವೃತ್ತಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತವರಿನಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಕಂಡಿತ್ತು. ತವರಿನಲ್ಲಿ ಸೋತ ಬಳಿಕ ಆರ್ ಸಿಬಿ ಮುಂದಿನ ಪಂದ್ಯವನ್ನು ಹೊರಗಡೆ ಆಗಲು ಸಜ್ಜಾಗಿದ್ದು, ಹೊಸ ಸವಾಲನ್ನು ಎದುರಿಸಲಿದೆ.

ಆರ್ ಸಿಬಿ ಮುಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಏಪ್ರಿಲ್ 7ರಂದು ಸೋಮವಾರ ನಡೆಯಲಿರುವ ಪಂದ್ಯದಲ್ಲಿ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಹಾರ್ದಿಕ್ ಪಾಂಡ್ಯ ಪಡೆಯನ್ನು ಎದುರಿಸಲಿದೆ.

rcb will face mumbai indians ipl 2025 at wankhede stadium on april 7th

10 ವರ್ಷದಿಂದ ಗೆದ್ದಿಲ್ಲ

ಕಳೆದ 10 ವರ್ಷಗಳಿಂದ ಆರ್ ಸಿಬಿ ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಗೆದ್ದಿಲ್ಲ. ಸಿಎಸ್‌ಕೆ ವಿರುದ್ಧ ಚೆನ್ನೈನಲ್ಲಿ 17 ವರ್ಷಗಳಿಂದ ಗೆಲ್ಲದ ಆರ್ ಸಿಬಿ ಈ ವರ್ಷ ಭರ್ಜರಿ ಗೆಲುವು ಸಾಧಿಸಿತ್ತು, ಇದೀಗ ಮುಂಬೈನಲ್ಲೂ ದಶಕಗಳ ಬಳಿಕ ಮೊದಲ ಗೆಲುವು ಸಾಧಿಸುತ್ತಾ ಎನ್ನುವ ಕುತೂಹಲ ಹೆಚ್ಚಾಗಿದೆ.

ಶುಕ್ರವಾರ ಮುಂಬೈ ಇಂಡಿಯನ್ಸ್ ಲಕ್ನೋದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೆಣೆಸಲಿದ್ದು ಬಳಿಕ ಮುಂಬೈಗೆ ಆಗಮಿಸಲಿದ್ದಾರೆ. ಮೊದಲ ಎರಡು ಪಂದ್ಯಗಳಲ್ಲಿ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್ ಮೂರನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಮೇಲೆ ಜಿಗಿಯುವ ಉತ್ಸಾಹದಲ್ಲಿದ್ದು, ಬಳಿಕ ತವರಿನಲ್ಲಿ ಆರ್ ಸಿಬಿ ತಂಡವನ್ನು ಎದುರಿಸಲಿದೆ.

ಜಸ್ಪ್ರೀತ್ ಬುಮ್ರಾ ಇನ್ನೂ ಎನ್‌ಸಿಎನಲ್ಲಿ ಬೌಲಿಂಗ್ ಮಾಡುತ್ತಿದ್ದು ಅವರು ಇನ್ನೂ ಎರಡು ವಾರ ಐಪಿಎಲ್‌ನಲ್ಲಿ ಆಡುವುದು ಅನುಮಾನವಾಗಿದೆ. ಮೊದಲ ಎರಡೂ ಪಂದ್ಯಗಳಲ್ಲಿ ಬುಮ್ರಾ ಅನುಪಸ್ಥಿತಿ ಮುಂಬೈ ಇಂಡಿಯನ್ಸ್ ತಂಡವನ್ನು ಕಾಡಿತ್ತು, ಕೆಕೆಆರ್ ವಿರುದ್ಧ ಅಶ್ವನಿ ಕುಮಾರ್ ಮಾರಕ ಬೌಲಿಂಗ್ ಮಾಡುವ ಮೂಲಕ 4 ವಿಕೆಟ್ ಪಡೆದಿದ್ದು ಸದ್ಯ ಬೌಲಿಂಗ್‌ ವಿಭಾಗದ ಮೇಲಿನ ಒತ್ತಡವನ್ನು ಕಡಿಮೆ ಮಾಡಿದೆ. ರೋಹಿತ್ ಶರ್ಮಾ ಫಾರ್ಮ್‌ ಕಂಡುಕೊಂಡರೆ ಮುಂಬೈ ಇಂಡಿಯನ್ಸ್‌ನ ಬ್ಯಾಟಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ಬರಲಿದೆ.

ಗೆಲುವಿನ ಹಳಿಗೆ ಮರಳಲು ಆರ್ ಸಿಬಿ ಸಜ್ಜು

ಗುಜರಾತ್ ಟೈಟಾನ್ಸ್ ವಿರುದ್ಧ ಸೋಲಿನ ಬಳಿಕ ಮತ್ತೆ ಗೆಲುವಿನ ಹಳಿಗೆ ಮರಳಲು ಆರ್ ಸಿಬಿ ಸಜ್ಜಾಗಿದೆ. ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗ ಬಲಿಷ್ಠವಾಗಿದೆ. ಎಲ್ಲಾ ಆಟಗಾರರು ಬಹುತೇಕ ಫಾರ್ಮ್‌ ಕಂಡುಕೊಂಡಿದ್ದು ಬ್ಯಾಟಿಂಗ್ ಸ್ನೇಹಿ ವಾಂಖೆಡೆ ಕ್ರೀಡಾಂಗಣದಲ್ಲಿ ಅಬ್ಬರಿಸಲು ಸಜ್ಜಾಗಿದ್ದಾರೆ. ಜೋಶ್ ಹೇಜಲ್‌ವುಡ್, ಭುವನೇಶ್ವರ್ ಕುಮಾರ್, ಯಶ್ ದಯಾಳ್ ಬೌಲಿಂಗ್‌ನಲ್ಲಿ ಮಿಂಚಿದರೆ ಆರ್ ಸಿಬಿ ದಶಕಗಳ ಬಳಿಕ ವಾಂಖೆಡೆಯಲ್ಲಿ ಗೆಲುವಿನ ಬಾವುಟ ಹಾರಿಸುವುದು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+