Rinku Singh's Father Passes Away: ಭಾರತೀಯ ಸ್ಟಾರ್ ಕ್ರಿಕೆಟರ್ ರಿಂಕು ಸಿಂಗ್ ತಂದೆ ನಿಧನ
Rinku Singh's Father Passes Away: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ರಿಂಕು ಸಿಂಗ್ ಅವರ ತಂದೆ ಖಾನ್ಚಂದ್ರ ಸಿಂಗ್ ಅವರು ಇಂದು ನಿಧನರಾಗಿದ್ದಾರೆ. ಅವರು ಕಳೆದ ಕೆಲವು ದಿನಗಳಿಂದ ನಾಲ್ಕನೇ ಹಂತದ ಲಿವರ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಗ್ರೇಟರ್ ನೋಯಿಡಾದ ಯಥಾರ್ಥ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಖಚಂದ್ರ ಸಿಂಗ್ ಅವರ ಆರೋಗ್ಯ ಸ್ಥಿತಿ ಕಳೆದ ಕೆಲವು ದಿನಗಳಿಂದ ತೀವ್ರವಾಗಿ ಹದಗೆಟ್ಟಿತ್ತು. ವೈದ್ಯರು ಅವರನ್ನು ಉಳಿಸಲು ಎಲ್ಲ ಪ್ರಯತ್ನಗಳನ್ನೂ ಮಾಡಿದ್ದು, ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಮೂತ್ರಪಿಂಡ ವೈಫಲ್ಯ ಉಂಟಾದ ಕಾರಣ ನಿರಂತರ ಮೂತ್ರಪಿಂಡ ಬದಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಕ್ಯಾನ್ಸರ್ ದೇಹದ ಹಲವು ಅಂಗಾಂಗಗಳಿಗೆ ಹರಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಟೂರ್ನಿ ಬಿಟ್ಟು ಮನೆಗೆ ಮರಳಿದ ರಿಂಕು ಸಿಂಗ್
ಟಿ20 ವಿಶ್ವಕಪ್‌ಗಾಗಿ ಭಾರತ ತಂಡದೊಂದಿಗೆ ಇದ್ದ ರಿಂಕು ಸಿಂಗ್ ಅವರಿಗೆ ತಂದೆಯ ಆರೋಗ್ಯ ಸ್ಥಿತಿ ಹದಗೆಟ್ಟಿರುವ ಮಾಹಿತಿ ತಿಳಿಯುತ್ತಿದ್ದಂತೆ ಅವರು ತಕ್ಷಣವೇ ತಂಡವನ್ನು ಬಿಟ್ಟು ಸ್ವಗ್ರಾಮಕ್ಕೆ ತೆರಳಿದ್ದರು. ಚೆನ್ನೈನ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನವೇ ಅವರು ತುರ್ತಾಗಿ ಮನೆಗೆ ಪ್ರಯಾಣಿಸಿದ್ದರು.
ರಿಂಕು ಸಿಂಗ್ ತಂದೆ ನಿಧನಕ್ಕೆ ಗಣ್ಯರಿಂದ ಸಂತಾಪ
ಖಾನ್ಚಂದ್ರ ಸಿಂಗ್ ಅವರ ನಿಧನದ ಹಿನ್ನೆಲೆ ಕ್ರಿಕೆಟ್ ವಲಯದ ಹಲವಾರು ಗಣ್ಯರು, ಮಾಜಿ ಆಟಗಾರರು ಹಾಗೂ ಅಭಿಮಾನಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ರಿಂಕು ಸಿಂಗ್ ಹಾಗೂ ಅವರ ಕುಟುಂಬಕ್ಕೆ ಧೈರ್ಯ ತುಂಬುವ ಸಂದೇಶಗಳನ್ನು ಹಂಚಿಕೊಂಡಿದ್ದಾರೆ. ಈ ದುಃಖದ ಸಂದರ್ಭದಲ್ಲಿ ಕುಟುಂಬಕ್ಕೆ ಆತ್ಮಸ್ಥೈರ್ಯ ದೊರಕಲಿ ಎಂದು ಪ್ರಾರ್ಥಿಸಿದ್ದಾರೆ.
ರಿಂಕು ಸಿಂಗ್ ಅವರ ತಂದೆ, ಖಾಂಚಂದ್ ಸಿಂಗ್, ತಮ್ಮ ವೃತ್ತಿ ಜೀವನದಲ್ಲಿ ಅಲಿಗಢ್‌ನಲ್ಲಿ ಎಲ್‌ಪಿಜಿ ಸಿಲಿಂಡರ್ ವಿತರಣೆ ವ್ಯವಹಾರ ನಡೆಸುತ್ತಿದ್ದರು. ತಮ್ಮ ದಿನನಿತ್ಯದ ವ್ಯವಹಾರದಿಂದ ಕುಟುಂಬದ ಜೀವನೋಪಾಯವನ್ನು ನಿರ್ವಹಿಸುತ್ತಿದ್ದವರು. ಖಾಂಚಂದ್ ಸಿಂಗ್ ಅವರು ಕೇವಲ ಹಣಕಾಸಿನ ಬೆಂಬಲ ಮಾತ್ರವಲ್ಲ, ಮಗನ ಕ್ರಿಕೆಟ್ ಕನಸನ್ನು ನನಸು ಮಾಡಲು ಅಗತ್ಯ ಶ್ರಮ, ಸಮಯ ಮತ್ತು ಮಾರ್ಗದರ್ಶನ ನೀಡಿದ್ದರು. ಅವರ ನೆರವಿನಿಂದ ರಿಂಕು ತಮ್ಮ ತರಬೇತಿ, ಅಭ್ಯಾಸ ಮಾಡುವ ಮೂಲಕ ಕ್ರಿಕೆಟ್‌ನಲ್ಲಿ ಉತ್ತಮ ಸಾಧನೆ ಮಾಡಿದರು. ಟೀಂ ಇಂಡಿಯಾ ಮತ್ತು ಐಪಿಎಲ್‌ನಲ್ಲಿ ಕೆಕೆಆರ್ ತಂಡದಲ್ಲಿ ಮಿಂಚುತ್ತಿರುವ ಸ್ಟಾರ್ ಆಟಗಾರ ರಿಂಕು ಸಿಂಗ್ ಅವರ ಯಶಸ್ಸಿನ ಹಿಂದಿರುವ ಪ್ರಮುಖ ವ್ಯಕ್ತಿಗಳಲ್ಲಿ ಒಬ್ಬರು ಅವರ ತಂದೆ ಖಾಂಚಂದ್ ಸಿಂಗ್.












Click it and Unblock the Notifications