India vs New Zealand: ಎರಡನೇ ಟೆಸ್ಟ್‌ಗೆ ಮುನ್ನ ಭಾರತಕ್ಕೆ ಸಿಕ್ತು ಶುಭಸುದ್ದಿ

ನ್ಯೂಜಿಲೆಂಡ್ ವಿರದ್ಧದ ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಸೋಲು ಕಂಡ ಬಳಿಕ ಭಾರತ ತಂಡ ಎರಡನೇ ಟೆಸ್ಟ್‌ ಪಂದ್ಯಕ್ಕೆ ಸಜ್ಜಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಲು ಭಾರತಕ್ಕೆ ಮುಂದಿನ ಪಂದ್ಯಗಳಲ್ಲಿ ಗೆಲ್ಲುವುದು ಅನಿವಾರ್ಯವಾಗಿದೆ. ಆದ್ದರಿಂದ ಎರಡನೇ ಟೆಸ್ಟ್‌ನಲ್ಲಿ ಗೆಲ್ಲಲು ಭಾರತ ರಣತಂತ್ರ ರೂಪಿಸುತ್ತಿದೆ. ಈ ಬೆನ್ನಲ್ಲೇ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ಕುತ್ತಿಗೆ ನೋವಿನಿಂದ ಹೊರಗುಳಿದಿದ್ದ ಶುಭಮನ್ ಗಿಲ್ ಫಿಟ್ ಆಗಿದ್ದು, ಎರಡನೇ ಟೆಸ್ಟ್ ಪಂದ್ಯದಲ್ಲಿ ಆಡಲು ಸಜ್ಜಾಗಿದ್ದಾರೆ. ಮೊದಲ ಟೆಸ್ಟ್‌ನಲ್ಲಿ ಮೊಣಕಾಲು ನೋವಿನಿಂದ ನರಳುತ್ತಿದ್ದ ರಿಷಬ್ ಪಂತ್ ಕೂಡ ಫಿಟ್ ಆಗಿದ್ದು ಎರಡನೇ ಟೆಸ್ಟ್‌ನಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.

Rishabh Pant and Shubman Gill Fit for Pune Test Team India Update

ಬೆಂಗಳೂರು ಟೆಸ್ಟ್‌ನಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ 99 ರನ್ ಬಾರಿಸಿ ಶತಕದಿಂದ ವಂಚಿತರಾಗಿದ್ದ ರಿಷಬ್ ಪಂತ್, ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಬಳಿಕ ಅವರ ಕೀಪಿಂಗ್ ಮಾಡಲು ಕಣಕ್ಕಿಳಿಯಲಿಲ್ಲ. ಇದೀಗ ಪುಣೆ ಟೆಸ್ಟ್‌ಗೆ ಅವರು ಲಭ್ಯರಿದ್ದಾರೆ ಎಂದು ಭಾರತದ ಸಹಾಯಕ ಕೋಚ್ ರಿಯಾನ್ ಟೆನ್ ಡೋಸ್ಕಟೆ ಖಚಿತಪಡಿಸಿದ್ದಾರೆ.

ಡಿಸೆಂಬರ್ 2022 ರಲ್ಲಿ ಕಾರು ಅಪಘಾತ ಬಳಿಕ ಬಲ ಮೊಣಕಾಲಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಮೊದಲೇ ಗಾಯಗೊಂಡಿರುವ ಅವರ ಫಿಟ್‌ನೆಸ್ ಬಗ್ಗೆ ಬಿಸಿಸಿಐ ಹೆಚ್ಚಿನ ಕಾಳಜಿ ವಹಿಸುತ್ತಿದೆ. ಪುಣೆ ಟೆಸ್ಟ್‌ನಲ್ಲಿ ರಿಷಬ್ ಪಂತ್ ಕಣಕ್ಕಿಳಿದರೂ ಅವರು ವಿಕೆಟ್ ಕೀಪಿಂಗ್ ಮಾಡುವುದು ಅನುಮಾನ ಎನ್ನಲಾಗುತ್ತಿದೆ.

ಪಂತ್ ವಿಕೆಟ್ ಕೀಪಿಂಗ್ ಮಾಡದೇ ಇದ್ದರೆ, ಕೆಎಲ್ ರಾಹುಲ್ ಕೀಪರ್ ಆಗಿ ಕಣಕ್ಕಿಳಿಯಬೇಕಾಗುತ್ತದೆ. ಇಲ್ಲವಾದಲ್ಲಿ ಧ್ರುವ್ ಜುರೆಲ್ ವಿಕೆಟ್ ಕೀಪರ್ ಆಗಿ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಸ್ಥಾನ ಪಡೆಯಲಿದ್ದಾರೆ. ಒಂದು ವೇಳೆ ಧ್ರುವ್ ಜುರೆಲ್‌ಗೆ ಅವಕಾಶ ಸಿಕ್ಕರೆ ಕೆಎಲ್ ರಾಹುಲ್ ಅವರು ಬೆಂಚ್ ಕಾಯಬೇಕಾಗುವ ಪರಿಸ್ಥಿತಿ ಬರಬಹುದು.

ಶುಭಮನ್ ಗಿಲ್ ಸಂಪೂರ್ಣ ಫಿಟ್‌

ಕುತ್ತಿಗೆ ನೋವಿನಿಂದ ಬಳಲುತ್ತಿದ್ದ ಶುಭಮನ್ ಗಿಲ್ ಮೊದಲ ಟೆಸ್ಟ್‌ನಿಂದ ಹೊರಗುಳಿದಿದ್ದರು. ಆದರೂ ಬಳಿಕ ಅವರು ನೆಟ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಮಾಡಿದ್ದರು. ಗಿಲ್ ಬದಲಾಗಿ ಅವಕಾಶ ಪಡೆದಿದ್ದ ಸಫರ್ಘರಾಜ್ ಖಾನ್ ಎರಡನೇ ಇನ್ನಿಂಗ್ಸ್‌ನಲ್ಲಿ 150 ರನ್ ಗಳಿಸುವ ಮೂಲಕ ಭರವಸೆ ಮೂಡಿಸಿದ್ದಾರೆ.

ರವಿಚಂದ್ರನ್ ಅಶ್ವಿನ್ ಕೂಡ ಸಂಪೂರ್ಣವಾಗಿ ಫಿಟ್ ಆಗಿದ್ದಾರೆ. ಬೆಂಗಳೂರು ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ಅವರು ಎರಡು ಓವರ್ ಮಾತ್ರ ಬೌಲಿಂಗ್ ಮಾಡಿದ್ದರಿಂದ ಅವರ ಫಿಟ್‌ನೆಸ್ ಬಗ್ಗೆ ಕೂಡ ಅನುಮಾನವಿತ್ತು. ಆದರೆ ರಿಯಾನ್ ಟೆನ್‌ ಡೋಸ್ಕಟೆ ಅವರು ಅಶ್ವಿನ್ ಫಿಟ್ ಆಗಿದ್ದಾರೆ ಎಂದು ದೃಢಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+