Rishabh Pant: ಟೆಸ್ಟ್ ಕ್ರಿಕೆಟ್‌ನಲ್ಲಿ ಅಬ್ಬರಿಸುವ ಸೂಚನೆ ಕೊಟ್ಟ ರಿಷಬ್ ಪಂತ್

ಅಪಘಾತದ ಬಳಿಕ ಸುದೀರ್ಘ ವಿಶ್ರಾಂತಿ ಪಡೆದಿದ್ದ ರಿಷಬ್ ಪಂತ್ ಮತ್ತೆ ಕ್ರಿಕೆಟ್ ಗೆ ಮರಳಿದ್ದಾರೆ. ಐಪಿಎಲ್‌ನಲ್ಲಿ ಅಷ್ಟೇನೂ ಮಿಂಚದೇ ಇದ್ದರೂ, ಪಂತ್ ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ಹಳೆಯ ಆಟದ ಝಲಕ್ ತೋರಿಸಿದ್ದಾರೆ. ದುಲೀಪ್ ಟ್ರೋಫಿ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಅಂತಾರಾಷ್ಟ್ರೀಯ ಟೆಸ್ಟ್‌ ಆಡಲು ನಾನು ಮತ್ತೆ ರೆಡಿ ಎನ್ನುವ ಸೂಚನೆ ಕೊಟ್ಟಿದ್ದಾರೆ.

2020 ರಿಂದ 2022 ರವರೆಗೆ ಭಾರತದ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಆಗಿದ್ದ ರಿಷಬ್ ಪಂತ್, ಹಲವು ಮರೆಯಲಾಗದ ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. 20 ತಿಂಗಳ ಬಳಿಕ ತಮ್ಮ ಮೊದಲ ಪ್ರಥಮ ದರ್ಜೆ ಪಂದ್ಯ ಆಡುತ್ತಿರುವ ಪಂತ್, ರೆಡ್ ಬಾಲ್ ಕ್ರಿಕೆಟ್‌ನಲ್ಲಿ ತಾನು ಫಾರ್ಮ್‌ನಲ್ಲಿದ್ದೇನೆ ಎಂದು ತೋರಿಸಿದ್ದಾರೆ. ಭಾರತ ಎ ಮತ್ತು ಭಾರತ ಬಿ ತಂಡಗಳ ನಡುವಿನ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಮಾಡಿದ್ದಾರೆ.

Rishabh Pant Signals Strong Test Cricket Comeback with Duleep Trophy Performance

ಇಂಡಿಯಾ ಬಿ ತಂಡದ ವಿಕೆಟ್ ಕೀಪರ್ ಆಗಿರುವ ರಿಷಬ್ ಪಂತ್, ಭಾರತ ಬಿ ತಂಡದ ಎರಡನೇ ಇನ್ನಿಂಗ್ಸ್‌ನಲ್ಲಿ 47 ಎಸೆತಗಳಲ್ಲಿ 9 ಬೌಂಡರಿ 2 ಸಿಕ್ಸರ್ ಸಹಿತ 61 ರನ್ ಗಳಿಸಿ ಮಿಂಚಿದರು. ಅವರ ಭರ್ಜರಿ ಅರ್ಧಶತಕದ ನೆರವಿನಿಂದ ಭಾರತ ಬಿ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ ಮೂರನೇ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 150 ರನ್ ಗಳಿಸಿದ್ದು, 240 ರನ್‌ಗಳ ಮುನ್ನಡೆ ಪಡೆದುಕೊಂಡಿದೆ.

ರಿಷಬ್ ಪಂತ್ ತಮ್ಮ ಕೊನೆಯ ಪ್ರಥಮ ದರ್ಜೆ ಪಂದ್ಯ (ಟೆಸ್ಟ್) ಡಿಸೆಂಬರ್ 2022 ರಲ್ಲಿ ಬಾಂಗ್ಲಾದೇಶದ ವಿರುದ್ಧ ಮೀರ್‌ಪುರದಲ್ಲಿ ಆಡಿದ್ದರು. ಅಂದಿನ ಪಂದ್ಯದಲ್ಲೂ ಅವರು 91 ರನ್ ಗಳಿಸಿದ್ದರು. ಅದಾಗಿ ಎರಡು ವರ್ಷಗಳ ಬಳಿಕ ಅವರು ಮತ್ತೆ ಪ್ರಥಮ ದರ್ಜೆ ಕ್ರಿಕೆಟ್‌ಗೆ ವಾಪಸಾರಿ ಮಾಡಿದ್ದಾರೆ.

