RCB vs RR: ಆರ್‌ಸಿಬಿ ಮುಂದಿನ ಎದುರಾಳಿ ಯಾರು? ಪಿಚ್ ವರದಿ, ಪ್ಲೇಯಿಂಗ್ ಇಲೆವೆನ್
2025ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆರಂಭ ಉತ್ತಮವಾಗಿದ್ದರೂ, ತವರಿನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವುದು ಚಿಂತೆಗೆ ಕಾರಣವಾಗಿದೆ. ಗುರುವಾರ ನಡೆದ ಪಂದ್ಯದಲ್ಲಿ ಆರ್ ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೋಲು ಕಂಡಿದೆ. ಕನ್ನಡಿಗ ಕೆಎಲ್ ರಾಹುಲ್ ಅಮೋಘ ಬ್ಯಾಟಿಂಗ್ ಮಾಡಿದ್ದು ಡೆಲ್ಲಿ ಕ್ಯಾಪಿಟಲ್ಸ್ ಗೆಲುವಿಗೆ ಕಾರಣವಾದರು.
ತವರಿನಲ್ಲಿ ಸೋತ ಬಳಿಕ ಆರ್ ಸಿಬಿ ಮುಂದಿನ ಪಂದ್ಯವನ್ನು ಮತ್ತೊಮ್ಮೆ ಹೊರಗಡೆ ಆಡಲು ಸಜ್ಜಾಗಿದೆ. ತವರಿನ ಹೊರಗೆ ಆಡಿರುವ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿರುವ ಆರ್ ಸಿಬಿ ಮುಂದಿನ ಪಂದ್ಯ ಬೆಂಗಳೂರಿನಿಂದ ಹೊರಗಡೆ ಆಡುತ್ತಿದ್ದು ಮತ್ತೊಂದು ಗೆಲುವಿನ ನಿರೀಕ್ಷೆಯಲ್ಲಿದೆ.

ಆಡಿರುವ 5 ಪಂದ್ಯಗಳಲ್ಲಿ 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಅಂಕಪಟ್ಟಿಯಲ್ಲಿ ಸದ್ಯ ಮೂರನೇ ಸ್ಥಾನದಲ್ಲಿದೆ. ಆರ್ ಸಿಬಿ ಮುಂದಿನ ಪಂದ್ಯ ಗೆದ್ದರೆ ಪ್ಲೇಆಫ್ ಲೆಕ್ಕಾಚಾರ ಸುಲಭವಾಗಲಿದೆ. ತವರಿನಲ್ಲಿ ಸೋಲು ಕಾಣುತ್ತಿದ್ದು ಹೊರಗಿನ ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದರೆ ಪ್ಲೇಆಫ್ ಲೆಕ್ಕಾಚಾರ ಸುಲಭವಾಗಲಿದೆ.
ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯ
ಆರ್ ಸಿಬಿ ಮುಂದಿನ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ. ಏಪ್ರಿಲ್ 13ರಂದು ಭಾನುವಾರ ಮಧ್ಯಾಹ್ನ 3.30ಕ್ಕೆ ಈ ಪಂದ್ಯ ಆರಂಭವಾಗಲಿದೆ. ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.
ರಾಜಸ್ಥಾನ ರಾಯಲ್ಸ್ ಕೂಡ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಕಂಡಿದ್ದು ಗೆಲುವಿನ ಹಾದಿಗೆ ಮರಳಲು ರಣತಂತ್ರ ರೂಪಿಸಿದೆ. ತಂಡದ ಆಟಗಾರರ ಕೊರತೆ ಇದ್ದರೂ, ಇರುವ ಆಟಗಾರರು ಉತ್ತಮ ಪ್ರದರ್ಶನ ನೀಡಿದರೂ ಆರ್ ಸಿಬಿ ಕಠಿಣ ಸವಾಲು ಒಡ್ಡುವ ಸಾಮರ್ಥ್ಯ ಹೊಂದಿದೆ.
ತವರಿನ ಹೊರಗೆ ಮೂರು ಬಲಿಷ್ಠ ತಂಡಗಳನ್ನು ಸೋಲಿಸಿರುವ ಆರ್ ಸಿಬಿ ಇದೀಗ ರಾಜಸ್ಥಾನ ರಾಯಲ್ಸ್ ವಿರುದ್ಧ ಗೆಲ್ಲುವ ವಿಶ್ವಾಸದಲ್ಲಿದೆ. ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ಬಲಿಷ್ಠವಾಗಿದೆ. ಫಿಲ್ ಸಾಲ್ಟ್ ಸ್ಫೋಟಕ ಆರಂಭ ಒದಗಿಸಿದ್ದು ಅವರು ಸಿಡಿದರೆ ಆರ್ ಸಿಬಿ ಬೃಹತ್ ಮೊತ್ತ ಕಲೆಹಾಕುವುದು ಆರ್ ಸಿಬಿಗೆ ಸುಲಭವಾಗಲಿದೆ. ದೇವದತ್ ಪಡಿಕ್ಕಲ್ ಮತ್ತೊಂದು ಅವಕಾಶ ಪಡೆಯುವ ಸಾಧ್ಯತೆ ಇದ್ದು, ಲಿಯಾಮ್ ಲಿವಿಂಗ್‌ಸ್ಟೋನ್ ಬದಲು ರೊಮಾರಿಯೋ ಶೆಫರ್ಡ್ ಅವಕಾಶ ಪಡೆಯುವ ಸಾಧ್ಯತೆ ಇದೆ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಆರ್ ಸಿಬಿ: ಫಿಲಿಪ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್/ ರೊಮಾರಿಯೋ ಶೆಫರ್ಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಯಶ್ ದಯಾಳ್.
ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ನಿತೀಶ್ ರಾಣಾ, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಫಜಲ್ಹಕ್ ಫಾರೂಕಿ/ ವನಿಂದು ಹಸರಂಗ, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ.












Click it and Unblock the Notifications