Rohit Sharma: ಗಂಡು ಮಗುವಿನ ಅಪ್ಪನಾದ ರೋಹಿತ್ ಶರ್ಮಾ

ಭಾರತ ಏಕದಿನ ಮತ್ತು ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ತಂದೆಯಾದ ಖುಷಿಯಲ್ಲಿದ್ದಾರೆ. ರೋಹಿತ್ ಶರ್ಮಾ ಗಂಡು ಮಗುವಿನ ತಂದೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ. ರೋಹಿತ್ ಶರ್ಮಾ, ರಿತಿಕಾ ದಂಪತಿಗೆ ಗಂಡು ಮಗು ಜನಿಸಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ರೋಹಿತ್ ಶರ್ಮಾ ಇನ್ನೂ ಅಧಿಕೃತಗೊಳಿಸಿಲ್ಲ. ಈಗಾಗಲೇ ರೋಹಿತ್ ಶರ್ಮಾ ಅಭಿಮಾನಿಗಳು ಜ್ಯೂನಿಯರ್ ಹಿಟ್ ಮ್ಯಾನ್ ಆಗಮನ ಎಂದು ಎಕ್ಸ್‌ನಲ್ಲಿ ರೋಹಿತ್ ಶರ್ಮಾಗೆ ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

ರಿತಿಕಾ ಮತ್ತು ರೋಹಿತ್ ಶರ್ಮಾ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಈ ಮೊದಲೇ ವರದಿಯಾಗಿತ್ತು, ಇದೇ ಕಾರಣದಿಂದ ರೋಹಿತ್ ಶರ್ಮಾ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಪಂದ್ಯವನ್ನು ತಪ್ಪಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿತ್ತು. ಭಾರತ ತಂಡ ಈಗಾಗಲೇ ಆಸ್ಟ್ರೇಲಿಯಾದಲ್ಲಿ ಅಭ್ಯಾಸ ಮಾಡುತ್ತಿದ್ದು ಈ ತಂಡದ ಜೊತೆ ನಾಯಕ ರೋಹಿತ್ ಶರ್ಮಾ ಹೋಗಿರಲಿಲ್ಲ.

Rohit Sharma And Ritika Sajdeh Blessed With Baby Boy

ಪತ್ನಿ ಮತ್ತು ಮಗುವಿನ ಜೊತೆ ಕಾಲ ಕಳೆಯಲು ಅವರು ಭಾರತದಲ್ಲೇ ಉಳಿದುಕೊಂಡಿದ್ದರು. ಇಂದು ರಿತಿಕಾ ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ರೋಹಿತ್ ಶರ್ಮಾ ಮತ್ತು ರಿತಿಕಾ ದಂಪತಿಗೆ ಈಗಾಗಲೆ ಒಂದು ಹೆಣ್ಣು ಮಗುವಿದ್ದು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದರು.

ಶುಭಾಶಯಗಳ ಮಹಾಪೂರ

ರೋಹಿತ್ ಶರ್ಮಾ ಗಂಡುಮಗುವಿನ ತಂದೆಯಾಗುತ್ತಿದ್ದಾರೆ ಎನ್ನುವ ವಿಚಾರ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ, ನಾಯಕ ರೋಹಿತ್ ಶರ್ಮಾಗೆ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಅಭಿಮಾನಿಗಳು ನೆಚ್ಚಿನ ಕ್ರಿಕೆಟಿಗನಿಗೆ ಶುಭಾಶಯ ತಿಳಿಸುತ್ತಿದ್ದಾರೆ. ಇನ್ನೂ ಕೆಲವು ಈಗಲೇ ಜ್ಯೂನಿಯರ್ ಹಿಟ್‌ ಮ್ಯಾನ್‌ ಆಗಮನ ಎಂದು ಪೋಸ್ಟ್ ಹಾಕಿದ್ದಾರೆ.

ನವೆಂಬರ್ 22 ರಿಂದ ಆಸ್ಟ್ರೇಲಿಯಾ ವಿರುದ್ದದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಟೆಸ್ಟ್ ಆರಂಭವಾಗಲಿದ್ದು, ಮೊದಲ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಹೊರಗುಳಿಯುವುದು ಬಹುತೇಕ ಖಚಿತವಾಗಿದೆ. ಮೊದಲ ಟೆಸ್ಟ್‌ನಲ್ಲಿ ಭಾರತ ತಂಡಕ್ಕೆ ಜಸ್ಪ್ರೀತ್ ಬುಮ್ರಾ ನಾಯಕತ್ವ ವಹಿಸಲಿದ್ದಾರೆ. ಎರಡನೇ ಟೆಸ್ಟ್‌ಗೆ ಮುನ್ನವೇ ರೋಹಿತ್ ಶರ್ಮಾ ಭಾರತ ತಂಡವನ್ನು ಸೇರಿಕೊಳ್ಳಲಿದ್ದು, ಎರಡನೇ ಟೆಸ್ಟ್‌ನಿಂದ ತಂಡವನ್ನು ಮುನ್ನಡೆಸಲಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಸರಣಿ ಸೋತ ಬಳಿಕ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪ್ರವೇಶಿಸಲು ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ಗೆಲ್ಲಲೇಬೇಕಾಗಿದೆ. ಈಗಾಗಲೇ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಅಭ್ಯಾಸ ಆರಂಭಿಸಿದ್ದು, ಮೊದಲ ಟೆಸ್ಟ್‌ಗೆ ಸಜ್ಜಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+