RCB: ಬಿಪಿಎಲ್‌ನಲ್ಲಿ ಆರ್‌ಸಿಬಿ ಬ್ಯಾಟರ್ ಅಬ್ಬರದ ಶತಕ: ಮ್ಯಾಕ್ಸ್‌ವೆಲ್ ಆಯ್ತು ಈಗ ವಿಲ್‌ಜ್ಯಾಕ್ಸ್!
ಐಪಿಎಲ್ 2024ರ ಆರಂಭಕ್ಕೆ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ಅಬ್ಬರಿಸುತ್ತಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಪಂದ್ಯದಲ್ಲಿ ಅಬ್ಬರದ ಶತಕ ಸಿಡಿಸಿದ್ದ ಮ್ಯಾಕ್ಸ್‌ವೆಲ್ ಅಭಿಮಾನಿಗಳ ಖುಷಿ ಹೆಚ್ಚಿಸಿದ್ದರು. ಈಗ ಬಾಂಗ್ಲಾ ಪ್ರೀಮಿಯರ್ ಲೀಗ್‌ನಲ್ಲಿ ಮತ್ತೊಬ್ಬ ಆರ್ ಸಿಬಿ ಆಟಗಾರ ಅಬ್ಬರದ ಶತಕ ಸಿಡಿಸಿದ್ದಾರೆ.
ಬಾಂಗ್ಲಾದೇಶ ಪ್ರೀಮಿಯರ್ ಲೀಗ್ (BPL) 2024 ಆವೃತ್ತಿಯಲ್ಲಿ ಇಂಗ್ಲಿಷ್ ಆಲ್‌ರೌಂಡರ್ ವಿಲ್ ಜ್ಯಾಕ್ಸ್ ತನ್ನ ತಂಡಕ್ಕಾಗಿ 53 ಎಸೆತಗಳಲ್ಲಿ ಅಜೇಯ 108 ರನ್ ಗಳಿಸಿದರು. ಅವರ ಶತಕದಲ್ಲಿ 5 ಬೌಂಡರಿ, 10 ಭರ್ಜರಿ ಸಿಕ್ಸರ್ ಸೇರಿದ್ದವು.

ಕೊಮಿಲ್ಲಾ ವಿಕ್ಟೋರಿಯನ್ಸ್ ತಂಡಕ್ಕಾಗಿ ಆಡುತ್ತಿರುವ ವಿಲ್ ಜ್ಯಾಕ್ಸ್ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಎಸ್‌ಎ20 ಲೀಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾ ಅವರು, ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲೂ ಅತ್ಯುತ್ತಮ ಪ್ರದರ್ಶನ ಮುಂದುವರೆಸಿದ್ದಾರೆ.
ವಿಲ್ ಜ್ಯಾಕ್ಸ್ ಎಲ್ಲಾ ಮೂರು ಸ್ವರೂಪಗಳಲ್ಲಿ ಇಂಗ್ಲೆಂಡ್ ಅನ್ನು ಪ್ರತಿನಿಧಿಸಿದ್ದಾರೆ ಮತ್ತು ಅವರ ಟಿ20 ಮಾದರಿಯಲ್ಲಿ ಆಕ್ರಮಣಕಾರಿ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿದ್ದಾರೆ. ಅಗ್ರ ಕ್ರಮಾಂಕದ ಬ್ಯಾಟರ್ ವಿಶ್ವದ ಅತ್ಯಂತ ಬೇಡಿಕೆಯ ಫ್ರಾಂಚೈಸ್ ಆಟಗಾರರಲ್ಲಿ ಒಬ್ಬರು. ಆಫ್-ಸ್ಪಿನ್ನಿಂಗ್ ಆಲ್-ರೌಂಡರ್ ಎಸ್‌ಎ20 ನ ಭಾಗವಾಗಿದ್ದರು.
ಫೆಬ್ರವರಿ 7 ರಂದು ವಿಕ್ಟೋರಿಯನ್ಸ್ ತಂಡವನ್ನು ಸೇರಿದ ಅವರು ಒಂದು ವಾರದ ನಂತರ ಅವರ ಎರಡನೇ ಟಿ20 ಶತಕವನ್ನು ಗಳಿಸಿದರು. ತಮ್ಮ ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಶಸ್ತಿಗಾಗಿ ಪೈಪೋಟಿ ನಡೆಸುತ್ತಿರುವ ಆರ್‌ಸಿಬಿಗೆ ಅವರ ಫಾರ್ಮ್ ಮತ್ತಷ್ಟು ಆತ್ಮವಿಶ್ವಾಸ ತಂದುಕೊಟ್ಟಿದೆ.
ಮೊದಲ ಕಪ್ ಗೆಲ್ಲುತ್ತಾ ಆರ್‌ಸಿಬಿ?
ಮೊದಲ ಪ್ರಶಸ್ತಿಯ ಹುಡುಕಾಟದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಪ್ರಮುಖ ಆಟಗಾರರು ಉತ್ತಮ ಫಾರ್ಮ್‌ನಲ್ಲಿರುವುದು ಈ ಬಾರಿ ಪ್ರಶಸ್ತಿಯ ಆಸೆಯನ್ನು ಹೆಚ್ಚಿಸಿದೆ. ಒಂದು ಕಡೆ ದೇಶೀಯ ಟೂರ್ನಿಯಲ್ಲಿ ಅರ್ ಸಿಬಿ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ವಿದೇಶಿ ಆಟಗಾರರು ಕೂಡ ವಿವಿಧ ಟೂರ್ನಿಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ.
ವಿಜಯ್ ಕುಮಾರ್ ವೈಶಾಖ್ ಬೌಲಿಂಗ್‌ನಲ್ಲಿ ಮಾತ್ರವಲ್ಲದೆ ಬ್ಯಾಟಿಂಗ್‌ನಲ್ಲಿ ಕೂಡ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದಾರೆ. ರಜತ್ ಪಾಟಿದಾರ್ ಕೂಡ ಉತ್ತಮ ಪ್ರದರ್ಶನ ನೀಡುತ್ತಿದ್ದು ಭರವಸೆ ಹೆಚ್ಚಿಸಿದ್ದಾರೆ.
ನಾಯಕ ಫಾಫ್ ಡು ಪ್ಲೆಸಿಸ್ ಎಸ್‌ಎ ಟಿ20 ಟೂರ್ನಿಯಲ್ಲಿ ಫಾರ್ಮ್‌ಗೆ ಮರಳಿದ್ದಾರೆ. ವಿಲ್ ಜ್ಯಾಕ್ಸ್ ಬ್ಯಾಟಿಂಗ್‌ನಲ್ಲಿ ಬೌಲಿಂಗ್‌ನಲ್ಲಿ ಕೂಡ ಉತ್ತಮ ಪ್ರದರ್ಶನ ನೀಡುತ್ತಿರುವುದು ಮತ್ತೊಂದು ಪ್ಲಸ್ ಪಾಯಿಂಟ್ ಅಗಿದೆ. ಈ ಬಾರಿ ಆರ್ ಸಿಬಿ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದ್ದು, ಮೊದಲ ಪ್ರಶಸ್ತಿ ಗೆಲ್ಲುತ್ತಾ ನೋಡಬೇಕಿದೆ.












Click it and Unblock the Notifications