Champions Trophy: ರೋಹಿತ್, ಕೊಹ್ಲಿ, ಬುಮ್ರಾಗೆ ಒಂದು ತಿಂಗಳು ವಿಶ್ರಾಂತಿ

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲವಾಗಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಫಾರ್ಮ್ ತಂಡದ ಚಿಂತೆಯನ್ನು ಹೆಚ್ಚಿಸಿದೆ. ಸಿಡ್ನಿ ಟೆಸ್ಟ್ ಬಳಿಕ ಇಬ್ಬರೂ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳುವ ಸಾಧ್ಯತೆ ಇದೆ ಎಂದು ಕೂಡ ಹೇಳಲಾಗಿದೆ. 2025ರ ಫೆಬ್ರವರಿ- ಮಾರ್ಚ್‌ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಭಾರತಕ್ಕೆ ಮುಖ್ಯವಾಗಿದೆ.

2024ರಲ್ಲಿ ನಡೆದ ಟಿ20 ವಿಶ್ವಕಪ್ ಗೆದ್ದಿರುವ ಭಾರತ ಈಗ ಐಸಿಸಿ ಚಾಂಪಿಯನ್ಸ್ ಟ್ರೋಫಿ ಮೇಲೆ ಕಣ್ಣಿಟ್ಟಿದೆ. ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಮುನ್ನ ಭಾರತ ಇಂಗ್ಲೆಂಡ್ ವಿರುದ್ಧ ಟಿ20 ಮತ್ತು ಏಕದಿನ ಸರಣಿ ಆಡಲಿದೆ. ಏಕದಿನ ಸರಣಿಗಾಗಿ ಭಾರತ ಮೂವರು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

rohit sharma kohli bumrah skip india england odi series

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಬಳಿಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಒಂದು ತಿಂಗಳು ವಿಶ್ರಾಂತಿ ಪಡೆಯಲಿದ್ದಾರೆ. ಫೆಬ್ರವರಿ 20ರಂದು ಭಾರತ ಬಾಂಗ್ಲಾದೇಶ ವಿರುದ್ಧದ ಪಂದ್ಯದ ಮೂಲಕ ಪಂದ್ಯಾವಳಿಯನ್ನು ಆರಂಭಿಸಲಿದೆ. ಜನವರಿ 3ರಿಂದ ಸಿಡ್ನಿ ಟೆಸ್ಟ್ ಆರಂಭವಾಗಲಿದ್ದು ಜನವರಿ 8ರವರೆಗೆ ನಡೆಯಲಿದೆ. ಈ ಪಂದ್ಯದ ಬಳಿಕ ಮೂವರು ಹಿರಿಯ ಆಟಗಾರರು ವಿಶ್ರಾಂತಿ ಪಡೆಯಲಿದ್ದಾರೆ.

ಬುಮ್ರಾ ಮೇಲೆ ಹೆಚ್ಚಿದ ಒತ್ತಡ

ಆಸ್ಟ್ರೇಲಿಯಾ ವಿರುದ್ದದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತದ ಪರವಾಗಿ ಸ್ಥಿರ ಪ್ರದರ್ಶನ ನೀಡುತ್ತಿರುವುದು ಬುಮ್ರಾ ಮಾತ್ರ 4 ಪಂದ್ಯಗಳಲ್ಲಿ 30 ವಿಕೆಟ್ ಪಡೆದಿದ್ದು ಏಕಾಂಗಿ ಹೋರಾಟ ನೀಡಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಸರಣಿಯಲ್ಲಿ ಬುಮ್ರಾ ಭಾರತ ತಂಡಕ್ಕೆ ಅತ್ಯಗತ್ಯವಾಗಿದ್ದಾರೆ. ಈಗಾಗಲೇ ಅವರ ಮೇಲೆ ಒತ್ತಡ ಹೆಚ್ಚಾಗಿದ್ದು, ಅವರಿಗೆ ವಿಶ್ರಾಂತಿ ಅಗತ್ಯವಿದೆ. ಈ ಕಾರಣಕ್ಕೆ ಅವರು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯನ್ನು ಆಡದೆ, ನೇರವಾಗಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಲಿದ್ದಾರೆ.

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ

ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡುವ ಸಾಧ್ಯತೆ ಕಡಿಮೆ ಇದೆ. ಆದರೆ ಇಬ್ಬರು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಆಡಬೇಕಿದೆ. ಇಬ್ಬರ ಲಭ್ಯತೆ ಬಗ್ಗೆ ಬಿಸಿಸಿಐ ಆಯ್ಕೆದಾರರು ಅವರ ಜೊತೆ ಚರ್ಚಿಸಲಿದ್ದಾರೆ. ಬುಮ್ರಾ ರೀತಿ ಕೆಲಸದ ಹೊರೆ ಇಲ್ಲದ ಕಾರಣ ಇಂಗ್ಲೆಂಡ್ ವಿರುದ್ಧದ ಸರಣಿಗೆ ಅವರು ಆಡಬಹುದು.

ಇಬ್ಬರೂ ಕೂಡ ಬ್ಯಾಟಿಂಗ್‌ನಲ್ಲಿ ಸತತವಾಗಿ ವೈಫಲ್ಯ ಅನುಭವಿಸುತ್ತಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡಿ, ಇಬ್ಬರೂ ಫಾರ್ಮ್‌ಗೆ ಮರಳಿದರೆ ಟೀಂ ಇಂಡಿಯಾಗೆ ಮತ್ತಷ್ಟು ಬಲ ಬರಲಿದೆ.

ಚಾಂಪಿಯನ್ಸ್ ಟ್ರೋಫಿಗೆ ಭಾರತದ ಸಂಭಾವ್ಯ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ನಿತೀಶ್ ಕುಮಾರ್ ರೆಡ್ಡಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ (ಫಿಟ್ ಆಗಿದ್ದರೆ).

ಮೀಸಲು ಆಟಗಾರರು: ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ, ರಿಂಕು ಸಿಂಗ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+