RCB vs PBKS: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ; ಸ್ಫೋಟಕ ಆಲ್‌ರೌಂಡರ್ ಎಂಟ್ರಿ

ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಆರ್‌ಸಿಬಿ ಮೊದಲು ಬ್ಯಾಟಿಂಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಪ್ಲೇಆಫ್‌ ದೃಷ್ಟಿಯಿಂದ ಈ ಪಂದ್ಯದಲ್ಲಿ ಗೆಲುವು ಸಾಧಿಸುವುದು ಆರ್ ಸಿಬಿಗೆ ಮುಖ್ಯವಾಗಿದ್ದು, ಬೆಂಗಳೂರಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಉತ್ಸಾಹದಲ್ಲಿದೆ.

ಕಳೆದ ಪಂದ್ಯದಲ್ಲಿ ಟಾಸ್ ಸೋತಿದ್ದ ರಜತ್ ಪಟಿದಾರ್ ಈ ಬಾರಿ ಟಾಸ್ ಗೆದ್ದಿದ್ದಾರೆ. ಆರ್ ಸಿಬಿ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ಲಿಯಾಮ್ ಲಿವಿಂಗ್‌ಸ್ಟೋನ್ ಬದಲಾಗಿ ಸ್ಫೋಟಕ ಆಲ್‌ರೌಂಡರ್ ರೊಮಾರಿಯೋ ಶೆಫರ್ಡ್ ಅವಕಾಶ ಪಡೆದಿದ್ದಾರೆ.

rcb win the toss opted bowl firts playing xi pitch report ipl 2025

ಟಾಸ್ ಗೆದ್ದ ಬಳಿಕ ಮಾತನಾಡಿದ ಆರ್ ಸಿಬಿ ನಾಯಕ ರಜತ್ ಪಟಿದಾರ್, ನಾವು ಮೊದಲು ಬೌಲಿಂಗ್ ಮಾಡುತ್ತೇವೆ. ವಿಕೆಟ್‌ ಉತ್ತಮವಾಗಿ ಕಾಣಿಸುತ್ತಿದೆ, ಚೇಸ್ ಮಾಡುವಾಗ ಕೂಡ ಏನೂ ಬದಲಾಗಲ್ಲ ಎನಿಸುತ್ತಿದೆ. ಮೊದಲು ಬೌಲಿಂಗ್ ಮಾಡಿದರೆ ಪಿಚ್ ಬಗ್ಗೆ ಸ್ಪಷ್ಟನೆ ಸಿಗಲಿದೆ. ನಾವು ಸ್ಥಳಗಳನ್ನು ನೋಡುತ್ತಿಲ್ಲ ಉತ್ತಮ ಕ್ರಿಕೆಟ್ ಆಡಲು ಪ್ರಯತ್ನಿಸುತ್ತೇವೆ ಎಂದಿದ್ದಾರೆ.

ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮಾತನಾಡಿ, ನಾವು ಕೂಡ ಬೌಲಿಂಗ್ ಮಾಡಲು ಉದ್ದೇಶಿಸಿದ್ದವು. ಆದರೆ ಟಾಸ್ ನಮ್ಮ ಕಡೆ ಇಲ್ಲದಿದ್ದಾಗ ಯಾವುದೇ ಪರಿಸ್ಥಿತಿಗೆ ಹೊಂದಿಕೊಳ್ಳಬೇಕು, ಇದು ನಮಗೆ ಮೊದಲ ಮಧ್ಯಾಹ್ನದ ಪಂದ್ಯ. ಮೊದಲು ಉತ್ತಮ ಮೊತ್ತ ಕಲೆಹಾಕಿದರೆ, ಡಿಫೆಂಡ್ ಮಾಡಿಕೊಳ್ಳುವ ಅವಕಾಶವಿದೆ, ಕೊನೆಯ ಪಂದ್ಯದಲ್ಲಿ ನಮಗೆ ಉತ್ತಮ ಬೆಂಬಲ ಸಿಕ್ಕಿತ್ತು, ಅದೇ ತಂಡದ ಜೊತೆ ಆಡುತ್ತಿದ್ದೇವೆ ಎಂದರು.

ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಆರ್ ಸಿಬಿ ಪ್ಲೇಆಫ್ ಅವಕಾಶ ಮತ್ತಷ್ಟು ಸುಲಭವಾಗುತ್ತದೆ. ಆಡಿರುವ 7 ಪಂದ್ಯಗಳಲ್ಲಿ 4 ಪಂದ್ಯ ಗೆದ್ದಿರುವ ಆರ್ ಸಿಬಿ ಸದ್ಯ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಪಂಜಾಬ್ ವಿರುದ್ಧ ಗೆಲುವು ಸಾಧಿಸಿದರೆ 3ನೇ ಸ್ಥಾನಕ್ಕೇರುವ ಅವಕಾಶವಿದೆ.

ಉಭಯ ತಂಡಗಳ ಆಡುವ ಬಳಗ

ಆರ್ ಸಿಬಿ: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಶ್ ಶರ್ಮಾ, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.

ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭಾಸಿಮ್ರಾನ್ ಸಿಂಗ್, ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಮಾರ್ಕೊ ಜಾನ್ಸೆನ್, ಹರ್ಪ್ರೀತ್ ಬ್ರಾರ್, ಕ್ಸೇವಿಯರ್ ಬಾರ್ಟ್ಲೆಟ್, ಅರ್ಶದೀಪ್ ಸಿಂಗ್, ಯುಜ್ವೇಂದ್ರ ಚಾಹಲ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+