RCB: ಆರ್‌ಸಿಬಿ ನಾಡಿನ್ ಡಿ ಕರ್ಕ್ ಮಾರಕ ಬೌಲಿಂಗ್ ದಾಳಿ, ಸ್ಫೋಟಕ ಬ್ಯಾಟಿಂಗ್‌ಗೆ ಮನಸೋತ ನೀತಾ ಅಂಬಾನಿ
RCB Nadine de Klerk: ಡಬ್ಲ್ಯೂಪಿಎಲ್ 2026 ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿಯು ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿಯಾಗಿ ಗೆದ್ದು ಬೀಗಿತು. ನಾಡಿನ್ ಡಿ ಕ್ಲರ್ಕ್ ಮಾರಕ ಬೌಲಿಂಗ್ ದಾಳಿ ಹಾಗೂ ಸ್ಫೋಟಕ ಬ್ಯಾಸ್ ಬೀಸುವ ಮೂಲಕ ಬೆಂಗಳೂರು ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ನೀತಾ ಅಂಬಾನಿಯವರು ಇವರ ಆಟಕ್ಕೆ ಮನಸೋತುಬಿಟ್ಟರು. ಹಾಗಾದ್ರೆ ಈ ಆಟಗಾರ್ತಿ ಯಾರು ಎನ್ನುವ ಪ್ರಶ್ನೆ ಬಹುತೇಕರಿಗೆ ಪ್ರಶ್ನೆ ಮೂಡಿರುತ್ತದೆ. ಇಲ್ಲಿದೆ ನೋಡಿ ಉತ್ತರ.
ಹೌದು, ಟಾಸ್ ಗೆದ್ದು ಮೊದಲು ಬ್ಯಾಟ್ ಬೀಸಿದ ಮುಂಬೈ ಇಂಡಿಯನ್ಸ್ ನಿಗದಿತ 20 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 154 ರನ್‌ಗಳನ್ನು ಕಲೆಹಾಕಿತು. ಈ ಮೂಲಕ ಆರ್‌ಸಿಬಿಗೆ ಸಾಧಾರಣ 155 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನತ್ತಿದ ಆರ್‌ಸಿಬಿ ಆರಂಭದಲ್ಲಿ ಅದ್ಭುತ ಪ್ರದರ್ಶನ ತೋರಿತು. ಆದರೆ, ನಾಯಕಿ ಸ್ಮೃತಿ ಮಂಧಾನ ಹಾಗೂ ಗ್ರೇಸ್ ಹ್ಯಾರಿಸ್ ಅವರು ವಿಕೆಟ್ ಒಪ್ಪಿಸಿದ ಬಳಿಕ ಒಂದೊದೇ ವಿಕೆಟ್ ಕಳೆದುಕೊಂಡು ತಂಡ ಸಂಕಷ್ಟಕ್ಕೆ ಸಿಲುಕಿತು.

ಈ ವೇಳೆ ಆಸರೆಯಾಗಿದ್ದೇ ನಾಡಿನ್ ಡಿ ಕ್ಲರ್ಕ್. ಅವರು ಕೊನೆಯವರೆಗೂ ಏಕಾಂಗಿ ಹೋರಾಟ ನಡೆಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಇವರು ಕೊನೇ ಓವರ್‌ನಲ್ಲಿ 18 ರನ್‌ಗಳನ್ನು ಬಾರಿಸಿದರು. ಇದರಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 157 ರನ್ ಕಲೆಹಾಕಿ ಮುಂಬೈ ವಿರುದ್ಧ ಬೆಂಗಳೂರು ಜಯಭೇರಿ ಬಾರಿಸಿತು.
ತತ್ತರಿಸಿದ ಹರ್ಮನ್‌ಪ್ರೀತ್ ಕೌರ್ ಬಳಗ: ಮುಂಬೈ ಪರ ಬ್ಯಾಟ್ ಬೀಸಿದ ಅಮೆಲಿಯಾ ಕೆರ್ 4(15), ಜಿ. ಕಮಲಿನಿ 32(28), ನಾಟ್ ಸ್ಕಿವರ್-ಬ್ರಂಟ್ 4(3), ನಾಯಕಿ ಹರ್ಮನ್‌ಪ್ರೀತ್ ಕೌರ್ 20(17), ನಿಕೊಲಾ ಕ್ಯಾರಿ 40(29), ಸಜೀವನ್ ಸಜನಾ 45(25) ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಆರ್‌ಸಿಬಿ ಬೌಲರ್‌ಗಳು ಮುಂಬೈ ಇಂಡಿಯನ್ಸ್ ತಂಡವನ್ನು 154 ರನ್‌ಗಳಿಗೆ ಕಟ್ಟಿಹಾಕಿರು. ಅದರಲ್ಲೂ ನಾಡಿನ್ ಡಿ ಕ್ಲರ್ಕ್ ಅವರ ಮಾರಕ ಬೌಲಿಂಗ್ ದಾಳಿಗೆ ಮುಂಬೈ ಬ್ಯಾಟರ್‌ಗಳು ತ್ತರಿಸಿದರು.
