Ind vs Aus: ರೋಹಿತ್‌ಗೆ ವಿಶ್ರಾಂತಿ, ಬುಮ್ರಾಗೆ ನಾಯಕತ್ವ; ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಕನ್ನಡಿಗನಿಗೆ ಸಿಕ್ತು ಅವಕಾಶ

ಸಿಡ್ನಿಯಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಕೊನೆಯ ಟೆಸ್ಟ್‌ನಲ್ಲಿ ನಾಯಕ ರೋಹಿತ್ ಶರ್ಮಾ ಪ್ಲೇಯಿಂಗ್ ಇಲೆವೆನ್‌ನಿಂದ ಹೊರಗುಳಿದಿದ್ದಾರೆ. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದ್ದ ಜಸ್ಪ್ರೀತ್ ಬುಮ್ರಾ ಸಿಡ್ನಿ ಟೆಸ್ಟ್‌ನಲ್ಲಿ ಮತ್ತೆ ನಾಯಕತ್ವ ವಹಿಸಿಕೊಂಡಿದ್ದಾರೆ. ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಸಿಡ್ನಿ ಟೆಸ್ಟ್‌ನಲ್ಲಿ ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ನಾಯಕ ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಿದ್ದು ಅವರ ಬದಲಾಗಿ ಶುಭಮನ್ ಗಿಲ್ ತಂಡಕ್ಕೆ ವಾಪಸಾಗಿದ್ದಾರೆ. ಬೆನ್ನುನೋವಿನಿಂದ ಬಳಲುತ್ತಿದ್ದ ಆಕಾಶ್ ದೀಪ್‌ಗೆ ವಿಶ್ರಾಂತಿ ನೀಡಲಾಗಿದ್ದು ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಅವಕಾಶ ನೀಡಲಾಗಿದೆ.

Rohit sharma rested prasidh krishna in jasprit bumrah captain india batting vs australia

ರೋಹಿತ್ ಬಗ್ಗೆ ಬುಮ್ರಾ ಹೇಳಿದ್ದೇನು?

ಸಿಡ್ನಿ ಟೆಸ್ಟ್‌ನಲ್ಲಿ ರೋಹಿತ್ ಶರ್ಮಾರನ್ನು ಕೈಬಿಟ್ಟ ಬಗ್ಗೆ ನಾಯಕ ಜಸ್ಪ್ರೀತ್ ಬುಮ್ರಾ ಮಾತನಾಡಿದ್ದು, "ನಮ್ಮ ನಾಯಕ ಈ ಟೆಸ್ಟ್‌ನಲ್ಲಿ ವಿಶ್ರಾಂತಿ ಪಡೆಯುವ ಮೂಲಕ ತಮ್ಮ ನಾಯಕತ್ವವನ್ನು ತೋರಿಸಿದ್ದಾರೆ. ಇದು ತಂಡದಲ್ಲಿರುವ ಒಗ್ಗಟ್ಟನ್ನು ತೋರಿಸುತ್ತದೆ. ವೈಯಕ್ತಿಕವಾಗಿ ಯಾವುದೇ ಸ್ವಾರ್ಥವಿಲ್ಲ, ತಂಡದ ಹಿತಾಸಕ್ತಿಗಾಗಿ ನಾವು ಏನಾದರೂ ಮಾಡುತ್ತೇನೆ" ಎಂದು ಹೇಳಿದರು. ಈ ಮೂಲಕ ರೋಹಿತ್ ಶರ್ಮಾ ಪಂದ್ಯದ ಹೊರಗುಳಿಯುವ ಬಗ್ಗೆ ತಾವೇ ನಿರ್ಧಾರ ಮಾಡಿದ್ದಾರೆ ಎನ್ನುವ ವಿಚಾರ ಖಚಿತಪಡಿಸಿದರು.

ನಾಯಕ ರೋಹಿತ್ ಶರ್ಮಾ 2024ರಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಗಿದ್ದಾರೆ. ಅವರ ವೈಫಲ್ಯ ತಂಡದ ಮೇಲೆ ಕೂಡ ಪರಿಣಾಮ ಬೀರಿತ್ತು. ಸಿಡ್ನಿ ಟೆಸ್ಟ್‌ಗೆ ಮೊದಲು ಭಾರತ ಕೊನೆಯದಾಗಿ ಆಡಿರುವ 7 ಟೆಸ್ಟ್‌ಗಳಲ್ಲಿ ಕೇವಲ ಒಂದು ಪಂದ್ಯ ಮಾತ್ರ ಗೆದ್ದಿದೆ ಅದರಲ್ಲೂ ಬುಮ್ರಾ ನಾಯಕತ್ವ ವಹಿಸಿಕೊಂಡಿದ್ದರು. ಉಳಿದ ಆರರಲ್ಲಿ 5 ಪಂದ್ಯ ಸೋತಿದ್ದು ಒಂದು ಡ್ರಾನಲ್ಲಿ ಅಂತ್ಯವಾಗಿದೆ.

ರೋಹಿತ್ ಬದಲಾಗಿ ಯುವ ಬ್ಯಾಟರ್ ಶುಭಮನ್ ಗಿಲ್ ಅವಕಾಶ ಪಡೆದಿದ್ದಾರೆ. ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಕನಸು ಜೀವಂತವಾಗಿರಿಸಲು ಭಾರತ ಈ ಪಂದ್ಯ ಗೆಲ್ಲಬೇಕಿದೆ. ಬಳಿಕ ಶ್ರೀಲಂಕಾ ಏನಾದರೂ ಆಸ್ಟ್ರೇಲಿಯಾ ವಿರುದ್ದ ಸರಣಿಯನ್ನು 2-0 ಅಂತರದಲ್ಲಿ ಗೆದ್ದರೆ ಮಾತ್ರ ಭಾರತಕ್ಕೆ ಫೈನಲ್ ತಲುಪುವ ಅವಕಾಶವಿರುತ್ತದೆ.

ಉಭಯ ತಂಡಗಳ ಆಡುವ ಬಳಗ

ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ (ನಾಯಕ), ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ: ಸ್ಯಾಮ್ ಕೋನ್‌ಸ್ಟಾಸ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶಾನೆ, ಸ್ಟೀವನ್ ಸ್ಮಿತ್, ಟ್ರಾವಿಸ್ ಹೆಡ್, ಬ್ಯೂ ವೆಬ್‌ಸ್ಟರ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಸ್ಕಾಟ್ ಬೋಲ್ಯಾಂಡ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+