Robin Uthappa: ರಾಬಿನ್ ಉತ್ತಪ್ಪ ಸಂಕಷ್ಟದಿಂದ ಪಾರು, ಏನಿದು ಪ್ರಕರಣ ?
ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ಸಂಕಷ್ಟವೊಂದರಿಂದ ಪಾರಾಗಿದ್ದಾರೆ. ರಾಬಿನ್ ಉತ್ತಪ್ಪ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿತ್ತು. ಇನ್ನು ಈ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಅರೆಸ್ಟ್ ವಾರೆಂಟ್ ಸಹ ಜಾರಿ ಮಾಡಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಅವರು ಸಹ ಪಾಲುದಾರರಾಗಿರುವ ಪ್ರಮುಖ ಕಂಪನಿಯೊಂದರಲ್ಲಿ ಉದ್ಯೋಗಿಗಳ ಪಿಎಫ್ ಹಣದಲ್ಲಿ ವಂಚನೆ ಮಾಡಿರುವ ಆರೋಪ ಕೇಳಿ ಬಂದಿತ್ತು. ಇದೀಗ ಈ ಪ್ರಕರಣದಲ್ಲಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಏನಿದು ಪ್ರಕರಣ ಎನ್ನುವ ಮಾಹಿತಿ ಇಲ್ಲಿದೆ.
ಮಾಜಿ ಕ್ರಿಕೆಟಿಗ ಹಾಗೂ ನಿರೂಪಕ ರಾಬಿನ್ ಉತ್ತಪ್ಪ ಅವರ ಮೇಲೆ ಗಂಭೀರ ಆರೋಪ ಕೇಳಿ ಬಂದಿತ್ತು. ಅಲ್ಲದೆ ಅವರು ಯಾವುದೇ ಸಮಯದಲ್ಲಾದರೂ ಅರೆಸ್ಟ್ ಆಗಬಹುದು ಎನ್ನುವ ಆತಂಕವೂ ಎದುರಾಗಿತ್ತು. ಇದೀಗ ಈ ಕೇಸ್‌ನಲ್ಲಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಕರ್ನಾಟಕ ಹೈಕೋರ್ಟ್ನಿಂದ ಬಿಗ್ ರಿಲೀಫ್ ನೀಡಲಾಗಿದೆ. ಪಿಎಫ್ ವಂಚನೆ ಆರೋಪ ಪ್ರರಕಣದಲ್ಲಿ ಅವರು ಬಂಧನಕ್ಕೆ ಒಳಗಾಗಲಿದ್ದಾರೆ ಎನ್ನುವ ಆತಂಕ ಎದುರಾಗಿತ್ತು. ಈ ನಡುವೆ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.

ಬಂಧನ ಭೀತಿಯಿಂದ ಪಾರಾದ ರಾಬಿನ್ ಉತ್ತಪ್ಪ
ರಾಬಿನ್ ಉತ್ತಪ್ಪ ಅವರು ಬಂಧನ ಭೀತಿಯಿಂದ ಪಾರಾಗಿದ್ದಾರೆ. ಅವರ ವಿರುದ್ಧ ಬೆಂಗಳೂರಿನ ಪುಲಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಪಿಎಫ್ (ಉದ್ಯೋಗಿಗಳ ಭವಿಷ್ಯ ನಿಧಿ) ಪ್ರಾದೇಶಿಕ ಆಯುಕ್ತರಾದ ಷಡಕ್ಷರಿ ಗೋಪಾಲ್ ರೆಡ್ಡಿ ಅವರು ಉತ್ತಪ್ಪ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದರು. ಅಲ್ಲದೆ ಬೆಂಗಳೂರಿನಲ್ಲಿ ಉತ್ತಪ್ಪ ವಿರುದ್ಧ ಕೇಸ್ ಸಹ ದಾಖಲಾಗಿತ್ತು. ಇದೀಗ ಉತ್ತಪ್ಪ ವಿರುದ್ಧ ಹೊರಡಿಸಲಾಗಿದ್ದ ಅರೆಸ್ಟ್ ವಾರೆಂಟ್ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿರುವುದು ವರದಿಯಾಗಿದೆ.
