Rohit Sharma: ರೋಹಿತ್ ಶರ್ಮಾ ನಿವೃತ್ತಿ ವದಂತಿ, ಬ್ಯಾಟಿಂಗ್ ಕೋಚ್ ಮಹತ್ವದ ಹೇಳಿಕೆ

Rohit Sharma: ಇದೀಗ ಸದ್ಯ ಭಾರತ-ಇಂಗ್ಲೆಂಡ್ ತಂಡಗಳ ನಡುವೆ ಏಕದಿನ ಸರಣಿ ನಡೆಯುತ್ತಿದೆ. ಈ ನಡುವೆ ಟೀಮ್ ಇಂಡಿಯಾ ಹಿರಿಯ ಆಟಗಾರ, ಹಿಟ್‌ ಮ್ಯಾನ್ ರೋಹಿತ್ ಶರ್ಮಾ ಅವರ ನಿವೃತ್ತಿ ಕುರಿತ ಸುದ್ದಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ.

ಇಂಗ್ಲೆಂಡ್ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ವೈಫಲ್ಯವು ಕ್ರಿಕೆಟ್ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇದರ ಬೆನ್ನಲ್ಲೇ ಬಿಸಿಸಿಐ ಆಯ್ಕೆ ಸಮಿತಿಯು ರೋಹಿತ್ ಅವರ ಭವಿಷ್ಯದ ಕುರಿತು ಮಹತ್ವದ ಸಂದೇಶ ರವಾನಿಸಿದೆ ಎಂಬ ವರದಿಗಳು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ.

Rohit Sharma Retirement Rumours BCCI Selection Committee s Big Decision Batting Coach Backs Hitman

ರೋಹಿತ್ ಶರ್ಮಾ ನಿವೃತ್ತಿ?

ಅಜಿತ್ ಅಗರ್ಕರ್ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು 2027ರ ಏಕದಿನ ವಿಶ್ವಕಪ್‌ಗೆ ರೋಹಿತ್ ಶರ್ಮಾ ಅವರನ್ನು ಪರಿಗಣಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದೆ ಎನ್ನಲಾಗಿದೆ. ಮುಂಬರುವ ದಿನಗಳಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರಿಗೆ ಹೆಚ್ಚಿನ ಅವಕಾಶ ನೀಡಲು ಮ್ಯಾನೇಜ್‌ಮೆಂಟ್ ಆಸಕ್ತಿ ಹೊಂದಿದೆ ಎಂದು ಹೇಳಲಾಗುತ್ತಿದೆ.

ರೋಹಿತ್ ಪರ ಬ್ಯಾಟ್‌ ಬೀಸಿದ ಬ್ಯಾಟಿಂಗ್ ಕೋಚ್

ಒಂದೆಡೆ ಆಯ್ಕೆ ಸಮಿತಿಯ ಕಠಿಣ ನಿರ್ಧಾರದ ವರದಿಗಳು ಸದ್ದು ಮಾಡುತ್ತಿದ್ದರೆ, ಮತ್ತೊಂದೆಡೆ ಭಾರತ ತಂಡದ ಬ್ಯಾಟಿಂಗ್ ಕೋಚ್ ಸಿತಾಂಶು ಕೊಟಕ್ ಅವರು ರೋಹಿತ್ ಶರ್ಮಾ ಅವರ ಬೆಂಬಲಕ್ಕೆ ನಿಂತಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ರೋಹಿತ್ ಅವರಂತಹ ಅನುಭವಿ ಮತ್ತು ದಿಗ್ಗಜ ಆಟಗಾರನ ಮೇಲೆ ಯಾವುದೇ ಒತ್ತಡ ಹೇರಲು ಸಾಧ್ಯವಿಲ್ಲ. ಮೊದಲ ಎರಡು ಪಂದ್ಯಗಳಲ್ಲಿ ಅವರು ರನ್ ಗಳಿಸದಿದ್ದರೂ, ಅವರ ಸಾಮರ್ಥ್ಯವನ್ನು ಪ್ರಶ್ನಿಸುವಂತಿಲ್ಲ. ಅವರು ಉತ್ತಮ ಲಯಕ್ಕೆ ಮರಳುವ ಮುನ್ಸೂಚನೆ ನೀಡಿದ್ದರೂ ದುರಾದೃಷ್ಟವಶಾತ್ ಔಟಾದರು,' ಎಂದು ಸಮರ್ಥಿಸಿಕೊಂಡಿದ್ದಾರೆ.

ರೋಹಿತ್ ಲಯ ಕಳೆದುಕೊಳ್ಳಲು ಕಾರಣ ಏನು?

