Rohit Sharma: ಫೈನಲ್ ಪಂದ್ಯದಲ್ಲಿ ಅಬ್ಬರಿಸಿದ 'ಹಿಟ್ ಮ್ಯಾನ್' ರೋಹಿತ್ ಶರ್ಮಾ!
ಏಕದಿನ ವಿಶ್ವಕಪ್ ಬಳಿಕ ಅದೇ ರೀತಿಯ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದ ರೋಹಿತ್ ಶರ್ಮಾ ಮಹತ್ವದ ಪಂದ್ಯದಲ್ಲಿ ಅಬ್ಬರಿಸಿದ್ದಾರೆ. ದುಬೈನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಮಾಡುತ್ತಿರುವ ರೋಹಿತ್ ಶರ್ಮಾ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಭಾರತಕ್ಕೆ ಸುಲಭ ಗೆಲುವಿನ ಭರವಸೆ ಮೂಡಿಸಿದ್ದಾರೆ.
ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 50 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 251 ರನ್ ಗಳಿಸಿತು. 252 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ಭಾರತಕ್ಕೆ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಅಮೋಘ ಆರಂಭ ಒದಗಿಸಿದೆ. ಈ ಜೋಡಿ 17 ಓವರ್ ಗಳಲ್ಲಿ ಅಜೇಯವಾಗಿ 100 ರನ್ ಗಳಿಸಿದ್ದಾರೆ.

17 ಓವರ್ ಮುಕ್ತಾಯದ ವೇಳೆಗೆ ನಾಯಕ ರೋಹಿತ್ ಶರ್ಮಾ 60 ಎಸೆತಗಳಲ್ಲಿ 7 ಬೌಂಡರಿ 3 ಭರ್ಜರಿ ಸಿಕ್ಸರ್ ಸಹಿತ ಅಜೇಯ 68 ರನ್ ಗಳಿಸಿದ್ದಾರೆ. ಶುಭಮನ್ ಗಿಲ್ ಕೂಡ ಮತ್ತೊಂದು ಕಡೆಯಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಮಾಡುತ್ತಿದ್ದು 43 ಎಸೆತಗಳಲ್ಲಿ 27 ರನ್ ಗಳಿಸಿದ್ದಾರೆ.
ರೋಹಿತ್ ಶರ್ಮಾ ಬ್ಯಾಟಿಂಗ್‌ಗೆ ಮೆಚ್ಚುಗೆ
ಇಡೀ ಪಂದ್ಯಾವಳಿಯಲ್ಲಿ ಸ್ಪೋಟಕ ಆರಂಭ ಪಡೆಯುತ್ತಿದ್ದರೂ ಬೇಗನೆ ಔಟಾಗುವ ಮೂಲಕ ರೋಹಿತ್ ಶರ್ಮಾ ನಿರಾಸೆ ಮೂಡಿಸುತ್ತಿದ್ದರು. ಆದರೆ ಫೈನಲ್ ಪಂದ್ಯದಲ್ಲಿ ಬೌಂಡರಿ, ಸಿಕ್ಸರ್ ಗಳಿಸಿದರೂ ಎಚ್ಚರಿಕೆಯಿಂದ ಬ್ಯಾಟಿಂಗ್ ಮಾಡುವ ಮೂಲಕ ವಿಕೆಟ್ ಕಾಪಾಡಿಕೊಂಡರು. ಭಾರತ ಈಗ ಅತ್ಯುತ್ತಮ ಆರಂಭ ಪಡೆದಿದ್ದು ಚಾಂಪಿಯನ್ಸ್ ಟ್ರೋಫಿ ಗೆಲ್ಲುವ ಕನಸು ಈಗ ನನಸಾಗುವ ಸಾಧ್ಯತೆ ಹೆಚ್ಚಾಗಿದೆ.












Click it and Unblock the Notifications