ಖಲೀಲ್ ಅಹ್ಮದ್ ಮತ್ತು ಕುಲದೀಪ್ ಯಾದವ್ ಬೌಲಿಂಗ್‌ನಲ್ಲಿ ರಿಷಬ್ ಪಂತ್ ಆಕ್ರಮಣಕಾರಿ ಬ್ಯಾಟಿಂಗ್ ಮಾಡಿದರು. 15 ಎಸೆತಗಳಲ್ಲಿ 5 ಬೌಂಡರಿ ಒಳಗೊಂಡ 23 ರನ್‌ ಸಿಡಿಸಿದರು. ಕುಲದೀಪ್ ಯಾದವ್ ಬೌಲಿಂಗ್‌ನ 9 ಎಸೆತಗಳಲ್ಲಿ 20 ರನ್ ಗಳಿಸಿದರು.

ಸಂಪೂರ್ಣ ಫಿಟ್ ಆಗಿದ್ದಾರೆ ಪಂತ್

ರಿಷಬ್ ಪಂತ್ ಅವರು ಅಪಘಾತದಲ್ಲಿ ಚೇತರಿಸಿಕೊಂಡ ಬಳಿಕ ಅವರ ಫಿಟ್‌ನೆಸ್ ಬಗ್ಗೆ ಸಾಕಷ್ಟು ಪ್ರಶ್ನೆಗಳಿದ್ದವು. ಟಿ20 ಕ್ರಿಕೆಟ್‌ನಲ್ಲಿ ಅವರು ಕೀಪಿಂಗ್ ಮಾಡಿದ್ದರೂ, ಟೆಸ್ಟ್ ಕ್ರಿಕೆಟ್‌ನಲ್ಲಿ 90 ಓವರ್ ಗಳು ಅವರು ಕೀಪಿಂಗ್ ಮಾಡುತ್ತಾರಾ ಎನ್ನುವ ಅನುಮಾನ ಇತ್ತು, ಆದರೆ ದುಲೀಪ್ ಟ್ರೋಫಿಯಲ್ಲಿ ಎಲ್ಲಾ ಅನುಮಾನಗಳಿಗೆ ಅವರು ಉತ್ತರ ಕೊಟ್ಟಿದ್ದಾರೆ.

ಇನ್ನು ಸ್ಪಿನ್ ವಿರುದ್ಧ ಅವರು ಚನ್ನಾಗಿ ಆಡುವುದಿಲ್ಲ ಎನ್ನುವ ಆರೋಪ ಕೂಡ ಇತ್ತು. ಅದನ್ನೂ ಪಂತ್ ತಿದ್ದಿಕೊಂಡಿದ್ದಾರೆ. ಸೆಪ್ಟೆಂಬರ್ 19ರಂದು ಪ್ಲೇಯಿಂಗ್ XI vs ಬಾಂಗ್ಲಾದೇಶ ನಡುವಿನ ಅಭ್ಯಾಸ ಪಂದ್ಯದಲ್ಲಿ ಪಂತ್ ಆಡುವುದು ಬಹುತೇಕ ಖಚಿತವಾಗಿದೆ.

ಪಂತ್ ಸ್ಪಿನ್ ಸ್ನೇಹಿ ಚೆನ್ನೈ ಪಿಚ್‌ನಲ್ಲಿ ಶಕೀಬ್ ಅಲ್ ಹಸನ್, ತೈಜುಲ್ ಇಸ್ಲಾಂ ಮತ್ತು ಮೆಹಿದಿ ಹಸನ್ ಮಿರಾಜ್ ಅವರನ್ನು ಹೇಗೆ ಎದುರಿಸುತ್ತಾರೆ ಎನ್ನುವ ಕುತೂಹಲ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+