RCB vs PBKS: ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು: 9 ವರ್ಷಗಳ ಬಳಿಕ ಫೈನಲ್ ತಲುಪಿದ ಆರ್‌ಸಿಬಿ
18 ವರ್ಷಗಳ ಬಳಿಕ ಆರ್ ಸಿಬಿ ಅಭಿಮಾನಿಗಳ ಕನಸು ನನಸಾಗಲು ಇನ್ನೊಂದು ಮೆಟ್ಟಿಲು ಬಾಕಿ ಇದೆ. ಗುರುವಾರ ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂಜಾಬ್ ಕಿಂಗ್ಸ್ ವಿರುದ್ಧ 8 ವಿಕೆಟ್‌ಗಳ ಅಮೋಘ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಮೊದಲು ಬ್ಯಾಟಿಂಗ್‌ಗೆ ಇಳಿದ ಪಂಜಾಬ್ ಆರ್ ಸಿಬಿ ಮಾರಕ ಬೌಲಿಂಗ್ ದಾಳಿ ಎದುರು ಕಂಗಾಲಾಯಿತು. ಯಶ್ ದಯಾಳ್ ಪ್ರಿಯಾಂಶ್ ಆರ್ಯ ವಿಕೆಟ್ ಪಡೆಯುವ ಮೂಲಕ ಪಂಜಾಬ್ ಕಿಂಗ್ಸ್ ಪತನಕ್ಕೆ ಮುನ್ನುಡಿ ಬರೆದರು.

ಗಾಯದಿಂದ ಚೇತರಿಸಿಕೊಂಡ ಬಳಿಕ ವಾಪಸಾತಿ ಮಾಡಿದ ಜೋಶ್ ಹೇಜಲ್‌ವುಡ್ ಶ್ರೇಯಸ್ ಅಯ್ಯರ್ ಮತ್ತು ಜೋಶ್ ಇಂಗ್ಲಿಸ್ ವಿಕೆಟ್ ಪಡೆಯುವ ಮೂಲಕ ಪಂಜಾಬ್‌ಗೆ ದೊಡ್ಡ ಆಘಾತ ನೀಡಿದರು. ಹೇಜಲ್‌ವುಡ್ ಮೂರು ವಿಕೆಟ್ ಪಡೆದುಕೊಂಡರು. ಭುವನೇಶ್ವರ್ ಕುಮಾರ್ ಪ್ರಭ್‌ಸಿಮ್ರನ್ ಅವರ ವಿಕೆಟ್ ಪಡೆದರು.
ಕಳೆದ ಕೆಲವು ಪಂದ್ಯಗಳಲ್ಲಿ ದುಬಾರಿಯಾಗಿದ್ದು ಸುಯಾಶ್ ಶರ್ಮಾ ಒಂದೇ ಓವರ್ ನಲ್ಲಿ 2 ವಿಕೆಟ್ ಪಡೆದು ಅಬ್ಬರಿಸಿದರು. ಬಳಿಕ ಅಪಾಯಕಾರಿ ಬ್ಯಾಟರ್ ಮಾರ್ಕಸ್ ಸ್ಟೊಯಿನಿಸ್ ಅವರ ವಿಕೆಟ್ ಪಡೆಯುವ ಮೂಲಕ ಮೂರು ವಿಕೆಟ್ ಉರುಳಿಸಿದರು. ರೊಮಾರಿಯೋ ಶೆಫರ್ಡ್ 1 ವಿಕೆಟ್ ಪಡೆದರು. ಯಶ್ ದಯಾಳ್ 2 ವಿಕೆಟ್ ಪಡೆದುಕೊಂಡರು. ಆರ್ ಸಿಬಿ ಮಾರಕ ಬೌಲಿಂಗ್ ದಾಳಿಗೆ ಸಿಲುಕಿದ ಪಂಜಾಬ್ ಕಿಂಗ್ಸ್ ಕೇವಲ 14.1 ಓವರ್ ಗಳಲ್ಲಿ 101 ರನ್‌ಗಳಿಗೆ ಆಲೌಟ್ ಆಯಿತು.