ನಾಡಿನ್ ಡಿ ಕ್ಲರ್ಕ್ ಅದ್ಭುತ ಪ್ರದರ್ಶನ: ನಾಡಿನ್ ಡಿ ಕ್ಲರ್ಕ್ 4 ಓವರ್ ಬೌಲಿಂಗ್ ಮಾಡಿ 26 ರನ್‌ಗಳನ್ನು ಬಿಟ್ಟುಕೊಟ್ಟು ಮುಂಬೈ ಇಂಡಿಯನ್ಸ್ ತಂಡದ 4 ಬಿಗ್ ವಿಕೆಟ್‌ಗಳನ್ನು ಕಬಳಿಸಿದರು. ಬಳಿಕ ಬ್ಯಾಟಿಂಗ್‌ನಲ್ಲೂ ಸಹ ಮಿಂಚಿದರು. 44 ಬಾಲ್‌ಗಳಲ್ಲಿ 2 ಸಿಕ್ಸ್, 7 ಬೌಂಡರಿಗಳ ಸಹಿತ 63 ರನ್‌ಗಳನ್ನು ಸಿಡಿಸಿ ತಂಡವನ್ನು ಗೆಲ್ಲಿಸಿ ನಾಟ್ ಔಟ್ ಆಗಿ ಉಳಿದರು.
ಡಿ ಕ್ಲರ್ಕ್ ಆಟಕ್ಕೆ ಮನಸೋತ ನೀತಾ ಅಂಬಾನಿ: ಈ ಪಂದ್ಯ ನವಿ ಮುಂಬೈನ ಡಾ.ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ನಡೆದಿಯಿತು. ಈ ವೇಳೆ ಮುಂಬೈ ಇಂಡಿಯನ್ಸ್ ತಂಡದ ಮಾಲಕಿ ನೀತಾ ಅಂಬಾನಿ ಅವರು ನಾಡಿನ್ ಡಿ ಕ್ಲರ್ಕ್ ಆಟ ಕಂಡು ಮನಸೋತುಬಿಟ್ಟರು. ಕೊನೆವರೆಗೂ ಡಿ ಕ್ಲರ್ಕ್ ಆಟವನ್ನೇ ಗಮನಿಸುತ್ತಾ ಕುಳಿತ್ತಿದ್ದು, ಈ ದೃಶ್ಯಗಳು ಇದೀಗ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿವೆ.
ಹೀಗೆ ಮುಂಬೈ ಇಂಡಿಯನ್ಸ್ ವಿರುದ್ಧ ನಾಡಿನ್ ಡಿ ಕ್ಲರ್ಕ್ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಅದ್ಭುತ ಪ್ರದರ್ಶನ ತೋರಿ ಆರ್‌ಸಿಬಿ ಅಭಿಮಾನಿಗಳ ಮನಸು ಗೆಲ್ಲುವುದಷ್ಟೇ ಅಲ್ಲದೆ, ಎದುರಾಳಿ ತಂಡದ ಮಾಲಕಿ ನೀತಾ ಅಂಬಾನಿ ಅವರ ಮನಸನ್ನು ಗೆದ್ದುಬಿಟ್ಟರು. ಇದೀಗ ಈ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿವೆ.
ಡಬ್ಲ್ಯೂಪಿಎಲ್ 2026 ಉದ್ಘಾಟನಾ ಪಂದ್ಯ ಜನವರಿ 9ರ ಶುಕ್ರವಾರ ನವಿ ಮುಂಬೈನಲ್ಲಿ ನಡೆಯಿತು. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ಆಲ್ರೌಂಡರ್ ನಾಡಿನ್ ಡಿ ಕ್ಲರ್ಕ್ ಆಲ್‌ರೌಂಡರ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಮಾಡಿದ್ದು, ಇದರಿಂದ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 3 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿತು.
ಎಷ್ಟಕ್ಕೆ ಖರೀದಿ: ದಕ್ಷಿಣ ಆಫ್ರಿಕಾದ ಆಲ್ರೌಂಡರ್ ನಾಡಿನ್ ಡಿ ಕ್ಲರ್ಕ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೆಗಾ ಹರಾಜಿನಲ್ಲಿ 65,00,000 ರೂಪಾಯಿಗಳಿಗೆ ಖರೀದಿಸಿತು. ಅವರ ಮೂಲ ಬೆಲೆ 30,00,000 ರೂಪಾಯಿ ಇತ್ತು.
-
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್‌ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
Ananya Birla: ಆರ್‌ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಆರ್‌ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್‌ಸಿಬಿ ಅಧಿಕೃತ ಮಾಹಿತಿ -
ಐಪಿಎಲ್ಗೂ ಮುನ್ನ ಆರ್‌ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Nandini: ಆರ್‌ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
IPL 2026: ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?











Click it and Unblock the Notifications