Will Jacks: ಆರ್‌ಸಿಬಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ ವಿಲ್ ಜ್ಯಾಕ್ಸ್

ಇಂಗ್ಲೆಂಡ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಲ್‌ರೌಂಡರ್ ವಿಲ್ ಜಾಕ್ಸ್, ಪಾಕಿಸ್ತಾನ ವಿರುದ್ಧದ ಟಿ20 ಸರಣಿಗಾಗಿ ತವರಿಗೆ ಮರಳಿದ್ದಾರೆ. ತಮ್ಮ ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪ್ರಯಾಣದ ಬಗ್ಗೆ ಮಂಗಳವಾರ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದಾರೆ.

ಐಪಿಎಲ್‌ನಲ್ಲಿ ಆಡಿದ ಪ್ರತಿ ಕ್ಷಣವನ್ನೂ ಮೆಚ್ಚಿಕೊಂಡಿರುವ ಅವರು, ಅದನ್ನು ನಿಜವಾಗಿಯೂ ಸ್ಮರಣೀಯವಾಗಿಸುವಲ್ಲಿ ತೊಡಗಿಸಿಕೊಂಡಿರುವ ಪ್ರತಿಯೊಬ್ಬರಿಗೂ ವಿಶೇಷವಾಗಿ ಅವರ ತಂಡದ "ಅದ್ಭುತ" ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.

RCB s Will Jacks Reflects on Debut IPL Before England s T20 Series

ಪಾಕಿಸ್ತಾನ ವಿರುದ್ಧ ಟಿ20 ಸರಣಿ

ಮೇ 22 ರಂದು ಪ್ರಾರಂಭವಾಗಲಿರುವ ಪಾಕಿಸ್ತಾನ ವಿರುದ್ಧದ ಮುಂಬರುವ ಟಿ20 ಸರಣಿಗೆ ರಾಷ್ಟ್ರೀಯ ತಂಡವನ್ನು ಸೇರಲು ತಮ್ಮ ಐಪಿಎಲ್ ಫ್ರಾಂಚೈಸಿಗಳನ್ನು ತೊರೆದಿರುವ ಜೋಸ್ ಬಟ್ಲರ್, ಲಿಯಾಮ್ ಲಿವಿಂಗ್‌ಸ್ಟೋನ್ ಮತ್ತು ರೀಸ್ ಟೋಪ್ಲೆ ಸೇರಿದಂತೆ ಇಂಗ್ಲೆಂಡ್ ಆಟಗಾರರ ಗುಂಪಿನಲ್ಲಿ ಜಾಕ್ಸ್ ಕೂಡ ಇದ್ದಾರೆ.

ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ, "ನನ್ನ ಮೊದಲ ಐಪಿಎಲ್‌ನ ಪ್ರತಿ ನಿಮಿಷವನ್ನು ಪ್ರೀತಿಸುತ್ತೇವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಎಲ್ಲರಿಗೂ ದೊಡ್ಡ ಧನ್ಯವಾದಗಳು, ಆರ್ ಸಿಬಿ ಅಭಿಮಾನಿಗಳು ನೀವು ಅದ್ಭುತ" ಎಂದು ಹೇಳಿದ್ದಾರೆ.

ಮೊದಲ ಆವೃತ್ತಿಯಲ್ಲೇ ಮಿಂಚು

ಈ ಬಾರಿ ಐಪಿಎಲ್‌ನಲ್ಲಿ ಎಂಟು ಪಂದ್ಯಗಳನ್ನಾಡಿರುವ ಅವರು, 32.85 ಸರಾಸರಿ ಮತ್ತು 175ರ ಸ್ಟ್ರೈಕ್‌ರೇಟ್‌ನಲ್ಲಿ 230 ರನ್ ಗಳಿಸಿದ್ದಾರೆ. ಒಂದು ಶತಕ ಮತ್ತು ಒಂದು ಅರ್ಧಶತಕ ಕೂಡ ಗಳಿಸಿ ಮಿಂಚಿದ್ದಾರೆ.

ಗುಜರಾತ್ ಟೈಟಾನ್ಸ್ ವಿರುದ್ಧ ಕೇವಲ 51 ಎಸೆತಗಳಲ್ಲಿ ಅಜೇಯ 100 ರನ್ ಗಳಿಸುವ ಮೂಲಕ ದೊಡ್ಡ ಗೆಲುವಿಗೆ ಕಾರಣವಾಗಿದ್ದರು. ಕೊಹ್ಲಿ ಮತ್ತು ಜ್ಯಾಕ್ಸ್ ಅವರ ಅಮೋಘ ಆಟದ ನೆರವಿನಿಂದ ಆರ್ ಸಿಬಿ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು. 31 ಎಸೆತಗಳಲ್ಲಿ ಅರ್ಧಶತಕ ಗಳಿಸಿದ್ದ ಅವರು ನಂತರ ಕೇವಲ 10 ಎಸೆತಗಳಲ್ಲಿ 50 ರನ್ ಗಳಿಸಿ ಹೊಸ ದಾಖಲೆ ಬರೆದಿದ್ದರು.

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಆರ್‌ಸಿಬಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 47 ರನ್‌ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವು ತಂಡದ ಸತತ ಐದನೇ ಗೆಲುವಾಗಿದ್ದು, ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೇರಿದೆ.

ಆರ್‍ ಸಿಬಿ ತಮ್ಮ ಮೊದಲ ಎಂಟು ಲೀಗ್ ಪಂದ್ಯಗಳಲ್ಲಿ ಏಳು ಪಂದ್ಯಗಳಲ್ಲಿ ಸೋಲು ಅನುಭವಿಸಿದ ಬಳಿಕ ಸತತ ಐದು ಪಂದ್ಯಗಳನ್ನು ಗೆದ್ದು ಪ್ಲೇ ಆಫ್ ಕನಸು ಜೀವಂತವಾಗಿರಿಸಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+