India vs Australia: ಮೊದಲ ಟೆಸ್ಟ್‌ಗೆ ರೋಹಿತ್ ಶರ್ಮಾ ಅಲಭ್ಯ: ಈತನಿಗೆ ನಾಯಕತ್ವದ ಜವಾಬ್ದಾರಿ
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವೈಟ್‌ವಾಶ್‌ಗೆ ಒಳಗಾದ ಭಾರತ ಆಸ್ಟ್ರೇಲಿಯಾಗೆ ತರಳುತ್ತಿದ್ದು ಐದು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯನ್ನು ಆಡಲಿದೆ. ಮೊದಲ ಟೆಸ್ಟ್ ನವೆಂಬರ್ 22ರಂದು ಪರ್ತ್‌ನಲ್ಲಿ ಆರಂಭವಾಗಲಿದೆ. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿ ಭಾರತಕ್ಕೆ ಮಹತ್ವದ್ದಾಗಿದೆ. ಮೊದಲ ಟೆಸ್ಟ್‌ಗೆ ನಾಯಕ ರೋಹಿತ್ ಶರ್ಮಾ ಅಲಭ್ಯರಾಗಿದ್ದು ಭಾರತ ತಂಡದ ಚಿಂತೆ ಹೆಚ್ಚಿಸಿದೆ.
ವೈಯಕ್ತಿಕ ಕಾರಣಗಳಿಗಾಗಿ ನಾಯಕ ರೋಹಿತ್ ಶರ್ಮಾ ಮೊದಲ ಟೆಸ್ಟ್‌ನಿಂದ ಹೊರಗುಳಿಯಲಿದ್ದಾರೆ. ಅವರ ಬದಲಾಗಿ ಮೊದಲ ಟೆಸ್ಟ್‌ನಲ್ಲಿ ಜಸ್ಪ್ರೀತ್ ಬುಮ್ರಾ ನಾಯಕತ್ವ ವಹಿಸಿಕೊಳ್ಳಲಿದ್ದು, ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಭಾನುವಾರ ಮತ್ತು ಸೋಮವಾರ ಎರಡು ಬ್ಯಾಚ್‌ಗಳಲ್ಲಿ ಭಾರತ ತಂಡ ಆಸ್ಟ್ರೇಲಿಯಾಗೆ ಪ್ರಯಾಣಿಸಲಿದೆ. ತಂಡದ ಜೊತೆ ರೋಹಿತ್ ಶರ್ಮಾ ಆಸ್ಟ್ರೇಲಿಯಾಗೆ ಪ್ರಯಾಣಿಸುವುದಿಲ್ಲ ಎಂದು ವರದಿಯಾಗಿದೆ.

ರೇವ್ ಸ್ಪೋರ್ಟ್ಜ್ ವರದಿ ಮಾಡಿರುವ ಪ್ರಕಾರ, ರೋಹಿತ್ ಶರ್ಮಾ ಭಾರತ ತಂಡದ ಜೊತೆ ಪ್ರಯಾಣಿಸುವುದಿಲ್ಲ. ಸದ್ಯಕ್ಕೆ ಅವರು ಯಾವಾಗ ಆಸ್ಟ್ರೇಲಿಯಾಗೆ ಯಾವಾಗ ಹೋಗುತ್ತಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ ಎಂದು ಹೇಳಿದೆ. ಸೋಮವಾರ ಆಸ್ಟ್ರೇಲಿಯಾಗೆ ಹೋಗುವ ತಂಡದ ಜೊತೆ ಹೋಗುವ ಮುನ್ನ ಕೋಚ್ ಗೌತಮ್ ಗಂಭೀರ್ ಮಾಧ್ಯಮಗಳ ಜೊತೆ ಮಾತನಾಡಲಿದ್ದಾರೆ ಎಂದು ವರದಿಯು ತಿಳಿಸಿದೆ.
ಭಾರತಕ್ಕೆ ಗೆಲುವು ಅನಿವಾರ್ಯ
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿ ಎಲ್ಲಾ ಮೂರು ಪಂದ್ಯಗಳನ್ನು ಸೋತ ಬಳಿಕ ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆಲ್ಲುವುದು ಭಾರತಕ್ಕೆ ಅನಿವಾರ್ಯವಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಲು ಭಾರತ ಕನಿಷ್ಠ ನಾಲ್ಕು ಪಂದ್ಯಗಳನ್ನು ಗೆದ್ದು ಒಂದು ಪಂದ್ಯವನ್ನು ಡ್ರಾ ಮಾಡಿಕೊಳ್ಳಬೇಕಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಭಾರತ ಒಂದು ಪಂದ್ಯ ಸೋತರು ಫೈನಲ್ ಹಾದಿ ಕಠಿಣವಾಗಲಿದೆ.
ಇದೀಗ ರೋಹಿತ್ ಶರ್ಮಾ ಮೊದಲನೇ ಟೆಸ್ಟ್‌ನಲ್ಲಿ ಆಡದೇ ಇರುವುದು ತಂಡಕ್ಕೆ ತಲೆನೋವಾಗಿದೆ. ಅವರ ಬದಲಾಗಿ ಅಭಿಮನ್ಯು ಈಶ್ವರನ್ ಅವಕಾಶ ಪಡೆಯುವ ಸಾಧ್ಯತೆ ಇದೆ. ಯುವ ಆಟಗಾರರು ಮತ್ತು ಅನುಭವಿಗಳು ತಂಡದಲ್ಲಿದ್ದು, ಮುಕೇಶ್ ಕುಮಾರ್, ನವದೀಪ್ ಸೈನಿ ಮತ್ತು ಖಲೀಲ್ ಅಹ್ಮದ್ ಮೀಸಲು ಆಟಗಾರರಾಗಿದ್ದಾರೆ.
ಟೆಸ್ಟ್ ಸರಣಿಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪ ನಾಯಕ), ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಶಮಿ, ಅಭಿಮನ್ಯು ಈಶ್ವರನ್, ಶುಭಮನ್ ಗಿಲ್, ರವೀಂದ್ರ ಜಡೇಜಾ, ಯಶಸ್ವಿ ಜೈಸ್ವಾಲ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ವಿರಾಟ್ ಕೊಹ್ಲಿ, ಪ್ರಸಿದ್ಧ್ ಕೃಷ್ಣ, ರಿಷಭ್ ಪಂತ್ (ವಿಕೆಟ್ ಕೀಪರ್) , ಕೆಎಲ್ ರಾಹುಲ್, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್.












Click it and Unblock the Notifications