'ರೋಹಿತ್ ಅವರ ಬ್ಯಾಟಿಂಗ್ ತಡಕಾಟಕ್ಕೆ ಪಿಚ್‌ ಕೂಡ ಕಾರಣವಾಗಿರಬಹುದು. ಬೌನ್ಸ್ ಕಾರಣದಿಂದಾಗಿ ರೋಹಿತ್ ತಮ್ಮ ಸಹಜ ಶೈಲಿಯ ಶಾಟ್‌ಗಳನ್ನು ಆಡಲು ಕಷ್ಟಪಟ್ಟಿರಬಹುದು. ಶುಭಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಅವರಿಗೆ ಲಭಿಸಿದಂತಹ ಸುಲಭ ಎಸೆತಗಳು ರೋಹಿತ್‌ಗೆ ಸಿಗಲಿಲ್ಲ. ಆದರೆ ಲಾರ್ಡ್ಸ್‌ನಲ್ಲಿ ನಡೆಯಲಿರುವ ಮುಂದಿನ ಪಂದ್ಯದಲ್ಲಿ ರೋಹಿತ್ ಅವರ ರನ್ ಗಳಿಸುವ ಹಸಿವು ಮತ್ತು ಭಿನ್ನ ಆಟವನ್ನು ನೋಡಬಹುದು,' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮತ್ತೊಂದೆಡೆ ಇತ್ತೀಚೆಗಷ್ಟೇ ಟೀಮ್ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಅವರು ರೋಹಿತ್ ಶರ್ಮಾ, ವಿರಾಟ್‌ ಕೊಹ್ಲಿ ಅವರು ತಂಡಕ್ಕೆ ಆಧಾರಸ್ತಂಭವಿದ್ದಂತೆ. ಅವರ ಲಭ್ಯತೆ ನಮಗೆ ತುಂಬಾ ಅಗತ್ಯತೆಯಿದೆ ಎಂದು ಹೇಳಿದ್ದರು. ಮತ್ತೊಂದೆಡೆ ಆಯ್ಕೆ ಸಮಿತಿ ರೋಹಿತ್ ಅವರಿಗ ಗೇಟ್‌ಪಾಸ್‌ ನೀಡಲು ಚಿಂತನೆ ನಡೆಸಿದೆ ಎನ್ನುವ ವರದಿಗಳು ಹರಿದಾಡುತ್ತಿವೆ. ಇದರ ಬೆನ್ನಲ್ಲೇ ರೋಹಿತ್ ಶರ್ಮಾ ಅವರು ಲಯ ಕಳೆದುಕೊಂಡಿದ್ದಾರೆ. ಸರಿಯಾಗಿ ಬ್ಯಾಟಿಂಗ್ ಕಡೆಗೆ ಗಮನಹರಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ.

ಇದೀಗ ಸಾಮಾಜಿಕ ಜಾಲತಾಣದಲ್ಲಿ ಇದರದ್ದೇ ಚರ್ಚೆ ನಡೆಯುತ್ತಿದ್ದು, ತಂಡದಲ್ಲಿ ಹಿರಿಯ ಆಟಗಾರರು ಇರಬೇಕಾಗುತ್ತದೆ. ಯಾಕಂದ್ರೆ ಬರಿ ಯುವಕರನ್ನೇ ತುಂಬಿಸಿಕೊಂಡು ಯಶಸ್ಸು ಕಾಣಲು ಸಾಧ್ಯವಿಲ್ಲ. ಅನುಭವಿ ಆಟಗಾರರ ಅಗತ್ಯವಿದೆ ಎಂದು ನೆಟ್ಟಿಗರು ಹೇಳುವ ಮೂಲಕ ರೋಹಿತ್ ಪರ ಬ್ಯಾಟ್ ಬೀಸುತ್ತಿದ್ದಾರೆ.

ಒಟ್ಟಿನಲ್ಲಿ ಹೇಳುವುದಾದರೆ ಬಿಸಿಸಿಐ ಭವಿಷ್ಯದ ದೃಷ್ಟಿಯಿಂದ ಯುವ ಆಟಗಾರರಿಗೆ ಮಣೆ ಹಾಕಲು ಯೋಚಿಸುತ್ತಿದ್ದರೆ, ಟೀಮ್ ಮ್ಯಾನೇಜ್‌ಮೆಂಟ್ ಮಾತ್ರ ಹಿರಿಯ ಆಟಗಾರನ ಸಾಮರ್ಥ್ಯದ ಮೇಲೆ ನಂಬಿಕೆ ಇಟ್ಟಿದೆ. ಲಾರ್ಡ್ಸ್ ಅಂಗಳದಲ್ಲಿ ನಡೆಯಲಿರುವ ಮುಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಭರ್ಜರಿ ಪ್ರದರ್ಶನ ನೀಡಿ ಟೀಕಾಕಾರರಿಗೆ ಬ್ಯಾಟ್ ಮೂಲಕ ಉತ್ತರ ನೀಡುತ್ತಾರಾ ಎಂದು ಕಾದುನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+