WPL 2025: ಆರ್‌ಸಿಬಿಗೆ ಯುಪಿ ವಾರಿಯರ್ಸ್ ಸವಾಲು; ಆಡುವ ಬಳಗ, ಪಿಚ್ ವರದಿ
ಮಹಿಳಾ ಪ್ರೀಮಿಯರ್ ಲೀಗ್ 2025ರ ಆವೃತ್ತಿಯ ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಹಾಲಿ ಚಾಂಪಿಯನ್ ಆರ್‌ಸಿಬಿ, ಬೆಂಗಳೂರಿನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋಲು ಕಂಡಿತ್ತು. ಇದೀಗ ತನ್ನ ನಾಲ್ಕನೇ ಪಂದ್ಯ ಆಡಲು ಸಜ್ಜಾಗಿದ್ದು ಇಂದು (ಸೋಮವಾರ, ಫೆಬ್ರವರಿ 24) ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದೆ.
ಕಳೆದ ಪಂದ್ಯದಲ್ಲಿ ರೋಚಕ ಹೋರಾಟ ನೀಡಿದರು ಆರ್ ಸಿಬಿ ಕೊನೆಯ ಓವರ್ ನಲ್ಲಿ ಸೋಲು ಕಂಡಿತ್ತು, ಬ್ಯಾಟಿಂಗ್ ಬಲಿಷ್ಠವಾಗಿದ್ದರೂ, ಎಲ್ಲಿಸ್ ಪೆರ್‍ರಿ ಗಾಯದ ಭಯದಿಂದ ಬೌಲಿಂಗ್ ಮಾಡದೇ ಇರುವುದು ತಂಡಕ್ಕೆ ಹಿನ್ನಡೆಯಾಗಿದೆ. ಆಶಾ ಶೋಭನಾ, ಶ್ರೇಯಾಂಕಾ ಪಾಟೀಲ್ ಆಡದೇ ಇರುವುದು ತಂಡದ ಬೌಲಿಂಗ್ ವಿಭಾಗಕ್ಕೆ ಹೊಡೆತ ನೀಡಿದೆ.

ಇಂದು ನಡೆಯುವ ಪಂದ್ಯದಲ್ಲಿ ಆರ್ ಸಿಬಿ ಬೌಲಿಂಗ್ ವಿಭಾಗವನ್ನು ಬಲಪಡಿಸಲು ಯೋಜಿಸಬಹುದು. ಜೊಶಿತಾ ಬದಲಾಗಿ ಸ್ನೇಹ್ ರಾಣಾ ಅವರನ್ನು ಆಡಿಸುವ ಸಾಧ್ಯತೆ ಇದೆ. ಶ್ರೇಯಾಂಕಾ ಪಾಟೀಲ್ ಬದಲಾಗಿ ಸ್ನೇಹ್ ರಾಣಾ ಆರ್ ಸಿಬಿ ಸೇರಿದ್ದು ಅನುಭವ ಹೊಂದಿರುವ ಸ್ಪಿನ್ನರ್ ಆಗಿದ್ದಾರೆ. ಬ್ಯಾಟಿಂಗ್ ಮಾಡುವ ಕ್ಷಮತೆ ಇದ್ದು ತಂಡದ ಬ್ಯಾಟಿಂಗ್‌ಗೆ ಮತ್ತಷ್ಟು ಬಲ ಬರಲಿದೆ.
ವ್ಯಾಟ್ ಹಾಡ್ಜ್, ಸ್ಮೃತಿ ಮಂಧಾನ, ಎಲ್ಲಿಸ್ ಪೆರ್ರಿ, ರಿಚಾ ಘೋಷ್ ಉತ್ತಮ ಫಾರ್ಮ್‌ನಲ್ಲಿದ್ದು ಸದ್ಯ ಆರ್ ಸಿಬಿ ಬ್ಯಾಟಿಂಗ್ ವಿಭಾಗ ಬಲಿಷ್ಠವಾಗಿದ್ದು, ಮೂರನೇ ಗೆಲುವಿನ ವಿಶ್ವಾಸದಲ್ಲಿದೆ.
