KKR vs RCB: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ: ಪ್ಲೇಯಿಂಗ್ ಇಲೆವೆನ್ ಹೇಗಿದೆ?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಆವೃತ್ತಿಗೆ ಅದ್ದೂರಿ ಚಾಲನೆ ಸಿಕ್ಕಿದೆ. ಕೋಲ್ಕತಾದ ಈಡನ್ ಗಾರ್ಡನ್ಸ್‌ನಲ್ಲಿ ಮೊದಲ ಪಂದ್ಯ ನಡೆಯುತ್ತಿದ್ದು ಟಾಸ್ ಗೆದ್ದ ಆರ್ ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲ ಪಂದ್ಯ ಆರಂಭಕ್ಕೆ ಮುನ್ನ ಅದ್ದೂರಿ ಉದ್ಘಾಟನಾ ಸಮಾರಂಭ ನಡೆಯಿತು. ಶ್ರೇಯಾ ಘೋಷಾಲ್, ದಿಶಾ ಪಟಾನಿ ಹಾಡು, ನೃತ್ಯದ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದರು. ಕೆಕೆಆರ್ ತಂಡದ ಮಾಲೀಕ, ಬಾಲಿವುಡ್ ನಟ ಶಾರುಖ್ ಖಾನ್ ಕೂಡ ಅಭಿಮಾನಿಗಳನ್ನು ರಂಜಿಸಿದರು.
ಶಾರುಖ್ ಖಾನ್ ಮತ್ತು ವಿರಾಟ್ ಕೊಹ್ಲಿ ಜವಾನ್ ಸಿನಿಮಾದ ಹಾಡಿಗೆ ನೃತ್ಯ ಮಾಡಿದರು. ರಿಂಕು ಸಿಂಗ್ ಕೂಡ ಶಾರುಖ್ ಖಾನ್ ಜೊತೆ ಹೆಜ್ಜೆಹಾಕಿದರು. ಐಪಿಎಲ್ ಈ ಮಟ್ಟದಲ್ಲಿ ಯಶಸ್ಸು ಕಂಡಿರುವುದಕ್ಕೆ ಶಾರುಖ್ ಖಾನ್ ಸಂತಸ ವ್ಯಕ್ತಪಡಿಸಿದರು. ವಿರಾಟ್ ಕೊಹ್ಲಿ ಕೂಡ ಈ ಬಗ್ಗೆ ಮಾತನಾಡಿ, ಯುವ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದು ಮುಂದಿನ ದಿನಗಳಲ್ಲಿ ಐಪಿಎಲ್ ಮತ್ತಷ್ಟು ಜನಪ್ರಿಯವಾಗಲಿದೆ ಎಂದು ಹೇಳಿದರು.

ಟಾಸ್ ಗೆದ್ದ ಆರ್ ಸಿಬಿ
ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಆರ್ ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್‌ಗೆ ಮೊದಲು ಮಾತನಾಡಿದ ಆರ್ ಸಿಬಿ ನಾಯಕ ರಜತ್ ಪಾಟಿದಾರ್ ಆರ್ ಸಿಬಿ ಯಂತಹ ದೊಡ್ಡ ತಂಡವನ್ನು ಮುನ್ನಡೆಸುವ ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದರು. ಈಡನ್ ಗಾರ್ಡನ್ಸ್ ಕ್ರೀಡಾಂಗಣ ನನ್ನ ಮೆಚ್ಚಿನ ಕ್ರೀಡಾಂಗಣದಲ್ಲಿ ಒಂದಾಗಿದೆ, ಇಲ್ಲಿ ನಾನು ಹಲವು ಬಾರಿ ಉತ್ತಮ ಪ್ರದರ್ಶನ ನೀಡಿದ್ದೇನೆ, ನಮಗೆ ಬೆಂಬಲ ಕೊಡುತ್ತಿರುವ ಎಲ್ಲಾ ಅಭಿಮಾನಿಗಳಿಗೆ ಧನ್ಯವಾದ ಎಂದು ಹೇಳಿದರು.
ಉಭಯ ತಂಡಗಳ ಆಡುವ ಬಳಗ
ಆರ್‌ಸಿಬಿ: ಫಿಲ್ ಸಾಲ್ಟ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ರಜತ್ ಪಟಿದಾರ್ (ನಾಯಕ), ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರಸಿಕ್ ಸಲಾಮ್ ದಾರ್, ಜೋಶ್ ಹೇಜಲ್‌ವುಡ್, ಯಶ್ ದಯಾಳ್, ಸುಯಾಶ್ ಶರ್ಮಾ.
ಇಂಪ್ಯಾಕ್ಟ್ ಪ್ಲೇಯರ್: ದೇವದತ್ ಪಡಿಕ್ಕಲ್, ಸ್ವಪ್ನಿಲ್ ಸಿಂಗ್, ಮನೋಜ್ ಭಾಂಡಗೆ, ರೊಮಾರಿಯೋ ಶೆಫರ್ಡ್, ಅಭಿನಂದನ್ ಸಿಂಗ್.
ಕೆಕೆಆರ್: ಕ್ವಿಂಟನ್ ಡಿ ಕಾಕ್, ಸುನಿಲ್ ನರೇನ್, ಅಜಿಂಕ್ಯ ರಹಾನೆ (ನಾಯಕ), ಆಂಗ್‌ಕ್ರಿಶ್ ರಘುವಂಶಿ, ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಸ್ಪೆನ್ಸರ್ ಜಾನ್ಸನ್.
ಇಂಪ್ಯಾಕ್ಟ್ ಪ್ಲೇಯರ್: ಅನ್ರಿಚ್ ನೊಕಿಯಾ, ಮನೀಶ್ ಪಾಂಡೆ, ವೈಭವ್ ಅರೋರಾ, ಲವ್‌ನಿತ್ ಸಿಸೋಡಿಯಾ, ಅನುಕುಲ್ ರಾಯ್.












Click it and Unblock the Notifications