IND vs ENG Test: ಬರ್ಮಿಗ್‌ಹ್ಯಾಮ್‌ನಲ್ಲಿ ಎಷ್ಟು ಭಾರತೀಯ ಬ್ಯಾಟರ್‌ಗಳು ಶತಕ ಬಾರಿಸಿದ್ದಾರೆ?
ಭಾರತ ಇಂಗ್ಲೆಂಡ್ ಪ್ರವಾಸದಲ್ಲಿ ಆರಂಭದಲ್ಲಿ ನಿರಾಸೆಯನ್ನು ಕಂಡಿದೆ. ಲೀಡ್ಸ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಸೋಲು ಕಂಡಿದೆ. ಈ ಮೂಲಕ ಇಂಗ್ಲೆಂಡ್ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.ಈಗ ಟೀಮ್ ಇಂಡಿಯಾ ಎರಡನೇ ಟೆಸ್ಟ್ ಪಂದ್ಯಕ್ಕೆ ಸಿದ್ಧತೆ ನಡೆಸಿದೆ. ಬರ್ಮಿಗ್‌ಹ್ಯಾಮ್‌ನಲ್ಲಿ ಟೀಮ್ ಇಂಡಿಯಾ ಜುಲೈ 3 ರಂದು ಎರಡನೇ ಟೆಸ್ಟ್ ಆಡಲಿದೆ.
ಬರ್ಮಿಂಗ್‌ಹ್ಯಾಮ್‌ನಲ್ಲಿ ಟೀಮ್ ಇಂಡಿಯಾದ ಸಾಧನೆ ಕಳಪೆಯಾಗಿದೆ. ಈ ಮೈದಾನದಲ್ಲಿ ಟೀಮ್ ಇಂಡಿಯಾ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಈ ಮೈದಾನದಲ್ಲಿ ಟೀಮ್ ಇಂಡಿಯಾ ಡ್ರಾ ಸಾಧಿಸಿದೆ. ಈ ಮೈದಾನದಲ್ಲಿ ಟೀಮ್ ಇಂಡಿಯಾ ಪರ ಹಲವು ಆಟಗಾರರು ಶತಕದ ಸಾಧನೆ ಮಾಡಿದ್ದಾರೆ. ಈ ಮೈದಾನದಲ್ಲಿ ಟೀಮ್ ಇಂಡಿಯಾ ಪರ ನಾಲ್ವರು ಬ್ಯಾಟ್ಸ್‌ಮನ್‌ಗಳು ಟೆಸ್ಟ್ ಶತಕಗಳನ್ನು ಗಳಿಸಿದ್ದಾರೆ.

ಟೀಮ್ ಇಂಡಿಯಾ ಪರ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಹಾಗೂ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸೇರಿದಂತೆ ನಾಲ್ವರು ಆಟಗಾರರು ಶತಕ ಸಾಧನೆ ಮಾಡಿದ್ದಾರೆ. ಇನ್ನು ಇಬ್ಬರು ಆಟಗಾರರಾದ ರಿಷಭ್ ಪಂತ್ ಹಾಗೂ ರವೀಂದ್ರ ಜಡೇಜಾ ಸಹ ಶತಕ ಬಾರಿಸಿ ಮಿಂಚಿದ್ದಾರೆ. ಈ ಇಬ್ಬರೂ ಆಟಗಾರರು ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿಯೂ ಆಡುವುದು ಬಹುತೇಕ ಖಚಿತವಾಗಿದೆ.
2022ರಲ್ಲಿ ಬರ್ಮಿಂಗ್‌ಹ್ಯಾಮ್‌ನ್ಲಿ ನಡೆದ ಪಂದ್ಯದಲ್ಲಿ ಭಾರತದ ಪರ ರವೀಂದ್ರ ಜಡೇಜಾ ಮತ್ತು ರಿಷಭ್ ಪಂತ್ ಇಬ್ಬರೂ ಶತಕಗಳನ್ನು ಗಳಿಸಿದರು. ಈ ಪಂದ್ಯದಲ್ಲಿ ರಿಷಭ್ ಪಂತ್ ಮೊದಲ ಇನಿಂಗ್ಸ್‌ನಲ್ಲಿ 146 ರನ್ ಹಾಗೂ ರವೀಂದ್ರ ಜಡೇಜಾ 104 ರನ್ ಸಿಡಿಸಿದರು. ಇವರಿಬ್ಬರ ಆಟದ ಪರಿಣಾಮ ಭಾರತ ಮೊದಲ ಇನಿಂಗ್ಸ್‌ನಲ್ಲಿ 416 ರನ್ ಸೇರಿಸಿತ್ತು. ಆದರೆ ಎರಡನೇ ಇನಿಂಗ್ಸ್‌ನಲ್ಲಿ ಭಾರತ ರನ್ ಕಲೆ ಹಾಕುವಲ್ಲಿ ವಿಫಲರಾದರು. ಅಲ್ಲದೆ ಈ ಪಂದ್ಯದಲ್ಲಿ 7 ವಿಕೆಟ್‌ಗಳಿಂದ ಸೋಲು ಕಂಡಿತ್ತು.

1999ರಲ್ಲಿ ಸಚಿನ್ ಶತಕ
1999ರಲ್ಲಿ ಟೀಮ್ ಇಂಡಿಯಾದ ದಿಗ್ಗಜ ಬ್ಯಾಟರ ಸಚಿನ್ ತೆಂಡುಲ್ಕರ್ ಶತಕ ಬಾರಿಸಿದ್ದರು. ಈ ಪಂದ್ಯದಲ್ಲಿ ಸಚಿನ್ 177 ಎಸೆತಗಳಲ್ಲಿ 122 ರನ್ ಸಿಡಿಸಿದ್ದರು. ಇದರಲ್ಲ 19 ಬೌಂಡರಿ, 1 ಸಿಕ್ಸರ್ ಒಳಗೊಂಡಿದ್ದವು. ಇನ್ನು 2018ರಲ್ಲಿ ವಿರಾಟ್ ಕೊಹ್ಲಿ 22 ಬೌಂಡರಿ, 1 ಸಿಕ್ಸರ್ ಸಹಾಯದಿಂದ 149 ರನ್ ಸಿಡಿಸಿ ಅಬ್ಬರಿಸಿದ್ದಾರೆ.
ಭರ್ಜರಿ ಫಾರ್ಮ್‌ನಲ್ಲಿ ರಿಷಭ್
ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಈಗಾಗಲೇ ಟೂರ್ನಿಯ ಮೊದಲ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಅಬ್ಬರಿಸಿದ್ದಾರೆ. ಅಲ್ಲದೆ ಆಡಿರುವ ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸಿ ದಾಖಲೆ ಬರೆದಿದ್ದಾರೆ. ಇವರು ಈ ಮೂಲಕ ಹೊಸ ಇತಿಹಾಸವನ್ನು ಬರೆದಿದ್ದಾರೆ. ರಿಷಭ್ ಇದೇ ಫಾರ್ಮ್‌ನ್ನು 2ನೇ ಟೆಸ್ಟ್ ಪಂದ್ಯದಲ್ಲೂ ಮುಂದುವರೆಸುವ ಪ್ಲ್ಯಾನ್ ಮಾಡಿಕೊಂಡಿದ್ದಾರೆ.












Click it and Unblock the Notifications