Rishabh Pant: ನ್ಯೂಜಿಲೆಂಡ್ ವಿರುದ್ಧದ ಸರಣಿಗೂ ಮುನ್ನ ಭಾರತಕ್ಕೆ ಆಘಾತ; ರಿಷಭ್ ಪಂತ್ ಔಟ್
Rishabh Pant: ನ್ಯೂಜಿಲೆಂಡ್ ವಿರುದ್ಧ ಮುಂಬರುವ ಟೆಸ್ಟ್ ಸರಣಿಗೂ ಮುನ್ನ ಭಾರತ ಕ್ರಿಕೆಟ್ ತಂಡಕ್ಕೆ ದೊಡ್ಡ ಆಘಾತ ಎದುರಾಗಿದೆ. ಟೀಮ್ ಇಂಡಿಯಾ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಪಂದ್ಯದಿಂದ ಹೊರಬಿದ್ದಿದ್ದಾರೆ. ಹಾಗಾದ್ರೆ ಯಾಕೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ನ್ಯೂಜಿಲೆಂಡ್ 'ಎ' ವಿರುದ್ಧ ನಡೆಯಲಿರುವ ಭಾರತ 'ಎ' ತಂಡದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಿಂದ ರಿಷಭ್ ಪಂತ್ ಹೊರಬಿದ್ದಿದ್ದಾರೆ. ಮುನ್ನೆಚ್ಚರಿಕೆಯ ಕ್ರಮವಾಗಿ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಇನ್ನೂ ವೆಲ್ಲಿಂಗ್ಟನ್‌ನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೂ ಅವರು ಲಭ್ಯವಿರುತ್ತಾರೋ ಇಲ್ಲವೋ ಎಂಬ ಅನುಮಾನ ಮೂಡಿದೆ.

ಇರಾನಿ ಕಪ್ ವೇಳೆ ರಿಷಭ್ ಪಂತ್‌ಗೆ ಗಾಯ
ಇರಾನಿ ಕಪ್ ಟೂರ್ನಿಯ ವೇಳೆ ಪಂತ್ ಪಕ್ಕೆಯ ಸ್ನಾಯು ಸೆಳೆತ ಸಮಸ್ಯೆಗೆ ಒಳಗಾಗಿದ್ದರು. ಇದರಿಂದಾಗಿ ಅವರು ನ್ಯೂಜಿಲೆಂಡ್ ಪ್ರವಾಸದಲ್ಲಿದ್ದ ಭಾರತ 'ಎ' ತಂಡದ ಮೊದಲ ಎರಡು ಪಂದ್ಯಗಳಿಂದಲೂ ಹೊರಗುಳಿಯಬೇಕಾಯಿತು. ನವೆಂಬರ್ 7ರಿಂದ ಆರಂಭವಾಗಲಿರುವ ಮೂರನೇ ಹಾಗೂ ಅಂತಿಮ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಪಂತ್ ಮರಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.
ಆದರೆ ಬಿಸಿಸಿಐ ಮೂಲಗಳ ಪ್ರಕಾರ, ರಿಷಭ್ ಪಂತ್ ತರಬೇತಿ ಮತ್ತು ಸ್ಕಿಲ್ ಪ್ರಾಕ್ಟೀಸ್ ಆರಂಭಿಸಿದ್ದು, ಪ್ರಸ್ತುತ ಯಾವುದೇ ಸಮಸ್ಯೆ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಮೂರನೇ ಟೆಸ್ಟ್‌ನಿಂದ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಅವರು ಯಾವಾಗ ಮರಳಲಿದ್ದಾರೆ ಎಂಬ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ.
ಮೊದಲ ಟೆಸ್ಟ್‌ನಲ್ಲಿ ಆಡುವುದು ಅನುಮಾನ
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಅಧಿಕೃತ ಟೆಸ್ಟ್ ಪಂದ್ಯವು ನವೆಂಬರ್ 19ರಿಂದ ವೆಲ್ಲಿಂಗ್ಟನ್‌ನಲ್ಲಿ ಆರಂಭವಾಗಲಿದೆ. ಪಂತ್ ಪ್ರಸ್ತುತ ಭಾರತ ತಂಡದ ಟೆಸ್ಟ್ ಮಾದರಿಯಲ್ಲಿ ಮಾತ್ರ ಪ್ರಮುಖ ಆಟಗಾರನಾಗಿದ್ದಾರೆ. ಏಕದಿನ ಹಾಗೂ ಟಿ20 ತಂಡಗಳಿಂದ ಹೊರಗುಳಿದಿದ್ದಾರೆ.
ಹೀಗಾಗಿ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಅಭ್ಯಾಸ ಪಂದ್ಯ ಆಡುವ ಉತ್ತಮ ಅವಕಾಶವನ್ನು ಅವರು ಕಳೆದುಕೊಂಡಿದ್ದಾರೆ. ಪ್ರಮುಖ ಪಂದ್ಯಾವಳಿ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ, ಅವರು ಪೂರ್ಣ ಫಿಟ್‌ನೆಸ್ ಸಾಧಿಸಿ ಮೊದಲ ಟೆಸ್ಟ್ ಆಡುತ್ತಾರೆಯೇ ಅಥವಾ ಇಲ್ಲವೇ ಎಂಬ ಕಳವಳ ಮ್ಯಾನೇಜ್‌ಮೆಂಟ್‌ನಲ್ಲಿ ವ್ಯಕ್ತವಾಗಿದೆ.


Click it and Unblock the Notifications
