Glenn Maxwell: ಶತಕ ಬಾರಿಸಿ ರೋಹಿತ್ ದಾಖಲೆ ಸರಿಟ್ಟಿದ ಮ್ಯಾಕ್ಸ್‌ವೆಲ್
ಆಸ್ಟ್ರೇಲಿಯಾ, ಆರ್ಸಿಬಿ ಬ್ಯಾಟರ್ ಗ್ಲೆನ್ ಮ್ಯಾಕ್ಸ್‌ವೆಲ್, ಭಾನುವಾರ ಅಡಿಲೇಡ್ ಓವಲ್‌ನಲ್ಲಿ ನಡೆದ ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 120 ರನ್ ಗಳಿಸಿ ಹಲವು ದಾಖಲೆ ಬರೆದರು.
ಭಾರತದ ನಾಯಕ ರೋಹಿತ್ ಶರ್ಮಾ ಅವರ ಐತಿಹಾಸಿಕ ಸಾಧನೆಯನ್ನು ಸರಿಗಟ್ಟಿದ ಮ್ಯಾಕ್ಸ್‌ವೆಲ್ ಭಾರತದ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರ ದಾಖಲೆಯನ್ನು ಮುರಿದರು, ಅವರ ಶತಕದ ನೆರವಿನಿಂದ ಆಸ್ಟ್ರೇಲಿಯಾ ವೆಸ್ಟ್ ಇಂಡೀಸ್ ವಿರುದ್ಧ ನಾಲ್ಕು ವಿಕೆಟ್‌ಗಳಿಗೆ 241 ರನ್ ಗಳಿಸಿತು. 34 ರನ್‌ಗಳ ಗೆಲುವು ಸಾಧಿಸಿತು.

ಜೋಶ್ ಇಂಗ್ಲಿಸ್ ಕೇವಲ 4 ರನ್ ಗಳಿಸಿ ಔಟಾದರೆ, ಡೇವಿಡ್ ವಾರ್ನರ್ 19 ರನ್ ಮಾತ್ರ ಗಳಿಸಿದರು. ಮಿಚೆಲ್ ಮಾರ್ಷ್ 29 ರನ್ ಗಳಿಸಿದರು. ಆದರೆ ಗ್ಲೆನ್ ಮ್ಯಾಕ್ಸ್‌ವೆಲ್ ಮೊದಲ ಬಾಲ್‌ನಿಂದಲೇ ಅಬ್ಬರಿಸಲು ಶುರು ಮಾಡಿದರು. ಕೇವಲ 25 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಮಾರ್ಕಸ್ ಸ್ಟೊಯಿನಿಸ್ ಜೊತೆ ಮ್ಯಾಕ್ಸ್‌ವೆಲ್ 82-ರನ್‌ಗಳನ್ನು ಕಲೆಹಾಕಿದರು. ಬಳಿಕ ಬಂದ ಟಿಮ್ ಡೇವಿಡ್ ಕೂಡ ಕೊನೆಯಲ್ಲಿ ಅಬ್ಬರದ ಬ್ಯಾಟಿಂಗ್ ಮಾಡಿದರು. 14 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ಸಹಿತ ಅಜೇಯ 31 ರನ್ ಗಳಿಸಿದರು.
ಹಲವು ದಾಖಲೆ ಬರೆದ ಮ್ಯಾಕ್ಸ್‌ವೆಲ್
ಐದನೇ-ವಿಕೆಟ್ ಜೊತೆಯಾಟದ ಸಮಯದಲ್ಲಿ, ಮ್ಯಾಕ್ಸ್‌ವೆಲ್ ಟಿ20 ಕ್ರಿಕೆಟ್‌ನಲ್ಲಿ ತಮ್ಮ ವೃತ್ತಿಜೀವನದ ಐದನೇ ಶತಕವನ್ನು ಗಳಿಸಿದರು, ಸಾರ್ವಕಾಲಿಕ ಪಟ್ಟಿಯಲ್ಲಿ ರೋಹಿತ್ ಶರ್ಮಾ ಅವರ ದಾಖಲೆ ಸರಿಗಟ್ಟಿದರು. ಟಿ20 ಕ್ರಿಕೆಟ್‌ನಲ್ಲಿ 5 ಶತಕ ಗಳಿಸಿರುವ ಏಕೈಕ ಆಟಗಾರ ರೋಹಿತ್ ಶರ್ಮಾ ಆಗಿದ್ದರು, ಈಗ ಮ್ಯಾಕ್ಸ್‌ವೆಲ್ ಕೂಡ ಆ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.
ಮ್ಯಾಕ್ಸ್‌ವೆಲ್ ತಮ್ಮ ಅಜೇಯ 120 ರನ್‌ಗಳೊಂದಿಗೆ ಟಿ20 ಕ್ರಿಕೆಟ್‌ನಲ್ಲಿ ನಂ. 4 ಬ್ಯಾಟರ್‌ನಿಂದ ಅತಿ ಹೆಚ್ಚು ಸ್ಕೋರ್ ಗಳಿಸಿದ ಸೂರ್ಯಕುಮಾರ್ ಅವರ ದಾಖಲೆಯನ್ನು ಮುರಿದರು. ಈ ಹಿಂದೆ 2022 ರಲ್ಲಿ ಇಂಗ್ಲೆಂಡ್ ವಿರುದ್ಧ 117 ರನ್ ಗಳಿಸುವ ಮೂಲಕ ಸೂರ್ಯಕುಮಾರ್ ಯಾದವ್ ಈ ದಾಖಲೆಯನ್ನು ಹೊಂದಿದ್ದರು.
ಆರ್ಸಿಬಿ ಅಭಿಮಾನಿಗಳ ಸಂತಸ
ಐಪಿಎಲ್ ಆರಂಭಕ್ಕೆ ಸಮಯ ಹತ್ತಿರುವಾಗುತ್ತಿರುವ ಬೆನ್ನಲ್ಲೇ ಮ್ಯಾಕ್ಸ್‌ವೆಲ್ ಶತಕ ಬಾರಿಸಿರುವುದು ಆರ್ಸಿಬಿ ಅಭಿಮಾನಿಗಳ ಖುಷಿ ಹೆಚ್ಚಿಸಿದೆ. ಮ್ಯಾಕ್ಸ್‌ವೆಲ್ ಉತ್ತಮ ಫಾರ್ಮ್‌ನಲ್ಲಿದ್ದರೆ ಎದುರಾಳಿಗಳನ್ನು ಧ್ವಂಸ ಮಾಡುವುದು ಖಚಿತ. ಐಪಿಎಲ್‌ನಲ್ಲಿ ಕೂಡ ಅವರು ಇದೇ ಪ್ರದರ್ಶನ ನೀಡಿದರೆ, ಕಪ್ ಗೆಲ್ಲುವ ಆರ್ಸಿಬಿ ಕನಸಿಗೆ ಮತ್ತಷ್ಟು ಬಲ ಸಿಕ್ಕಂತಾಗುತ್ತದೆ.












Click it and Unblock the Notifications