RCB vs PBKS: ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ; ಹೇಜಲ್‌ವುಡ್ ವಾಪಸ್
ಮುಲ್ಲನ್‌ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಪಿಎಲ್ 2025ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಟಾಸ್ ಗೆದ್ದಿರುವ ಆರ್‌ಸಿಬಿ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. 9 ವರ್ಷಗಳ ಬಳಿಕ ಫೈನಲ್ ತಲುಪುವ ಉತ್ಸಾಹದಲ್ಲಿರುವ ಆರ್ ಸಿಬಿ ತಂಡದಲ್ಲಿ ಒಂದು ಬದಲಾವಣೆ ಮಾಡಿದ್ದು ನುವಾನ್ ತುಷಾರ ಬದಲಾಗಿ ಜೋಶ್ ಹೇಜಲ್‌ವುಡ್ ತಂಡಕ್ಕೆ ಮರಳಿದ್ದಾರೆ.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಭರ್ಜರಿ ಗೆಲುವು ಸಾಧಿಸಿರುವ ಆರ್ ಸಿಬಿ ಹೆಚ್ಚಿನ ಆತ್ಮವಿಶ್ವಾಸದಿಂದಲೇ ಕಣಕ್ಕಿಳಿಯಲಿದೆ. ಪಂಜಾಬ್ ಕಿಂಗ್ಸ್ ಕೂಡ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನೇ ಬಗ್ಗು ಬಡಿದಿದೆ. ಮುಲ್ಲನ್‌ಪುರದಲ್ಲಿ ರೋಚಕ ಹಣಾಹಣಿಯನ್ನು ನಿರೀಕ್ಷೆ ಮಾಡಲಾಗಿದೆ.

ಜೋಶ್ ಹೇಜಲ್‌ವುಡ್ ವಾಪಸ್
ಪ್ರಮುಖ ಪಂದ್ಯದಲ್ಲಿ ಆರ್ ಸಿಬಿ ತಂಡದ ಬೌಲಿಂಗ್‌ಗೆ ಆನೆಬಲ ಬಂದಿದೆ. ತಂಡದ ಪ್ರಮುಖ ಬೌಲರ್ ಜೋಶ್ ಹೇಜಲ್‌ವುಡ್ ಸಂಪೂರ್ಣ ಫಿಟ್ ಆಗಿದ್ದು ಪ್ಲೇಯಿಂಗ್ ಇಲೆವೆನ್‌ಗೆ ಮರಳಿದ್ದಾರೆ. ಕಳೆದ ಪಂದ್ಯದಲ್ಲಿ ಸೊನ್ನೆಗೆ ಔಟಾಗಿದ್ದರೂ ಲಿಯಾಮ್ ಲಿವಿಂಗ್‌ಸ್ಟೋನ್ ಅವರಿಗೆ ಮತ್ತೊಂದು ಅವಕಾಶ ನೀಡಲಾಗಿದೆ.
ಉಭಯ ತಂಡಗಳ ಆಡುವ ಬಳಗ
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಯಶ್ ದಯಾಲ್, ಜೋಶ್ ಹ್ಯಾಜಲ್‌ವುಡ್, ಸುಯಾಶ್ ಶರ್ಮಾ. (ಮಯಾಂಕ್ ಅಗರ್ವಾಲ್ ; ಬದಲೀ ಆಟಗಾರ).
ಪಂಜಾಬ್ ಕಿಂಗ್ಸ್ : ಪ್ರಿಯಾಂಶ್ ಆರ್ಯ, ಪ್ರಭ್‌ಸಿಮ್ರಾನ್ ಸಿಂಗ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಅಜ್ಮತುಲ್ಲಾ ಒಮರ್ಜಾಯ್, ಹರ್‌ಪ್ರೀತ್ ಬ್ರಾರ್, ಅರ್ಷ್‌ದೀಪ್ ಸಿಂಗ್, ಕೈಲ್ ಜೇಮಿಸನ್. (ಬದಲೀ ಆಟಗಾರ: ವೈಶಾಖ್ ವಿಜಯ್‌ಕುಮಾರ್).












Click it and Unblock the Notifications