ಅಬ್ಬರಿಸಿದ ಫಿಲ್ ಸಾಲ್ಟ್
102 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಆರ್ ಸಿಬಿ ಉತ್ತಮ ಆರಂಭ ಪಡೆಯಿತು. ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಮೊದಲ ವಿಕೆಟ್‌ಗೆ 30 ರನ್ ಕಲೆಹಾಕಿದರು. ಕೊಹ್ಲಿ 12 ರನ್ ಗಳಿಸಿದ್ದಾಗ ಔಟಾದರು. ಆದರೆ ಫಿಲ್ ಸಾಲ್ಟ್ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದರು. ಮಯಾಂಕ್ ಅಗರ್ವಾಲ್ 13 ಎಸೆತಗಳಲ್ಲಿ 19 ರನ್ ಗಳಿಸಿದರೆ, ಫಿಲ್ ಸಾಲ್ಟ್ ಮತ್ತೊಂದು ಕಡೆ ಅಬ್ಬರಿಸಿದರು. ಸಾಲ್ಟ್ 27 ಎಸೆತಗಳಲ್ಲಿ 6 ಬೌಂಡರಿ 3 ಭರ್ಜರಿ ಸಿಕ್ಸರ್ ಸಹಿತ ಅಜೇಯ 56 ರನ್ ಗಳಿಸಿದರು. ನಾಯಕ ರಜತ್ ಪಟಿದಾರ್ 8 ಎಸೆತಗಳಲ್ಲಿ ಅಜೇಯ 15 ರನ್ ಗಳಿಸಿ ಸಿಕ್ಸರ್ ಸಿಡಿಸುವ ಮೂಲಕ ಆರ್ ಸಿಬಿಗೆ ಗೆಲುವು ತಂದುಕೊಟ್ಟರು.
10 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 106 ರನ್ ಕಲೆಹಾಕಿದ ಆರ್ ಸಿಬಿ ಅಮೋಘ ಗೆಲುವು ಸಾಧಿಸುವ ಮೂಲಕ 9 ವರ್ಷಗಳ ಬಳಿಕ ಫೈನಲ್‌ಗೆ ಲಗ್ಗೆಯಿಟ್ಟಿದೆ. ಜೂನ್ 3ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದೆ.
-
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
ಐಪಿಎಲ್ 2026 ಉದ್ಘಾಟನಾ ಪಂದ್ಯಕ್ಕೂ ಮುನ್ನ ಆರ್ಸಿಬಿಯಿಂದ ಸ್ಟಾರ್ ಆಟಗಾರ ಔಟ್ -
ಆರ್‌ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್ -
ಜೋಶ್ ಹ್ಯಾಜಲ್ವುಡ್ ಔಟ್, 7 ಕೋಟಿಯ ಆಟಗಾರನಿಗಿಲ್ಲ ಸ್ಥಾನ; ಅಶ್ವಿನ್ ಹೇಳಿದ ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11 ಇಲ್ಲಿದೆ -
IPL 2026 Kannadigas: ಐಪಿಎಲ್ 19ನೇ ಆವೃತ್ತಿಯಲ್ಲಿ ಅಬ್ಬರಿಸಲು ಸಜ್ಜಾದ ಕನ್ನಡದ ಕಲಿಗಳು -
RCB: ಒಂದೊಂದು ನಿಮಿಷವೂ ಮುಖ್ಯ; ಐಪಿಎಲ್ ಆರಂಭಕ್ಕೂ ಮುನ್ನ ಆರ್‌ಸಿಬಿ ಸಹ ಆಟಗಾರರಿಗೆ ಕೊಹ್ಲಿ ಖಡಕ್ ವಾರ್ನ್ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್‌ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ












Click it and Unblock the Notifications