ಆಡಿದ ಮೂರು ಪಂದ್ಯಗಳಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಸೋತಿದ್ದ ಯುಪಿ ವಾರಿಯರ್ಸ್ ಮೂರನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 33 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಚಿನೆಲೆ ಹೆನ್ರಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಗೆಲುವಿನ ಹಳಿಗೆ ಮರಳಿರುವ ಯುಪಿ ವಾರಿಯರ್ಸ್ ಆರ್ ಸಿಬಿ ವಿರುದ್ಧ ಗೆದ್ದು ಇನ್ನೆರಡು ಅಂಕಗಳನ್ನು ಪಡೆಯುವ ಉತ್ಸಾಹದಲ್ಲಿದೆ.
ಸೋಮವಾರ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದ್ದು, ಜಿಯೋ ಹಾಟ್‌ಸ್ಟಾರ್ ಮತ್ತು ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರದಲ್ಲಿ ವೀಕ್ಷಿಸಬಹುದಾಗಿದೆ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಆರ್‌ಸಿಬಿ: ಸ್ಮೃತಿ ಮಂಧಾನ (ನಾಯಕಿ), ಡೇನಿಯಲ್ ವ್ಯಾಟ್-ಹಾಡ್ಜ್, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ರಾಘ್ವಿ ಬಿಸ್ಟ್, ಕನಿಕಾ ಅಹುಜಾ, ಜಾರ್ಜಿಯಾ ವೇರಂ, ಕಿಮ್ ಗಾರ್ತ್, ಏಕ್ತಾ ಬಿಶ್ತ್, ಜೋಶಿತಾ ವಿಜೆ/ ಸ್ನೇಹ್ ರಾಣಾ, ರೇಣುಕಾ ಸಿಂಗ್ ಠಾಕೂರ್.
ಯುಪಿ ವಾರಿಯರ್ಸ್: ಕಿರಣ್ ನವಗಿರೆ, ವೃಂದಾ ದಿನೇಶ್, ದೀಪ್ತಿ ಶರ್ಮಾ (ನಾಯಕಿ), ತಹ್ಲಿಯಾ ಮೆಕ್‌ಗ್ರಾತ್, ಶ್ವೇತಾ ಸೆಹ್ರಾವತ್, ಗ್ರೇಸ್ ಹ್ಯಾರಿಸ್, ಚಿನೆಲ್ಲೆ ಹೆನ್ರಿ, ಸೋಫಿ ಎಕಲ್‌ಸ್ಟನ್, ಉಮಾ ಚೆಟ್ರಿ (ವಿಕೆಟ್ ಕೀಪರ್), ಕ್ರಾಂತಿ ಗೌಡ್, ಸೈಮಾ ಠಾಕೋರ್.
-
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್‌ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
RCB Vs LSG: ಬೆಂಗಳೂರಿನಲ್ಲಿ ಆರ್‌ಸಿಬಿ-ಎಲ್ಎಸ್ಜಿ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Virat Kohli: ಘನತೆಗೆ ತಕ್ಕ ಆಟ ಇಲ್ಲ; ವಿರಾಟ್ ಕೊಹ್ಲಿ ಬದಲಿಗೆ ಬೆಥೆಲ್ ಆಡಿಸುವ ಸೂಚನೆ ನೀಡಿದ್ರಾ ಭಾರತದ ಮಾಜಿ ಕ್ರಿಕೆಟಿಗ? -
ಬೆಂಗಳೂರಲ್ಲಿ RCB ಪಂದ್ಯ: ಏ.15ರಂದು ಸ್ಟೇಡಿಯಂ ಸುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ -
ಆರ್‌ಸಿಬಿ ಗೆಲುವಿನ ಸಂಭ್ರಮದಲ್ಲಿ ಮುಳುಗಿದ ಅನುಷ್ಕಾ-ಅನನ್ಯಾ ಬಿರ್ಲಾ: ನೆಟ್ಟಿಗರ ಮನಗೆದ್ದ ಆ ಹ್ಯಾಂಡ್ಶೇಕ್ ವಿಡಿಯೋ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು










Click it and Unblock the Notifications