RCB vs DC: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ; ಫಿಲ್ ಸಾಲ್ಟ್ ಅಲಭ್ಯ, ಸ್ಫೋಟಕ ಬ್ಯಾಟರ್ ಎಂಟ್ರಿ

ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2025ರ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಟಾಸ್ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡಗಳು ಬಲಿಷ್ಠ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗವನ್ನು ಹೊಂದಿದ್ದು ರೋಚಕ ಹಣಾಹಣಿಯನ್ನು ನಿರೀಕ್ಷೆ ಮಾಡಲಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್ ಈ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ. ಈವರೆಗೆ ಆಡಿರುವ 8 ಪಂದ್ಯಗಳಲ್ಲಿ 6 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು 12 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಕೆಎಲ್ ರಾಹುಲ್, ಕರುಣ್ ನಾಯರ್, ಅಕ್ಷರ್ ಪಟೇಲ್, ಅಭಿಷೇಕ್ ಪೊರೆಲ್, ಟ್ರಿಸ್ಟಾನ್ ಸ್ಟಬ್ಸ್ ಉತ್ತಮ ಫಾರ್ಮ್‌ನಲ್ಲಿದ್ದು ಬ್ಯಾಟಿಂಗ್‌ಗೆ ಬಲ ತಂದಿದ್ದಾರೆ. ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್ ತಂಡದ ಪ್ರಮುಖ ಬೌಲಿಂಗ್ ಅಸ್ತ್ರವಾಗಿದ್ದಾರೆ.

rcb win the toss opted bowl first ipl 2025 virat kohli jacob bethell

ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಆರ್ ಸಿಬಿ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. ಚೇಸಿಂಗ್‌ನಲ್ಲಿ ಅಜೇಯ 93 ರನ್ ಗಳಿಸಿದ್ದ ಕರ್ನಾಟಕದ ಆಟಗಾರ ಕೆಎಲ್ ರಾಹುಲ್ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಿದ್ದರು. ಗೆಲುವಿನ ಬಳಿಕ ಕಾಂತಾರ ಸಿನಿಮಾ ಶೈಲಿಯಲ್ಲಿ ಸಂಭ್ರಮಾಚರಣೆ ಮಾಡಿದ್ದು ಸಾಕಷ್ಟು ಸದ್ದು ಮಾಡಿತ್ತು.

ಇದೀಗ ವಿರಾಟ್ ಕೊಹ್ಲಿಗೆ ದೆಹಲಿ ತವರಿನ ಅಂಗಳವಾಗಿದ್ದು, ಬೆಂಗಳೂರಿನ ಸೋಲಿಗೆ ಆರ್ ಸಿಬಿ ಸೇಡು ತೀರಿಸಿಕೊಳ್ಳಲಿದೆ ಎಂದು ಅಭಿಮಾನಿಗಳು ನಿರೀಕ್ಷೆ ಮಾಡಿದ್ದಾರೆ. ಆರ್ ಸಿಬಿ ಈ ಆವೃತ್ತಿಯಲ್ಲಿ ತವರಿನ ಹೊರಗಡೆ ಆಡಿರುವ 5 ಪಂದ್ಯಗಳಲ್ಲೂ ಗೆಲುವು ಸಾಧಿಸಿದ್ದು ದೆಹಲಿಯಲ್ಲೂ ಗೆಲುವಿನ ಸರಣಿ ಮುಂದುವರೆಸುವ ವಿಶ್ವಾಸದಲ್ಲಿದೆ.

ತಂಡದಲ್ಲಿ ಬದಲಾವಣೆ

ಫಿಲ್ ಸಾಲ್ಟ್‌ ಗಾಯದ ಕಾರಣದಿಂದ ಈ ಪಂದ್ಯದಿಂದ ಹೊರಗುಳಿದಿದ್ದು ಸ್ಫೋಟಕ ಆಲ್‌ರೌಂಡರ್ ಜೇಕಬ್ ಬೆಥೆಲ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಅವಕಾಶ ಪಡೆದಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಫಾಫ್ ಡುಪ್ಲೆಸಿಸ್ ವಾಪಸಾಗಿದ್ದು ಬ್ಯಾಟಿಂಗ್‌ಗೆ ಬಲ ತಂದಿದ್ದಾರೆ.

ಉಭಯ ತಂಡಗಳ ಆಡುವ ಬಳಗ

ಆರ್ ಸಿಬಿ: ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್, ಯಶ್ ದಯಾಳ್.

ಡೆಲ್ಲಿ ಕ್ಯಾಪಿಟಲ್ಸ್: ಫಾಫ್ ಡುಪ್ಲೆಸಿಸ್, ಅಭಿಷೇಕ್ ಪೊರೆಲ್, ಕರುಣ್ ನಾಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್ (‍ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ದುಷ್ಮಂತ ಚಮೀರಾ, ಮುಖೇಶ್ ಕುಮಾರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+