Rohit Sharma: ಭಾರತ ಕ್ರಿಕೆಟ್ ತಂಡದ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ; ಮುಂದಿನ ನಾಯಕ ಯಾರು?
Rohit Sharma Retirement: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಈಗಾಗಲೇ ಅಂತಾರಾಷ್ಟ್ರೀಯ ಟಿ-20 ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದರು. ಇದೀಗ ಇಂದು (ಮೇ 7) ಟೆಸ್ಟ್ ಮಾದರಿಗೂ ವಿದಾಯ ಹೇಳಿದ್ದಾರೆ.
ಇದೀಗ ಮುಂಬೈ ತಂಡದ ಪರ ಐಪಿಎಲ್ ಆಡುತ್ತಿರುವಾಗಲೇ 38 ವರ್ಷದ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ರೋಹಿತ್ ಶರ್ಮಾ ಅವರು ತಮ್ಮ ಟ್ವಿಟರ್ ಖಾಯೆಯಲ್ಲಿ ಬರೆದುಕೊಂಡಿದ್ದಾರೆ. ಈಗಾಗಲೇ ಟಿ-20 ಕ್ರಿಕೆಟ್‌ಗೆ ನೀವೃತ್ತಿ ಘೋಷಿಸಿದ್ದು, 50 ಓವರ್‌ಗಳ ಕ್ರಿಕೆಟ್‌ನಲ್ಲಿ ಮಾತ್ರ ಆಡಲಿದ್ದಾರೆ.

ಟೆಸ್ಟ್‌ನಲ್ಲಿ ರೋಹಿತ್ ಶರ್ಮಾ ಸಾಧನೆ: 67 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ ಅವರು, 18 ಅರ್ಧ ಶತಕ, 12 ಶತಕಗಳನ್ನು ಸಿಡಿಸಿದ್ದಾರೆ. ಒಟ್ಟು 4,301 ರನ್‌ಗಳನ್ನು ಕಲೆಹಾಕಿದ್ದಾರೆ. ಚಾಂಪಿಯನ್ ಟ್ರೋಫಿ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ-20 ಕ್ರಕಿಕೆಟ್‌ಗೆ ವಿದಾಯ ಹೇಳಿದ್ದರು. ಇದೀಗ ಟೆಸ್ಟ್‌ಗೂ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಇದೀಗ ಟೆಸ್ಟ್ ಕ್ರಿಕೆಟ್‌ಗೆ ರೋಹಿತ್ ನಿವೃತ್ತಿ ಬಳಿಕ ಟೀಂ ಇಂಡಿಯಾದ ನಾಯಕ ಯಾರಾಗಲಿದ್ದಾರೆ ಎಂಬ ಚರ್ಚೆಗಳು ಜೋರಾಗಿ ನಡೆಯುತ್ತಿವೆ. ಈ ಸರದಿಯಲ್ಲಿ ಬೂಮ್ರಾ, ಕೆ.ಎಲ್. ರಾಹುಲ್, ಶುಭ್‌ಮನ್ ಗಿಲ್ ಮತ್ತು ರಿಷಬ್ ಪಂತ್ ಹೆಸರುಗಳು ಮುನ್ನಲೆಯಲ್ಲಿವೆ.
ಬಿಸಿಸಿಐ ರೋಹಿತ್ ಶರ್ಮಾ ಅವರನ್ನು ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಸಲು ನಿರ್ಧರಿಸಿದೆ ಎನ್ನುವ ಸುಳಿವು ಸಿಕ್ಕ ಬೆನ್ನೆಲ್ಲೆ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿ ಅಚ್ಚರಿ ಮೂಡಿಸಿದ್ದಾರೆ. ಅಲ್ಲದೆ, ಐಪಿಎಲ್ ನಡೆಯುವಾಗಲೇ ಹೀಗೆ ದಿಢೀರ್ ಈ ನಿರ್ಧಾರ ತೆಗೆದುಕೊಂಡಿರುವುದು ಅಭಿಮಾನಿಗಳಿಗೆ ಶಾಕ್ ಆಗಿದೆ.
ಇನ್ನು ಮುಂದಿನ ತಿಂಗಳು ಅದರೆ ಜೂನ್‌ನಲ್ಲಿ ಪ್ರಾರಂಭ ಆಗಲಿರುವ ಇಂಗ್ಲೆಂಡ್ ವಿರುದ್ಧದ ಮುಂಬರುವ 5 ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತಂಡ ಹೊಸ ನಾಯಕ ಯಾರಾಗಲಿದ್ದಾರೆ ಎನ್ನುವ ಚರ್ಚೆಗಳು ನಡೆಯುತ್ತಿವೆ. ಈ ನಡುವೆಯೇ ಜಸ್ಪ್ರಿತ್ ಬುಮ್ರಾ, ಕೆ.ಎಲ್. ರಾಹುಲ್, ಶುಭಮನ್ ಗಿಲ್ ಹಾಗೂ ರಿಷಭ್ ಪಂತ್ ಹೆಸರುಗಳು ಜೋರಾಗಿ ಕೇಳಿಬರುತ್ತಿವೆ. ಈ ಪೈಕಿ ಶುಭ್‌ಮನ್ ಗಿಲ್ ಹೇಸರು ಮುಂಚೂಣಿಯಲಿದ್ದು, ಅವರೇ ಟೆಸ್ಟ್ ಕ್ರಿಕೆಟ್‌ಗೆ ನಾಯಕರಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications