Rohit Sharma: ಕಣ್ಣೀರು ಹಾಕಿದ್ರಾ ರೋಹಿತ್ ಶರ್ಮಾ? ವೈರಲ್ ಆಗುತ್ತಿದೆ ಫೋಟೊ!
ರೋಹಿತ್ ಶರ್ಮಾ ಐಪಿಎಲ್ 2024ರ ಬಳಿಕ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಲು ಸಜ್ಜಾಗಿದ್ದಾರೆ. ಏಕದಿನ ವಿಶ್ವಕಪ್‌ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಅಮೋಘ ಪ್ರದರ್ಶನ ನೀಡಿತ್ತು, ಅಜೇಯವಾಗಿ ಫೈನಲ್ ಪ್ರವೇಶಿಸಿದ್ದ ಭಾರತ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಎಡವಿತ್ತು.
ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದ ಅವರನ್ನು ಕೆಳಗಿಳಿಸಲಾಯಿತು. ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸಿಕೊಂಡರು, ಪಾಂಡ್ಯ ನಾಯಕತ್ವದಲ್ಲಿ ಮುಂಬೈ ಇಂಡಿಯನ್ಸ್ ಕಳಪೆ ಪ್ರದರ್ಶನ ನೀಡಿದ್ದು, ಈಗಾಗಲೇ ಟೂರ್ನಿಯಿಂದ ಹೊರ ಬಿದ್ದಿದೆ.

ರೋಹಿತ್ ಶರ್ಮಾ ಅವರಿಗೆ ತಂಡದಲ್ಲಿ ಸರಿಯಾದ ಗೌರವ ಸಿಗುತ್ತಿಲ್ಲ ಎನ್ನುವ ದೂರು ಅಭಿಮಾನಿಗಳಿಂದ ಇದೆ. ಮಾಜಿ ಕ್ರಿಕೆಟಿಗರು ಕೂಡ ಮುಂಬೈ ಇಂಡಿಯನ್ಸ್ ತಂಡದಲ್ಲಿ ಎಲ್ಲವೂ ಸರಿಯಿಲ್ಲ ಎಂದು ಬಹಿರಂಗವಾಗಿಯೇ ಹೇಳಿದ್ದಾರೆ.
ರೋಹಿತ್ ಶರ್ಮಾ ಕಣ್ಣೀರು?
ಗಾಯದ ಮೇಲೆ ಉಪ್ಪು ಸವರಿದಂತೆ ರೋಹಿತ್ ಶರ್ಮಾ ಅವರ ಬ್ಯಾಟ್‌ನಿಂದ ಕೂಡ ರನ್ ಬರುತ್ತಿಲ್ಲ. ಸತತವಾಗಿ ಅವರು ರನ್ ಗಳಿಸುವಲ್ಲಿ ವಿಫಲವಾಗುತ್ತಿರುವುದು ಮುಂಬೈ ಇಂಡಿಯನ್ಸ್ ಮಾತ್ರವೇ ಅಲ್ಲ ಭಾರತ ತಂಡದ ಅಭಿಮಾನಿಗಳಲ್ಲೂ ಆತಂಕ ಮೂಡಿಸಿದೆ.
ರೋಹಿತ್ ಅಬ್ಬರಿಸಿದರೆ ಎಂತಹ ಬೌಲರ್ ಕೂಡ ಅಸಹಾಯಕರಾಗುತ್ತಾರೆ. ಭಾರತ ಟಿ20 ವಿಶ್ವಕಪ್ ಗೆಲ್ಲಬೇಕೆಂದರೆ ಅವರು ರನ್ ಗಳಿಸುವುದು ಮುಖ್ಯವಾಗುತ್ತದೆ. ಸದ್ಯ ಅವರು ಫಾರ್ಮ್‌ನಲ್ಲಿ ಇಲ್ಲದೇ ಇರುವುದು ಚಿಂತೆಗೆ ಕಾರಣವಾಗಿದೆ.
ತಂಡದ ಸತತ ಸೋಲು, ತಮ್ಮ ಕಳಪೆ ಫಾರ್ಮ್‌ನಿಂದ ರೋಹಿತ್ ಶರ್ಮಾ ಬೇಸರಗೊಂಡಿದ್ದಾರೆ ಎನ್ನುವುದು ಸ್ಪಷ್ಟ, ಸೋಮವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದದ ಪಂದ್ಯದಲ್ಲಿ ಕೂಡ ರೋಹಿತ್ ಶರ್ಮಾ ಕೇವಲ 4 ರನ್ ಗಳಿಸಿ ಔಟಾದರು. ಕಳೆದ ಐದು ಪಂದ್ಯಗಳಲ್ಲಿ 6, 8, 4, 11 ಮತ್ತು 4 ರನ್ ಗಳಿಸಿದ್ದಾರೆ.
ಇದೆಲ್ಲದರಿಂದ ರೋಹಿತ್ ಹತಾಶೆಯಿಂದ ಕಣ್ಣೀರು ಹಾಕಿದ್ದಾರ ಎನ್ನುವ ಅನುಮಾನ ವ್ಯಕ್ತವಾಗಿದೆ. ವೈರಲ್ ಆಗಿರುವ ಫೋಟೊದಲ್ಲಿ ರೋಹಿತ್ ಹತಾಶೆಯಿಂದ ಕೂತಿರುವುದನ್ನು ಸ್ಪಷ್ಟವಾಗಿ ನೋಡಬಹುದು. ಇದನ್ನು ಕಂಡ ರೋಹಿತ್ ಅಭಿಮಾನಿಗಳು ಸಖತ್ ಬೇಜಾರಾಗಿದ್ದಾರೆ. ಆದಷ್ಟು ಬೇಗ ರೋಹಿತ್ ಫಾರ್ಮ್‌ಗೆ ಮರಳಲಿ, ಭಾರತಕ್ಕೆ ಟಿ20 ವಿಶ್ವಕಪ್ ಗೆದ್ದುಕೊಡಲಿ ಎಂದು ಹಾರೈಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications