IPL 2025: ₹27 ಕೋಟಿಗೆ ಲಕ್ನೋ ಸೂಪರ್ ಜೈಂಟ್ಸ್ ಪಾಲಾದ ರಿಷಬ್ ಪಂತ್
ಇಂಡಿಯನ್ ಪ್ರೀಮಿಯರ್ ಲೀಗ್ ( ಐಪಿಎಲ್) 2025ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ದಾಖಲೆ ಬರೆದಿದ್ದಾರೆ. ಬರೋಬ್ಬರಿ 27 ಕೋಟಿ ರೂಪಾಯಿಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದಾರೆ. ಈ ಮೂಲಕ ಐಪಿಎಲ್‌ನ ದುಬಾರಿ ಆಟಗಾರ ಎನ್ನುವ ದಾಖಲೆ ಮಾಡಿದ್ದಾರೆ.
ರಿಷಬ್ ಪಂತ್‌ಗಾಗಿ ಮೊದಲು ಲಕ್ನೋ ಸೂಪರ್ ಜೈಂಟ್ಸ್ ಬಿಡ್ ಮಾಡಿತು. ಬಳಿಕ ಆರ್ ಸಿಬಿ, ಎಸ್‌ಆರ್ ಎಚ್ ಫ್ರಾಂಚೈಸಿಗಳು ಬಿಡ್ ಮಾಡಿದವು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಎಲ್‌ಎಸ್‌ಜಿ ಜೊತೆ ಮೊದಲಿನಿಂದಲೇ ಜಿದ್ದಿಗೆ ಬಿದ್ದಂತೆ ಸ್ಪರ್ಧೆ ಮಾಡಿತು.

ಆರ್ ಸಿಬಿ ಬಳಿಕ ಸ್ಪರ್ಧೆಯಿಂದ ಹಿಂದೆ ಸರಿಯಿತು, ಸನ್‌ರೈಸರ್ಸ್ ಹೈದರಾಬಾದ್ ರೇಸ್‌ಗೆ ಬಂದಿತು, ಆದರೆ ಫ್ರಾಂಚೈಸಿ ಅವರನ್ನು ಬಿಟ್ಟುಕೊಡಲು ತಯಾರಿರಲಿಲ್ಲ, 20.75 ಕೋಟಿ ರೂಪಾಯಿಗೆ ಎಲ್‌ಎಸ್‌ಜಿ ಬಿಡ್ ಮಾಡಿತು. ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಆರ್ ಟಿಎಂ ಬಳಸುವುದಾಗಿ ಹೇಳಿತು, ಎಲ್‌ಎಸ್‌ಜಿ ಬಿಡ್ ಮೊತ್ತವನ್ನು 27 ಕೋಟಿ ರೂಪಾಯಿಗೆ ಏರಿಸಿದ್ದರಿಂದ ಡೆಲ್ಲಿ ಕ್ಯಾಪಿಟಲ್ಸ್ ಹಿಂದೆ ಸರಿಯಿತು. ಅಂತಿಮವಾಗಿ ಪಂತ್ ಲಕ್ನೋ ಪಾಲಾದರು.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕರಾಗಿದ್ದ ರಿಷಬ್ ಪಂತ್, ಕಾರಣಾಂತರದಿಂದ ಐಪಿಎಲ್ ಮೆಗಾ ಹರಾಜಿಗೆ ಮುನ್ನ ತಂಡದಿಂದ ಹೊರಬಂದಿದ್ದಾರೆ. ಐಪಿಎಲ್ ರಿಟೆನ್ಷನ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅವರನ್ನು ಬಿಡುಗಡೆ ಮಾಡಿತು. ತಾವು ತಂಡದಿಂದ ಹೊರಬಂದಿದ್ದು ಹಣದ ವಿಚಾರಕ್ಕಾಗಿ ಅಲ್ಲ ಎನ್ನುವುದನ್ನು ರಿಷಬ್ ಪಂತ್ ಸ್ಪಷ್ಟಪಡಿಸಿದ್ದರು.
ರಿಷಬ್ ಪಂತ್ 2018ರಿಂದ 2024ರವರೆಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕಾಗಿ ಆಡಿದ್ದಾರೆ. 2018ರಲ್ಲಿ ಬರೋಬ್ಬರಿ 15 ಕೋಟಿ ರೂಪಾಯಿಗೆ ಹರಾಜಾಗಿದ್ದ ಅವರು, 2022ರಿಂದ 16 ಕೋಟಿ ರೂಪಾಯಿ ಪಡೆಯುತ್ತಿದ್ದರು. ಕಳೆದ ಮೂರು ವರ್ಷದಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಾರಿದ್ದ ಅವರು, ಬಳಿಕ ತಂಡದಿಂದ ಹೊರಬಂದಿದ್ದಾರೆ.
ರಿಷಬ್ ಪಂತ್ ಐಪಿಎಲ್ ಅಂಕಿ ಅಂಶ
ರಿಷಬ್ ಪಂತ್ 111 ಐಪಿಎಲ್ ಪಂದ್ಯಗಳನ್ನು ಆಡಿದ್ದು 3284 ರನ್ ಗಳಿಸಿದ್ದಾರೆ. 35.3 ಸರಾಸರಿ ಹೊಂದಿದ್ದು 148.9 ಸ್ಟ್ರೈಕ್ ರೇಟ್ ಹೊಂದಿದ್ದಾರೆ. 18 ಅರ್ಧಶತಕ ಮತ್ತು 1 ಶತಕ ಗಳಿಸಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ












Click it and Unblock the Notifications