ಪ್ರಕರಣದ ಹಿನ್ನೆಲೆ ಏನು: ರಾಬಿನ್ ಉತ್ತಪ್ಪ ಅವರು ವಿವಾದಗಳಲ್ಲಿ ಸಿಲುಕಿದ್ದು ತೀರ ವಿರಳ. ಜಂಟಲ್ ಮ್ಯಾನ್ ಅಂತಲೇ ಫೇಮಸ್ ಆಗಿರುವ ಅವರ ವಿರುದ್ಧ ಇದೀಗ ಗಂಭೀರ ಆರೋಪವೊಂದು ಕೇಳಿಬಂದಿತ್ತು. ಮಾಜಿ ಕ್ರಿಕೆಟಿಗನ ಮೇಲೆ ಕೇಳಿ ಬಂದ ಆರೋಪದಿಂದ ಅವರ ಅಭಿಮಾನಿಗಳಿಗೂ ಶಾಕ್ ಆಗಿತ್ತು. ಸೆಂಚುರಿಸ್ ಲೈಫ್ ಸ್ಟೈಲ್ ಬ್ರಾಂಡ್ ಪ್ರೈ. ಲಿ ಎನ್ನುವ ಕಂಪನಿಯನ್ನು ಕ್ರಿಕೆಟಿಗ ರಾಬಿನ್ ಉತ್ತಪ್ಪ ಅವರು ನಡೆಸುತ್ತಿದ್ದರು ಎನ್ನಲಾಗಿದೆ. ಅವರು ಈ ಕಂಪನಿಯನ್ನು ಪಾಲುದಾರಿಕೆಯಲ್ಲಿ ನಡೆಸುತ್ತಿದ್ದರು ಎಂದು ಹೇಳಲಾಗಿದೆ.
ಆದರೆ, ಈ ಕಂಪನಿಯಲ್ಲಿ ಕೆಲಸ ಮಾಡುವ ಉದ್ಯೋಗಿಗಳ ಪಿಎಫ್ ಮೊತ್ತ ಜಮೆ ಮಾಡುವುದರಲ್ಲಿ ಲೋಪವಾಗುತ್ತಿತ್ತು ಎಂದು ಹೇಳಲಾಗಿದೆ. ಸಂಬಳದಿಂದ ಪಿಎಫ್ ಹಣವನ್ನು ಪ್ರತಿ ತಿಂಗಳು ಕಟ್‌ಮಾಡಿಕೊಂಡರೂ ಉದ್ಯೋಗಿಗಳ ಖಾತೆಗೆ ಜಮೆ ಮಾಡಿರಲಿಲ್ಲ ಎನ್ನುವ ಆರೋಪ ಕೇಳಿ ಬಂದಿತ್ತು. ಅಲ್ಲದೆ ಈ ರೀತಿ ಬರೋಬ್ಬರಿ 23 ಲಕ್ಷ ರೂ. ಹಣ ವಂಚನೆ ಮಾಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿತ್ತು.
ಈ ವಿಷಯದ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ರಾಬಿನ್ ಉತ್ತಪ್ಪ ಅವರು, ಕಂಪನಿಗಳಲ್ಲಿ ಉದ್ಯೋಗಿಗಳ ಬಾಕಿ ಪಿಎಫ್ ಹಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಅಧಿಕಾರಿಗಳು ನೀಡಿದ್ದ ನೋಟಿಸ್‌ಗಳಿಗೆ ನನ್ನ ಕಾನೂನು ಸಲಹೆಗಾರರು ಪ್ರತಿಕ್ರಿಯಿಸಿದೆ. ಇನ್ನು ಈ ವಿಷಯದಲ್ಲಿ ನನ್ನ ಪಾತ್ರ ಏನೂ ಇಲ್ಲ ಎನ್ನುವುದನ್ನು ದೃಢೀಕರಿಸುವುದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿದ್ದೇನೆ ಎಂದಿದ್ದಾರೆ.












Click it and Unblock the Notifications